ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಪ್ರಲ್ಹಾದ್ ಜೋಶಿ ಮಹತ್ವದ ಮಾತುಕತೆ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 10, 2022 | 8:53 PM

ರಾಜ್ಯದ ನೀರಾವರಿ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಗೋವಿಂದ ಕಾರಜೋಳ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚೆ ನಡೆಸಿದರು.

ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಪ್ರಲ್ಹಾದ್ ಜೋಶಿ ಮಹತ್ವದ ಮಾತುಕತೆ
ಗೋವಿಂದ ಕಾರಜೋಳ, ಗಜೇಂದ್ರ ಸಿಂಗ್ ಶೇಖಾವತ್, ಪ್ರಲ್ಹಾದ್ ಜೋಶಿ
Follow us on

ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹಾಗೂ ಗೋವಿಂದ ಕಾರಜೋಳ (Govind Karjol) ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚೆ ನಡೆಸಿದರು. ರಾಜ್ಯದ ಮಹದಾಯಿ ಕುಡಿಯುವ ನೀರಿನ ಯೋಜನೆ ಮತ್ತು ಕೃಷ್ಣಾ ನದಿ ಹಾಗೂ ಭದ್ರಾ ನದಿಯ ಮೇಲ್ದಂಡೆ ಯೋಜನೆಗಳ ಸಮಸ್ಯೆಗಳ ಕುರಿತಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಾರಜೋಳ ವಿಸ್ತೃತವಾಗಿ ಚರ್ಚಿಸಿದರು. ದೆಹಲಿಯ ಪ್ರಲ್ಹಾದ್ ಜೋಶಿ ಅವರ ಸರ್ಕಾರಿ ನಿವಾಸದಲ್ಲಿಂದು ಮಹತ್ವದ ಸಭೆ ನಡೆಯಿತು.

ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ, ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದಿಂದ ಸಿಗಬೇಕಾದ ಅನುಮೋದನೆಗಳ ಬಗ್ಗೆ ಗೋವಿಂದ ಕಾರಜೋಳ ಅವರು ಶೇಖಾವತ್ ಅವರಿಗೆ ಮಾಹಿತಿ ನೀಡಿದರು. ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟರು.


ಮಹದಾಯಿ‌ ಕುಡಿಯುವ ನೀರಿನ ಯೋಜನೆ ಸೇರಿದಂತೆ ಅಪ್ಪರ್ ಕೃಷ್ಣಾ ಹಾಗೂ ಭದ್ರಾ ನದಿ ಯೋಜನೆಗಳ ಕುರಿತಂತೆ ಆಗಿರುವ ಸಮಸ್ಯೆಗಳನ್ನ ವಿಸ್ತೃತವಾಗಿ ಆಲಿಸಿದ ಕೇಂದ್ರ ಸಚಿವ ಶೇಖಾವತ್ ಸಕಾರಾತ್ಮಕಾವಾಗಿ ಸ್ಪಂದಿಸಿದರು. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಜಲಮಂತ್ರಾಲಯದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಇದೇ ವೇಳೆ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ.

ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತಮ ಅವಕಾಶ : ಪ್ರಲ್ಹಾದ್ ಜೋಶಿ

ಇಂದೋರ್‌: 2040ರ ವೇಳೆಗೆ ಭಾರತ ದೇಶದಲ್ಲಿ ತಲಾ ವಿದ್ಯುತ್ (power) ಬಳಕೆ ದ್ವಿಗುಣಗೊಳ್ಳಲಿದ್ದು, ಹೆಚ್ಚಿನ ಕಲ್ಲಿದ್ದಲು ಉತ್ಪಾದನೆಗೆ ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಕಲ್ಲಿದ್ದಲು ಗಣಿಗಾರಿಕೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕಲ್ಲಿದ್ದಲು ಸಚಿವಾಲಯ ಇಂದೋರ್‌ನಲ್ಲಿ ಇಂದು ಮೊಟ್ಟಮೊದಲ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಂಡಿತ್ತು. ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸರಕಾರ ಕಲ್ಲಿದ್ದಲು ಕ್ಷೇತ್ರವನ್ನ ಖಾಸಗಿ ವಲಯಕ್ಕೂ ಅನ್ ಲಾಕ್ ಮಾಡುವ ಮೂಲಕ ಹೆಚ್ಚಿನ ಉತ್ಪಾದನೆಗೆ ಗಮನಹರಿಸಿದೆ ಎಂದರು. ಕಲ್ಲಿದ್ದಲು ಆಮದನ್ನ ಶೇ 2%ಗೆ ಇಳಿಸಲಾಗಿದೆ ಎಂದರು.

ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ್​ನತ್ತ ಸಾಗುತ್ತಿದೆ. ವಿದ್ಯುತ್ ಬಳಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ 6ನೇ ಹಂತದ 133 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ 5 ನೇ ಹಂತದ 64 ಕಲ್ಲಿದ್ದಲು ಗಣಿಗಳನ್ನ ಯಶಸ್ವಿಯಾಗಿ ಹರಾಜು ಮಾಡಲಾಗಿದೆ. ಅಲ್ಲದೇ 5 ನೇ ಹಂತದ ಸೆಕೆಂಡ್ ಅಟೆಮ್ಟ್​ನಲ್ಲಿ 8 ಗಣಿಗಳ ಹರಾಜು ಪ್ರಾರಂಭಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಕಲ್ಲಿದ್ದಲು ಸಚಿವಾಲಯದಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ರೂಪಿಸಲಾಗಿದೆ. ಹೂಡಿಕೆದಾರರು ಹೂಡಿಕೆ ಮಾಡಲು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ಮುಂದಿನ 25 – 30 ವರ್ಷಗಳ ವರೆಗೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚುತ್ತಲೇ ಹೋಗಲಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ಪಟ್ಟರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 pm, Thu, 10 November 22