AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ

Kanhaiya Kumar: ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ.

ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ
ಕನ್ಹಯ್ಯಾ ಕುಮಾರ್​​ಗೆ ಸ್ವಾಗತ ಕೋರಿರುವ ಫಲಕ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 28, 2021 | 11:55 AM

Share

ದೆಹಲಿ: ಜೆಎನ್​​ಯು ವಿದ್ಯಾರ್ಥಿ ಸಂಘಟನೆಯ ನಾಯಕನಾಗಿದ್ದ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ. ಕನ್ಹಯ್ಯಾ ಕುಮಾರ್ ಅವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ನಂತರ ಅವರು ತಮ್ಮ ಊರು ಬಿಹಾರದ ಬೇಗುಸರೈಯಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು. ಜೆಎನ್​​ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರು ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಗಲ್ಲುಶಿಕ್ಷೆಗೊಳಗಾದ ಅಫ್ಜಲ್ ಗುರು ಸಾವಿನ ಒಂದನೇ ವರ್ಷ ನಿಮಿತ್ತ ನಡೆದ ಸಮಾರಂಭದಲ್ಲಿ “ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದಲ್ಲಿ ಜೈಲುಶಿಕ್ಷೆ ಅನುಭವಿಸಿದ್ದರು. ಗುಜರಾತ್‌ನಲ್ಲಿ ವಡ್ಗಾಮ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾದ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವುದರಿಂದ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನ ಪಾತ್ರವಹಿಸಲಿದ್ದಾರೆ.

ವಕೀಲ ಮತ್ತು ಮಾಜಿ ಪತ್ರಕರ್ತರಾದ ಮೇವಾನಿ, ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಬೆಂಬಲ ನೆಲೆಯಾದ ಪರಿಶಿಷ್ಟ ಜಾತಿ ಸಮುದಾಯವನ್ನು ತಲುಪುತ್ತಿರುವ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರುತ್ತಿದ್ದಾರೆ.ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿ ದಲಿತ ಸಮುದಾಯಕ್ಕೆ ಸೇರಿದ ಚರಣ್​​ಜಿತ್ ಸಿಂಗ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು.

ಕಾಂಗ್ರೆಸ್ ನ ಈ ನಿರ್ಧಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಮೇವಾನಿ ಚರಣ್​​ಜಿತ್ ಸಿಂಗ್ ಅವರನ್ನು ಪಂಜಾಬ್ ಸಿಎಂ ಆಗಿ ನೇಮಿಸುವ ನಿರ್ಧಾರವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನೀಡಿದ ಸಂದೇಶವಾಗಿದೆ. ಇದು ಕೇವಲ ದಲಿತರು ಮಾತ್ರವಲ್ಲದೆ ಎಲ್ಲಾ ಉಪಜಾತಿಗಳ ನಡುವೆ ತೀವ್ರ ಪರಿಣಾಮವನ್ನು ಬೀರುತ್ತದೆ. ದಲಿತರಿಗೆ ಸಂಬಂಧಪಟ್ಟಂತೆ ಈ ನಡೆಯು ಕೇವಲ ಅದ್ಭುತವಲ್ಲ ಹಿತವಾದದ್ದು ಕೂಡ ಎಂದಿದ್ದರು.

ಮೂಲಗಳ ಪ್ರಕಾರ ಕನ್ಹಯ್ಯಾ ಕುಮಾರ್ ಅವರು ಈಗಾಗಲೇ ಎರಡು ವಾರಗಳಲ್ಲಿ ಎರಡು ಬಾರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: Explainer | ದೇಶದ್ರೋಹ ಪ್ರಕರಣ: ಐಪಿಸಿ ಹೇಳುವುದೇನು? ಸುಪ್ರೀಂಕೋರ್ಟ್ ಹೇಗೆ ವ್ಯಾಖ್ಯಾನಿಸಿದೆ?

ಇದನ್ನೂ ಓದಿ: ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ

(Posters welcoming Kanhaiya Kumar to the party were put up outside the Congress office in Delhi )

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?