AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್‌ನಲ್ಲಿ ಅಮಿತ್ ಶಾ ವೀಡಿಯೊ ತಿರುಚಲಾಗಿದೆ: ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!

ಅಮಿತ್ ಶಾ ಅವರ SIR ಕುರಿತ ಹೇಳಿಕೆಗಳ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಟೀಕಿಸಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳನ್ನು ಸಂದರ್ಭದಿಂದ ಹೊರತಾಗಿ ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಜೋಶಿ, SIR ವಿಚಾರದಲ್ಲಿ ದಾಖಲೆಗಳೊಂದಿಗೆ ಸಂಸತ್‌ನಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್‌ನ ಚುನಾವಣಾ ಸೋಲುಗಳನ್ನೂ ಪ್ರಸ್ತಾಪಿಸಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಸತ್‌ನಲ್ಲಿ ಅಮಿತ್ ಶಾ ವೀಡಿಯೊ ತಿರುಚಲಾಗಿದೆ: ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!
ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!
ಭಾವನಾ ಹೆಗಡೆ
|

Updated on: Nov 07, 2026 | 10:23 AM

Share

ಮುಖ್ಯಾಂಶಗಳು

  • ಅಮಿತ್ ಶಾ ವಿಡಿಯೋ ತಿರುಚಿ ಹಂಚಿಕೆ, ರಾಹುಲ್ ಗಾಂಧಿಗೆ ಪ್ರಲ್ಹಾದ್ ಜೋಶಿ ತಿರುಗೇಟು
  • SIR ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ, ದಾಖಲೆ ಸಮೇತ ಚರ್ಚೆಗೆ ಜೋಶಿ ಸವಾಲು
  • 2014, 2019, 2024ರ ಸೋಲಿಗೆ SIR ಕಾರಣವೇ ಎಂದು ಪ್ರಶ್ನಿಸಿದ ಕೇಂದ್ರ ಸಚಿವ

ನವದೆಹಲಿ, ನವೆಂಬರ್ 07: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಂಸತ್‌ನಲ್ಲಿನ ಎರಡು ಹೇಳಿಕೆಗಳನ್ನು ಹೋಲಿಕೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಪ್ರಶ್ನೆ ಎತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯ ಕತ್ತರಿಸಿದ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಜೋಶಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಹಂಚಿಕೊಂಡಿದ್ದೇನು?

ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಅಮಿತ್ ಶಾ ಅವರ ಎರಡು ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದರು. ಕಳೆದ ವರ್ಷದ ಡಿಸೆಂಬರ್ 5ರಂದು ಸಂಸತ್‌ನಲ್ಲಿ ಮಾತನಾಡಿದ್ದ ಅಮಿತ್ ಶಾ, SIR ವಿಚಾರವನ್ನು ಸದನದಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಡೆಸುತ್ತಿರುವುದರಿಂದ ಪ್ರಶ್ನೆಗಳಿಗೆ ಸರ್ಕಾರದ ಪರವಾಗಿ ಯಾರು ಉತ್ತರಿಸುತ್ತಾರೆ ಎಂಬುದು ಅವರ ವಾದವಾಗಿತ್ತು.

ಆದರೆ, ನವೆಂಬರ್ 6ರಂದು ಮಾತನಾಡಿದ ಅಮಿತ್ ಶಾ, SIR ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ. ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಚರ್ಚೆಯ ಸವಾಲು ಹಾಕುತ್ತಿರುವುದಾದರೆ, ಅದಕ್ಕಾಗಿ ಸಂಸತ್‌ನ ವಿಶೇಷ ಅಧಿವೇಶನ ಕರೆಯಲೂ ಸಿದ್ಧರಿದ್ದೇವೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಎರಡೂ ಹೇಳಿಕೆಗಳನ್ನು ಹೋಲಿಕೆ ಮಾಡಿದ್ದ ರಾಹುಲ್ ಗಾಂಧಿ, ಬಿಜೆಪಿಯಲ್ಲಿ ಗೊಂದಲ ಉಂಟಾಗಿದೆ ಎಂದು ವ್ಯಂಗ್ಯವಾಡಿದ್ದರು.

2014, 2019, 2024ರ ಸೋಲಿನ ನೆನಪು

ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಹುಲ್ ಗಾಂಧಿ SIR ವಿಚಾರದಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಟೀಕಿಸಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ಪ್ರಕ್ರಿಯೆ ಸರಿಯಾಗಿದೆ ಎನ್ನುವ ಕಾಂಗ್ರೆಸ್, ಸೋತಾಗ ಅದೇ ಪ್ರಕ್ರಿಯೆಯನ್ನು ಪ್ರಶ್ನಿಸುತ್ತದೆ. ಇದು ಯಾವ ರೀತಿಯ ಪ್ರಜಾಪ್ರಭುತ್ವ ಎಂದು ಪ್ರಶ್ನಿಸಿದ್ದಾರೆ.

2014, 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ SIR ಇಲ್ಲದಿದ್ದರೂ ಕಾಂಗ್ರೆಸ್ ಸೋತಿದೆ. ಆ ಸೋಲಿನ ಹೊಣೆಯನ್ನು ರಾಹುಲ್ ಗಾಂಧಿ ಹೊರುತ್ತಾರೆಯೇ ಅಥವಾ ಬೇರೆಯವರ ಮೇಲೆ ಆರೋಪ ಮಾಡುತ್ತಾರೆಯೇ ಎಂದು ಜೋಶಿ ಪ್ರಶ್ನಿಸಿದ್ದಾರೆ.

ರಾಜಕೀಯ ನಾಟಕ ಮಾಡುವುದನ್ನು ಬಿಟ್ಟು ಸಂಸತ್‌ಗೆ ಬಂದು ದಾಖಲೆ ಹಾಗೂ ವಾಸ್ತವಾಂಶಗಳೊಂದಿಗೆ ಚರ್ಚೆ ನಡೆಸುವಂತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ. SIR ವಿಚಾರ ಇದೀಗ ಸಂಸತ್‌ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಪ್ರಮುಖ ರಾಜಕೀಯ ಸಂಘರ್ಷವಾಗಿ ಮಾರ್ಪಟ್ಟಿದೆ.

 ಇನ್ನಷ್ಟು  ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ