West Bengal Violence: ಎರಡು ದಿನಗಳಲ್ಲಿ 14 ಮಂದಿ ಸಾವು, ಹಿಂಸಾಚಾರದಿಂದ ದೂರವಿರಿ ಎಂದು ರಾಜಕೀಯ ಪಕ್ಷಗಳಿಗೆ ಮಮತಾ ಬ್ಯಾನರ್ಜಿ ಮನವಿ

Post Poll violence: ಬಿಜೆಪಿ ಮಂಗಳವಾರ ತನ್ನ ಆರು ಕಾರ್ಯಕರ್ತರು ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದು ಸಾವಿಗೀಡಾದವರ ಸಂಖ್ಯೆ 9 ಎಂದಿದೆ. ಅದೇ ಹೊತ್ತಲ್ಲಿ , ಟಿಎಂಸಿ ನಾಲ್ಕು ಜನರನ್ನು ಕಳೆದುಕೊಂಡಿದೆ ಎಂದು ಹೇಳಿದೆ. ಸೋಮವಾರ ಇಂಡಿಯನ್ ಸೆಕ್ಯುಲರ್ ಫ್ರಂಟ್​ನ ನಾಯಕನ ಹತ್ಯೆಯಾಗಿತ್ತು.

West Bengal Violence: ಎರಡು ದಿನಗಳಲ್ಲಿ 14 ಮಂದಿ ಸಾವು, ಹಿಂಸಾಚಾರದಿಂದ ದೂರವಿರಿ ಎಂದು ರಾಜಕೀಯ ಪಕ್ಷಗಳಿಗೆ ಮಮತಾ ಬ್ಯಾನರ್ಜಿ ಮನವಿ
ಹಿಂಸಾಚಾರ ನಡೆದ ಸ್ಥಳಗಳಿಗೆ ಜೆ.ಪಿ. ನಡ್ಡಾ ಭೇಟಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಟಿಎಂಸಿ ನಡುವೆ ಸಂಘರ್ಷ ನಡೆಯುತ್ತಿರುವ ಹೊತ್ತಿನಲ್ಲಿಯೇ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ. ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಮಮತಾ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಎರಡನೇ ಆದ್ಯತೆ. ಯಾವುದೇ ರೀತಿಯ ಹಿಂಸಾಚಾರಗದಿಂದ ಎಲ್ಲ ರಾಜಕೀಯ ಪಕ್ಷಗಳು ದೂರವಿರಿ ಎಂದು ನಾನು ಮನವಿ ಮಾಡುತ್ತೇನೆ. ಪರಿಸ್ಥಿತಿ ನಿಭಾಯಿಸಲು ನಾನು ವಿಶೇಷ ಅಧಿಕಾರಿಗಳನ್ನು ನಿಯೋಜಿಸುತ್ತಿದ್ದೇನೆ. ಈ ಪರಿಸ್ಥಿತಿಯನ್ನು ನಾವು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದಿದ್ದಾರೆ.

ಕೊವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಮೊದಲ ಆದ್ಯತೆ. ನಾನೀಗ ನಬನ್ನಾಗೆ ಹೋಗಿ ಕೊವಿಡ್ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆ ನಡೆಸಲಿದ್ದೇನೆ. ಮೂರು ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ನಾವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ತಿಳಿಸುತ್ತೇನೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಮತಾ ಹೇಳಿದ್ದಾರೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ಎರಡು ದಿನಗಳಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ. ಈ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಿ ಎಂದು ಮಂಗಳವಾರ ತುರ್ತು ಸಭೆ ಕರೆದ ಮಮತಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಟಿಎಂಸಿ ಮತ್ತು ಬಿಜೆಪಿ ನಡುವಿನ ಹಿಂಸಾಚಾರವು ಬುಧವಾರ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಮೊದಲು ಕೊನೆಗೊಳ್ಳಬೇಕು ಮತ್ತು ಅಗತ್ಯವಿದ್ದರೆ ಶಾಂತತೆಯನ್ನು ಪುನಃಸ್ಥಾಪಿಸಲು ಜನರನ್ನು ಬಂಧಿಸಬೇಕು ಎಂದು ಬ್ಯಾನರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ಟಿಎಂಸಿ ಸರ್ಕಾರದ ಮೇಲೆ ಒತ್ತಡ ಹೇರಿದೆ, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಪಾಲ ಜಗದೀಪ್ ಧನ್ಕರ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಕರೆ ಮಾಡಿ ವರದಿ ಕೇಳಿದ್ದಾರೆ . ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಮಂಗಳವಾರ ಬಂಗಾಳಕ್ಕೆ ಆಗಮಿಸಿ ಕೆಲವು ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ. ಈ ಹಿಂಸಾಚಾರವು ಅವರ ಗೆಲವಿಗೆ ಕಳಂಕ ತರಬಹುದು ಎಂಬ ಆತಂಕ ಅವರಲ್ಲಿದೆ.ಅವರು ಕೆಲವು ವಿಡಿಯೊಗಳನ್ನು ಕಾರ್ಯದರ್ಶಿಗಳನ್ನು ಮುಖ್ಯ ಕಾರ್ಯದರ್ಶಿಯೊಂದಿಗೆ ಹಂಚಿಕೊಂಡಿದ್ದು ಇವುಗಳ ಸತ್ಯಾಸತ್ಯತೆ ಪರಿಶೀಲಸಿ ಅದಕ್ಕೆ ತಕ್ಕಂತೆ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.

ಬಿಜೆಪಿ ಮಂಗಳವಾರ ತನ್ನ ಆರು ಕಾರ್ಯಕರ್ತರು ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದು ಸಾವಿಗೀಡಾದವರ ಸಂಖ್ಯೆ 9 ಎಂದಿದೆ. ಅದೇ ಹೊತ್ತಲ್ಲಿ , ಟಿಎಂಸಿ ನಾಲ್ಕು ಜನರನ್ನು ಕಳೆದುಕೊಂಡಿದೆ ಎಂದು ಹೇಳಿದೆ. ಸೋಮವಾರ ಇಂಡಿಯನ್ ಸೆಕ್ಯುಲರ್ ಫ್ರಂಟ್​ನ ನಾಯಕನ ಹತ್ಯೆಯಾಗಿತ್ತು.

ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ಒಬ್ಬರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಬಿರ್ಭುಮ್​ನ ನ್ಯಾನೂರ್‌ನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳದ ವರದಿಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ನಿನ್ನೆಯಿಂದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಇತರ ಕೆಲವು ಮಹಿಳೆಯರನ್ನು ಕಿರುಕುಳ ನೀಡಿದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕೆಲವು ಪಕ್ಷದ ಸದಸ್ಯರು ಅದನ್ನು ಫಾರ್ವರ್ಡ್ ಮಾಡುತ್ತಿದ್ದಾರೆ. ನಾವು ಮಾಹಿತಿಯನ್ನು ಪರಿಶೀಲಿಸಿದ್ದೇವೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಮಾತನಾಡಿದ್ದೇವೆ. ಅಂತಹ ಯಾವುದೇ ಘಟನೆಯ ಬಗ್ಗೆ ಅವರಿಗೆ ತಿಳಿದಿಲ್ಲ. ಇದು ನಕಲಿ ಸುದ್ದಿ ಎಂದು ನಾನು ಎಲ್ಲರಿಗೂ ತಿಳಿಸುತ್ತೇನೆ. ಸಣ್ಣ ಘಟನೆಗಳ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬರುತ್ತಿವೆ. ನಾವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು . ಬಿರ್ಭುಮ್ ಎಸ್​ಪಿ ಎನ್. ಎನ್. ತ್ರಿಪಾಠಿ ಹೇಳಿದ್ದಾರೆ.

ಇದನ್ನೂ ಓದಿ:  West Bengal Violence: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ- ಬಿಜೆಪಿ ನಡುವೆ ಸಂಘರ್ಷ; ಮನೆಗಳು ಧ್ವಂಸ, ಹಲವಾರು ಮಂದಿ ಸಾವು

(Post poll violence at west Bengal at least 14 lives in two days CM Mamata Banerjee calls for action)

Read Full Article

Click on your DTH Provider to Add TV9 Kannada