AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನ ಪ್ರಭಾವಿ ನಾಯಕರಾದ ಸಚಿವ ಪ್ರಲ್ಹಾದ್ ಜೋಶಿ; TIME 100 ಹವಾಮಾನ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೆಸರು ಈಗ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದೆ. ಜಗತ್ತಿನಲ್ಲಿ ಹವಾಮಾನ ಸುಸ್ಥಿರತೆ ಕಾಪಾಡುತ್ತಿರುವವರ ಕುರಿತು ಸಿದ್ಧಪಡಿಸಲಾದ TIME 100 climate most powerfull leader" ಪಟ್ಟಿಯಲ್ಲಿ ಪ್ರಲ್ಹಾದ್ ಜೋಶಿ ಅವರ ಹೆಸರು ಕೂಡ ಇದೆ. ಈ ಮೂಲಕ ಪ್ರಧಾನಿ ಮೋದಿಯವರ ಸಂಪುಟದ ಸಚಿವರಾದ ಪ್ರಲ್ಹಾದ್ ಜೋಶಿ ವಿಶ್ವದ ಪ್ರಮುಖ ಪ್ರಭಾವಿ ನಾಯಕರಲ್ಲೊಬ್ಬರಾಗಿದ್ದಾರೆ. ಈ ಸ್ಥಾನ ಪಡೆದ ಮೊದಲ ಭಾರತೀಯರೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಜಗತ್ತಿನ ಪ್ರಭಾವಿ ನಾಯಕರಾದ ಸಚಿವ ಪ್ರಲ್ಹಾದ್ ಜೋಶಿ; TIME 100 ಹವಾಮಾನ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ
Pralhad Joshi
ಸುಷ್ಮಾ ಚಕ್ರೆ
|

Updated on:Nov 04, 2025 | 8:11 PM

Share

ನವದೆಹಲಿ, ನವೆಂಬರ್ 4: ಆರ್ಥಿಕತೆ-ಅಭಿವೃದ್ಧಿ, ಪರಂಪರೆ ಮತ್ತು ದೂರದೃಷ್ಟಿ ನಾಯಕತ್ವದಲ್ಲಿ ಭಾರತ ಜಗತ್​​​ಪ್ರಸಿದ್ಧಿ ಪಡೆದಿದೆ. ಅದರಂತೆ ಇದೀಗ ಈ ಪ್ರಗತಿಶೀಲ ರಾಷ್ಟ್ರವಾದ ಭಾರತದ ಸಚಿವರಾದ ಪ್ರಲ್ಹಾದ್ ಜೋಶಿ (Pralhad Joshi) ಕೂಡ ಪ್ರಭಾವಿ ನಾಯಕರಾಗಿ ವಿಶ್ವಪ್ರಸಿದ್ಧಿ ಗಳಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅವರ ಸಚಿವ ಸಂಪುಟದ ಸದಸ್ಯರೂ ವಿಶ್ವಪ್ರಸಿದ್ಧರ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರೀಗ ವಿಶ್ವದ ಪ್ರಮುಖ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂಪುಟದ ಪ್ರಭಾವಿ ಸಚಿವ ಪ್ರಲ್ಹಾದ್ ಜೋಶಿ ಜಗತ್ತಿನಲ್ಲಿ ಹವಾಮಾನ ಬದಲಾವಣೆ ತಡೆದು ಸುಸ್ಥಿರತೆ ಕಾಪಾಡುತ್ತಿರುವವರ ಕುರಿತು ಸಿದ್ಧಪಡಿಸಿದ “TIME 100 climate most powerfull leader” ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ 5ನೇ ಬಾರಿ ಸಂಸದರಾಗಿ ದಾಖಲೆ ನಿರ್ಮಿಸಿದ ಪ್ರಲ್ಹಾದ್ ಜೋಶಿ ಇದೀಗ ಈ ವರ್ಷದ “TIME 100 CLIMATE” ಪಟ್ಟಿಯಲ್ಲಿ ಪ್ರಭಾವಿ ನಾಯಕನ ಸ್ಥಾನ ಪಡೆದ “ಮೊದಲ ಭಾರತೀಯ ರಾಜಕಾರಣಿ” ಎಂಬ ಹೊಸ ದಾಖಲೆ ಸಹ ಬರೆದು ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ಮೂಲಕ ಆರ್​​​ಎಸ್​​ಎಸ್​ ಸದಸ್ಯರ​ ಟಾರ್ಗೆಟ್: ಸಚಿವ ಪ್ರಲ್ಹಾದ್ ಜೋಶಿ ಬಾಂಬ್

ಪ್ರತಿಕೂಲ ಪರಿಸ್ಥಿತಿಯಲ್ಲಿ ಜಗತ್ತಿನ ಹವಾಮಾನ ಸುಸ್ಥಿರತೆಗಾಗಿ ಸಚಿವ ಪ್ರಲ್ಹಾದ್ ಜೋಶಿ ಅವರ ಸಾರಥ್ಯದಲ್ಲಿ ಸೌರಶಕ್ತಿ ಹಾಗೂ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಭಾರತ ದಿಟ್ಟ ಹೆಜ್ಜೆಯಿರಿಸಿದೆ. ಇದಕ್ಕಾಗಿ ನೂರಾರು ರಾಷ್ಟ್ರಗಳೂ ಭಾರತದೊಂದಿಗೆ ಕೈ ಜೋಡಿಸಿವೆ. ದೆಹಲಿಯ ಭಾರತ್ ಮಂಟಪದಲ್ಲಿ ಮೊನ್ನೆಯಷ್ಟೇ 125ಕ್ಕೂ ಹೆಚ್ಚು ರಾಷ್ಟ್ರಗಳನ್ನು ಒಟ್ಟುಗೂಡಿಸಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ 8ನೇ ಅಧಿವೇಶನವೇ ಇದಕ್ಕೆ ಸಾಕ್ಷಿ.

TIME 100 Climate

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ವಿಶ್ವದ ಊಹೆಗೂ ನಿಲುಕದಂತೆ ಅಭೂತಪೂರ್ವ ಪ್ರಗತಿ ಸಾಧಿಸುತ್ತಿದೆ. ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನ ವಲಯದ ಸಾಧನೆಯಲ್ಲಂತೂ ಜಗತ್ತೇ ನಿಬ್ಬೆರಗಾಗಿದೆ. ಯುರೋಪಿಯನ್ ಒಕ್ಕೂಟ ಸೇರಿದಂತೆ ವಿವಿಧ ದೇಶಗಳ ಪ್ರತಿನಿಧಿಗಳು ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಸೌರಶಕ್ತಿ ಉತ್ಪಾದನೆಯಲ್ಲಿ ಭಾರತದ ತಾಂತ್ರಿಕತೆ, ತಂತ್ರಜ್ಞಾನ ಹಂಚಿಕೆಗೆ ಪ್ರಸ್ತಾಪಿಸಿದ್ದಾರೆ.

ಭಾರತದ ಕೋಟ್ಯಂತರ ಮನೆಗಳಲ್ಲಿ ಸೌರ ಬೆಳಕು ಚೆಲ್ಲಿದ ʼಸೂರ್ಯಘರ್ʼ ಮತ್ತು ರೈತ ಸಮುದಾಯವನ್ನು ಸಬಲೀಕರಣಗೊಳಿಸುತ್ತಿರುವ ʼಪಿಎಂ ಕುಸುಮ್ʼ ಯೋಜನೆ ಯಶಸ್ಸು ಕಂಡು ಜಗತ್ತಿನ 50ಕ್ಕೂ ಹೆಚ್ಚು ರಾಷ್ಟ್ರಗಳು ತಮ್ಮಲ್ಲೂ ಈ ಯೋಜನೆಗಳ ಅನುಷ್ಠಾನಕ್ಕೆ ಸಾಥ್ ನೀಡುವಂತೆ ಬೇಡಿಕೆ ಮುಂದಿಡುವಷ್ಟರ ಮಟ್ಟಿಗೆ ಕಾರ್ಯ ಸಾಧನೆ ತೋರಿದ್ದಾರೆ ಸಚಿವ ಪ್ರಲ್ಹಾದ್ ಜೋಶಿ.

ಇದನ್ನೂ ಓದಿ: ಯಾರಿಗೂ ಹೇಳದೆ ರಾಹುಲ್ ಗಾಂಧಿ ವಿದೇಶಕ್ಕೆ ಹೋಗೋದೇಕೆ?; ಪ್ರಲ್ಹಾದ್ ಜೋಶಿ ಟೀಕೆ 

2024ರಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಹೊಣೆ ಹೊತ್ತ ಪ್ರಲ್ಹಾದ್ ಜೋಶಿ ಅವರು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್, ಪಿಎಂ ಕುಸುಮ್​, ಸೂರ್ಯಘರ್ ಸೇರಿದಂತೆ ಭಾರತದ ಹಸಿರು ಇಂಧನ ಪರಿವರ್ತನೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದ್ದಾರೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೇಯೇತರ ಇಂಧನ ಸಾಮರ್ಥ್ಯ ತಲುಪುವ ಭಾರತದ ಗುರಿಯನ್ನು ಐತಿಹಾಸಿಕ ಎನ್ನುವಂತೆ 5 ವರ್ಷ ಮೊದಲೇ ಸಾಧಿಸಿದರು. ಅಲ್ಲದೆ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಅಮೇರಿಕವನ್ನೇ ಹಿಂದಿಕ್ಕಿ ಭಾರತವನ್ನು ಜಗತ್ತಿನ 2ನೇ ಅತಿದೊಡ್ಡ ಸೋಲಾರ್​ ಮಾರುಕಟ್ಟೆಯಾಗಿ ನಿರ್ಮಿಸಿದ್ದು ಪ್ರಲ್ಹಾದ್ ಜೋಶಿ ಅವರ ಕಾರ್ಯಕ್ಷಮತೆ ಮತ್ತು ದೂರದೃಷ್ಟಿ ನಾಯಕತ್ವಕ್ಕೆ ಉದಾಹರಣೆ.

pralhad joshi

2014ರಲ್ಲಿ ಕೇವಲ 81 ಗಿಗಾವ್ಯಾಟ್​ ಇದ್ದ ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಇಂದು 257 ಗಿಗಾವ್ಯಾಟ್‌ಗೆ ಏರಿದೆ. ಇನ್ನು ಸೋಲಾರ್​ ಸಾಮರ್ಥ್ಯ ಸಹ ಅತ್ಯದ್ಭುತ ಎನ್ನುವಂತೆ 2.8 ಗಿಗಾವ್ಯಾಟ್​ನಿಂದ 128 ಗಿಗಾವ್ಯಾಟ್​ ಉತ್ಪಾದನಾ ಸಾಮರ್ಥ್ಯಕ್ಕೆ ಹೆಚ್ಚಿಸುವಲ್ಲಿ ಪ್ರಲ್ಹಾದ್ ಜೋಶಿಯವರ ಕಾರ್ಯವೈಖರಿ ಅನುಕರಣೀಯ.

ಜಗತ್ತಿನಲ್ಲಿ ಹವಾಮಾನ ಬದಲಾವಣೆ ತಗ್ಗಿಸಲು ಇಂಗಾಲ ಹೊರಸೂಸುವಿಕೆಯಲ್ಲಿ ತ್ವರಿತ ಕಡಿತದ ಅಗತ್ಯವಿದೆಯೆಂದು ಪ್ರತಿಪಾದಿಸುತ್ತಲೇ ಬಂದಿರುವ ಪ್ರಲ್ಹಾದ್ ಜೋಶಿ, 2028ರ ವೇಳೆಗೆ ಭಾರತ ಸ್ಥಳೀಯ ಸೌರಕೋಶ ಉತ್ಪಾದನೆ ಸಾಧಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಿರಿಸಿದ್ದಲ್ಲದೆ, ಯುವ ಸಮೂಹ ಹಸಿರು ಇಂಧನ ಉತ್ಪಾದನೆ ಕೌಶಲ್ಯ ಹೊಂದಲು 2 ತಿಂಗಳ ಕೋರ್ಸ್ ಸಹ ಪ್ರಾರಂಭಿಸಿ ನವೀಕರಿಸಬಹುದಾದ ಇಂಧನ ವಲಯಕ್ಕೆ ಹೊಸ ಸ್ಪರ್ಶ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Tue, 4 November 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ