AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು, ಲಿಗ್ನೈಟ್ ಅನೀಲಿಕರಣ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಲ್ಹಾದ್ ಜೋಶಿ ಮಹತ್ವದ ಸಭೆ

ಕಲ್ಲಿದಿಲ್ಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕಲ್ಲಿದ್ದಲು, ಲಿಗ್ನೈಟ್ ಅನೀಲಿಕರಣ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಲ್ಹಾದ್ ಜೋಶಿ ಮಹತ್ವದ ಸಭೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 10, 2022 | 9:26 PM

Share

ನವದೆಹಲಿ: ಕಲ್ಲಿದಿಲ್ಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi)  ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕಲ್ಲಿದ್ದಲು ಲಿಗ್ನೈಟ್ (ಬ್ರೌನ್ ಕೋಲ್) ನಿಂದ ನವೀಕರಿಸಬಹುದಾದ ಇಂಧನ ಯೋಜನೆಗಳ ಪ್ರಸ್ತುತ ಸ್ಥಿತಿಗಳ ಕುರಿತಂತೆ ಸಭೆಯಲ್ಲಿ ಪರಿಶೀಲನೆ ನಡೆಸಿದರು. ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಲ್ಹಾದ್ ಜೋಶಿಯವರು, ವೈವಿಧ್ಯೀಕರಣ ಯೋಜನೆಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಭಾರತದ ಹವಾಮಾನಕ್ಕೆ ಅನುಗುಣವಾಗಿ, ಲಿಗ್ನೈಟ್ ಕಂಪನಿಗಳು ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಥರ್ಮಲ್ ಪವರ್ ಜೊತೆಗೆ ಕಲ್ಲಿದ್ದಲು ಗ್ಯಾಸಿಫಿಕೇಶನ್ ಯೋಜನೆ ಮಹತ್ವದ್ದು ಎಂದು ಅಧಿಕಾರಿಗಳಿಗೆ ಹೇಳಿದರು.

ನ್ಯಾಚುರಲ್ ಗ್ಯಾಸ್ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಲೆ ಇದೆ. ಹೀಗಿರುವಾಗ ಭಾರತ ಗ್ಯಾಸ್ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಹೊಂದಬೇಕು. ಕಲ್ಲಿದ್ದಲು ಮತ್ತು ಲಿಗ್ನೈಟ್​​ನಿಂದ ಗ್ಯಾಸ್ ತಯಾರಿಕೆ ಯೋಜನೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುದ್ಧ ಇಂಧನದ ಮೂಲಗಳತ್ತ ಭಾರತ ದೃಢ ಹೆಜ್ಜೆಗಳನ್ನು ಇಡುತ್ತಿದೆ. 2022 ರಲ್ಲಿ ಸೌರ ಶಕ್ತಿಯ H1 ಯೋಜನೆಯಿಂದ $4.2 ಶತಕೋಟಿ ಇಂಧನ ವೆಚ್ಚವನ್ನು ಉಳಿಸಿದೆ. ಸೌರ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯು 19.4 ಮಿಲಿಯನ್ ಟನ್ ಕಲ್ಲಿದ್ದಲಿನ ಮಿತಿ ಮೀರಿದ ಬಳಕೆಯನ್ನು ತೆಗೆದುಹಾಕಿದ್ದು, ಅಮೂಲ್ಯ ಸಂಪನ್ಮೂಲಗಳನ್ನು ಉಳಿಸಿದೆ. ಹೀಗಾಗಿ ನವೀಕರಿಸಬಹುದಾದ ಇಂಧನ ತಯಾರಿಕೆಗೆ ಮಹತ್ವದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಪ್ರಲ್ಹಾದ್ ಜೋಶಿ ಮಾತು

ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹಾಗೂ ಗೋವಿಂದ ಕಾರಜೋಳ (Govind Karjol) ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚೆ ನಡೆಸಿದರು. ರಾಜ್ಯದ ಮಹದಾಯಿ ಕುಡಿಯುವ ನೀರಿನ ಯೋಜನೆ ಮತ್ತು ಕೃಷ್ಣಾ ನದಿ ಹಾಗೂ ಭದ್ರಾ ನದಿಯ ಮೇಲ್ದಂಡೆ ಯೋಜನೆಗಳ ಸಮಸ್ಯೆಗಳ ಕುರಿತಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಾರಜೋಳ ವಿಸ್ತೃತವಾಗಿ ಚರ್ಚಿಸಿದರು. ದೆಹಲಿಯ ಪ್ರಲ್ಹಾದ್ ಜೋಶಿ ಅವರ ಸರ್ಕಾರಿ ನಿವಾಸದಲ್ಲಿಂದು ಮಹತ್ವದ ಸಭೆ ನಡೆಯಿತು.

ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ, ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದಿಂದ ಸಿಗಬೇಕಾದ ಅನುಮೋದನೆಗಳ ಬಗ್ಗೆ ಗೋವಿಂದ ಕಾರಜೋಳ ಅವರು ಶೇಖಾವತ್ ಅವರಿಗೆ ಮಾಹಿತಿ ನೀಡಿದರು. ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಮಹದಾಯಿ‌ ಕುಡಿಯುವ ನೀರಿನ ಯೋಜನೆ ಸೇರಿದಂತೆ ಅಪ್ಪರ್ ಕೃಷ್ಣಾ ಹಾಗೂ ಭದ್ರಾ ನದಿ ಯೋಜನೆಗಳ ಕುರಿತಂತೆ ಆಗಿರುವ ಸಮಸ್ಯೆಗಳನ್ನ ವಿಸ್ತೃತವಾಗಿ ಆಲಿಸಿದ ಕೇಂದ್ರ ಸಚಿವ ಶೇಖಾವತ್ ಸಕಾರಾತ್ಮಕಾವಾಗಿ ಸ್ಪಂದಿಸಿದರು. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಜಲಮಂತ್ರಾಲಯದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಇದೇ ವೇಳೆ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:23 pm, Thu, 10 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ