AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿ‘ ಅಲ್ಲ ‘ಘಮಂಡಿ’ ಮೈತ್ರಿಕೂಟ; ರಾಜಸ್ಥಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

Pralhad Joshi; ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಸನಾತನ ಧರ್ಮ ಎಂಬುದು ಒಂದು ಕಾಯಿಲೆಯಂತೆ ಎಂದು ಹೇಳಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎಂದು ಕಾಂಗ್ರೆಸ್ ಮತ್ತು ಅಶೋಕ್ ಗೆಹ್ಲೋಟ್ ಅವರನ್ನು ಜೋಶಿ ಪ್ರಶ್ನಿಸಿದ್ದಾರೆ.

‘ಇಂಡಿ‘ ಅಲ್ಲ ‘ಘಮಂಡಿ’ ಮೈತ್ರಿಕೂಟ; ರಾಜಸ್ಥಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರಲ್ಹಾದ್ ಜೋಶಿ
Follow us
Ganapathi Sharma
|

Updated on:Sep 15, 2023 | 10:12 PM

ದೂದೂ (ರಾಜಸ್ಥಾನ), ಸೆಪ್ಟೆಂಬರ್ 15: ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ತಾಲೀಮು ಶುರುಮಾಡಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿಯು (BJP) ಅಲ್ಲಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ತೀವ್ರ ವಾಗ್ದಾಳಿ ಆರಂಭಿಸಿದೆ. ರಾಜಸ್ಥಾನದ ದೂದೂವಿನಲ್ಲಿ ಶುಕ್ರವಾರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವಿರುದ್ಧ ವಗ್ಧಾಳಿ ನಡೆಸಿದರು. ಜತೆಗೆ, ಸನಾತನ ಧರ್ಮ ವಿಚಾರವಾಗಿ ಕಾಂಗ್ರೆಸ್ (Congress) ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ಅಶೋಕ್ ಗೆಹ್ಲೋಟ್ ಅವರ ನಿಲುವನ್ನು ಪ್ರಶ್ನಿಸಿದ್ದಾರೆ.

‘ಕೆಲವೇ ಜನರು ಇದನ್ನು INDIA ಮೈತ್ರಿ ಎಂದು ಕರೆಯುತ್ತಾರೆ. ಆದರೆ ಇದು INDI ಮೈತ್ರಿ. ಯಾಕೆಂದರೆ ನೀವು ಎರಡು ಬಾರಿ ಮೈತ್ರಿ ಎಂದು ಕರೆಯಲು ಸಾಧ್ಯವಿಲ್ಲ. ಇದು INDI ಮೈತ್ರಿಯಲ್ಲ, ಇದು ಘಮಂಡಿ ಮೈತ್ರಿ’ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಸನಾತನ ಧರ್ಮ ಎಂಬುದು ಒಂದು ಕಾಯಿಲೆಯಂತೆ ಎಂದು ಹೇಳಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎಂದು ಕಾಂಗ್ರೆಸ್ ಮತ್ತು ಅಶೋಕ್ ಗೆಹ್ಲೋಟ್ ಅವರನ್ನು ಜೋಶಿ ಪ್ರಶ್ನಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸನಾತನ ಧರ್ಮ ಸೊಳ್ಳೆ, ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಅವರು ಹೇಳಿದ್ದರು. ಇದನ್ನು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವವರಿಗೆ ಸೂಕ್ತ ತಿರುಗೇಟು ನೀಡಬೇಕು ಎಂದು ಪ್ರಧಾನಿ ಮೋದಿ ಕೂಡ ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳಿಗೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರತಿಪಕ್ಷಗಳ ಮಹಾಮೈತ್ರಿಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ

ಉದಯ್ ನಿಧಿ ಸ್ಟಾಲಿನ್ ಹೇಳಿಕೆಯನ್ನು ಕಾಂಗ್ರೆಸ್ ಇನ್ನೂ ಖಂಡಿಸಿಲ್ಲ. ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬುದು ನಿಮಗೆ ತಿಳಿದಿರಲಿ ಎಂದು ಜೋಶಿ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Fri, 15 September 23

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ