AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM KISAN Scheme: ರೈತರ ಖಾತೆಗೆ ಬಂತು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣ, ಚೆಕ್ ಮಾಡುವುದು ಹೇಗೆ?

PM Kisan Samman Nidhi Yojana: ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಲ್ಲಿ ಸರ್ಕಾರವು ಸಣ್ಣ ಮತ್ತು ಮಧ್ಯಮವರ್ಗದ ರೈತರಿಗೆ ವರ್ಷಕ್ಕೆ 6,000 ರೂಗಳನ್ನು ತಮ್ಮ ಖಾತೆಗಳಲ್ಲಿ ವರ್ಗಾಯಿಸುತ್ತದೆ. ಸರ್ಕಾರದಿಂದ ರೈತರಿಗೆ ಈ ಹಣಕಾಸಿನ ನೆರವು ಮೂರು ಕಂತುಗಳಲ್ಲಿ ಪ್ರತಿಕಂತಿಗೆ 2000 ರೂಪಾಯಿಯಂತೆ ಬರುತ್ತದೆ.

PM KISAN Scheme: ರೈತರ ಖಾತೆಗೆ ಬಂತು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣ, ಚೆಕ್ ಮಾಡುವುದು ಹೇಗೆ?
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ
Follow us
ರಶ್ಮಿ ಕಲ್ಲಕಟ್ಟ
|

Updated on:May 14, 2021 | 1:34 PM

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PMKSNY) ಯೋಜನೆಯ ಫಲಾನುಭವಿಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ 2,000ರೂ ವರ್ಗಾವಣೆ ಮಾಡಿದ್ದಾರೆ. 2021-22ನೇ ವರ್ಷದ ಮೊದಲ ಕಂತು ಇದಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪಿಎಂ ಕಿಸಾನ್ ಯೋಜನೆಯ ಎಂಟನೇ ಕಂತು ಬಿಡುಗಡೆ ಮಾಡಿದ್ದಾರೆ. ಈ ಕಂತಿನ ಭಾಗವಾಗಿ 19,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು 9.5 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಯೋಜನೆಯ ಏಳನೇ ಕಂತು 2020 ಡಿಸೆಂಬರ್ 25ರಂದು ಬಿಡುಗಡೆ ಮಾಡಲಾಗಿತ್ತು.

ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಲ್ಲಿ ಸರ್ಕಾರವು ಸಣ್ಣ ಮತ್ತು ಮಧ್ಯಮವರ್ಗದ ರೈತರಿಗೆ ವರ್ಷಕ್ಕೆ 6,000 ರೂಗಳನ್ನು ತಮ್ಮ ಖಾತೆಗಳಲ್ಲಿ ವರ್ಗಾಯಿಸುತ್ತದೆ. ಸರ್ಕಾರದಿಂದ ರೈತರಿಗೆ ಈ ಹಣಕಾಸಿನ ನೆರವು ಮೂರು ಕಂತುಗಳಲ್ಲಿ ಪ್ರತಿಕಂತಿಗೆ 2000 ರೂಪಾಯಿಯಂತೆ ಬರುತ್ತದೆ. ಯೋಜನೆಯಡಿ 2000 ರ ಮೊದಲ ಕಂತು ಏಪ್ರಿಲ್ 1 ರಿಂದ ಜುಲೈ 31 ರವರೆಗೆ ಬರುತ್ತದೆ. ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಮತ್ತು ಮೂರನೇ ಕಂತು ಡಿಸೆಂಬರ್‌1 ರಿಂದ ಮಾರ್ಚ್ 31 ರವರೊಳಗೆ ಬರುತ್ತದೆ.

2 ಹೆಕ್ಟೇರ್​ವರೆಗೆ ಒಟ್ಟು ಭೂ ಹಿಡುವಳಿ / ಮಾಲೀಕತ್ವವನ್ನು ಹೊಂದಿರುವ ರೈತರಿಗೆ ಈ ವಾರ್ಷಿಕ ಆರ್ಥಿಕ ನೆರವು ನೀಡಲಾಗುತ್ತದೆ. 2018 ರ ಡಿಸೆಂಬರ್‌ನಲ್ಲಿ ಪ್ರಾರಂಭವಾದಾಗಿನಿಂದ, ಈ ರೈತರಿಗೆ ಸರ್ಕಾರ ಏಳು ಕಂತುಗಳನ್ನು ನೀಡಿದೆ. ಕೇಂದ್ರ ಸರ್ಕಾರದ 75,000 ಕೋಟಿ ರೂ.ಗಳ ಯೋಜನೆಯು ದೇಶದಲ್ಲಿ ರೈತರು ಹೊಂದಿರುವ ಜಮೀನಿನ ಗಾತ್ರವನ್ನು ಪರಿಗಣಿಸದೆ 125 ದಶಲಕ್ಷ ರೈತರನ್ನು ಒಳಗೊಳ್ಳುವ ಗುರಿ ಹೊಂದಿದೆ.

PM-KSNY 8ನೇ ಕಂತಿನಲ್ಲಿ ಹಣಖಾತೆಗೆ ಬಂತಾ? ಚೆಕ್ ಮಾಡಿ https://pmkisan.gov.in ವೆಬ್ ಸೈಟಿಗೆ ಭೇಟಿನೀಡಿ ಈ ವೆಬ್ ಸೈಟ್​ನ ಹೋಮ್ ಪೇಜ್ ನಲ್ಲಿ ‘Farmer’s Corner Section’ ನೋಡಿ Beneficiary Status ಆಯ್ಕೆ ಮಾಡಿ, ಫಲಾನುಭವಿಗಳು ಇಲ್ಲಿ ತಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು. ಇಲ್ಲಿ ರೈತರ ಹೆಸರು ಮತ್ತು ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿರುವ ಮೊತ್ತ ಕಾಣುತ್ತದೆ. ಇಲ್ಲಿ ನಿಮ್ಮ ಆಧಾರ್ ಸಂಖ್ಯೆ ಅಥವಾ ಖಾತೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ‘Get data’ ಕ್ಲಿಕ್ ಮಾಡಿ.

Beneficiary Status

ಪಿಎಂ ಕಿಸಾನ್ ಮೊತ್ತದ ಸ್ಟೇಟಸ್ ಚೆಕ್ ಮಾಡುವುದು ಹೇಗೆ? https://pmkisan.gov.in ವೆಬ್ ಸೈಟಿಗೆ ಭೇಟಿನೀಡಿ. ಈ ವೆಬ್ ಸೈಟ್ ನ ಹೋಮ್ ಪೇಜ್ ನ ಬಲಭಾಗದಲ್ಲಿ ಮೇಲೆ ‘Farmer’s Corner Section’ ನೋಡಿ. ಇಲ್ಲಿ ನಿಮ್ಮ ಆಧಾರ್ ಸಂಖ್ಯೆ ಅಥವಾ ಖಾತೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ. ಈಸಂಖ್ಯೆಗಳನ್ನು ನಮೂದಿಸುವ ಮೂಲಕ ಹಣ ವರ್ಗಾವಣೆ ಆಗಿದೆಯೇಎಂಬುದನ್ನು ಚೆಕ್ ಮಾಡಬಹುದು. ಇಲ್ಲಿ ಪಿಎಂ ಕಿಸಾನ್ ಯೋಜನೆ 8ನೇ ಕಂತಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳೂ ಸಿಗುತ್ತವೆ.

ಇದನ್ನೂ ಓದಿ: PM KISAN 8th Installment LIVE: 9.5 ಕೋಟಿ ರೈತರ ಬ್ಯಾಂಕ್ ಖಾತೆಗೆ ₹19,000 ಕೋಟಿ ಬಿಡುಗಡೆ ಮಾಡಿದ ಮೋದಿ ಸರ್ಕಾರ

PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ

Published On - 1:33 pm, Fri, 14 May 21

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ