ದೂದೂ (ರಾಜಸ್ಥಾನ), ಸೆಪ್ಟೆಂಬರ್ 15: ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ತಾಲೀಮು ಶುರುಮಾಡಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿಯು (BJP) ಅಲ್ಲಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ತೀವ್ರ ವಾಗ್ದಾಳಿ ಆರಂಭಿಸಿದೆ. ರಾಜಸ್ಥಾನದ ದೂದೂವಿನಲ್ಲಿ ಶುಕ್ರವಾರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವಿರುದ್ಧ ವಗ್ಧಾಳಿ ನಡೆಸಿದರು. ಜತೆಗೆ, ಸನಾತನ ಧರ್ಮ ವಿಚಾರವಾಗಿ ಕಾಂಗ್ರೆಸ್ (Congress) ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ಅಶೋಕ್ ಗೆಹ್ಲೋಟ್ ಅವರ ನಿಲುವನ್ನು ಪ್ರಶ್ನಿಸಿದ್ದಾರೆ.
‘ಕೆಲವೇ ಜನರು ಇದನ್ನು INDIA ಮೈತ್ರಿ ಎಂದು ಕರೆಯುತ್ತಾರೆ. ಆದರೆ ಇದು INDI ಮೈತ್ರಿ. ಯಾಕೆಂದರೆ ನೀವು ಎರಡು ಬಾರಿ ಮೈತ್ರಿ ಎಂದು ಕರೆಯಲು ಸಾಧ್ಯವಿಲ್ಲ. ಇದು INDI ಮೈತ್ರಿಯಲ್ಲ, ಇದು ಘಮಂಡಿ ಮೈತ್ರಿ’ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
#WATCH | Dudu, Rajasthan: Union Minister Pralhad Joshi says, “…Few people call it the INDIA alliance, but it is the INDI alliance…You can’t say alliance twice. It is not an INDI alliance, it is a ‘Ghamandi’ alliance…” pic.twitter.com/b63j8aYtcT
— ANI (@ANI) September 15, 2023
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಸನಾತನ ಧರ್ಮ ಎಂಬುದು ಒಂದು ಕಾಯಿಲೆಯಂತೆ ಎಂದು ಹೇಳಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎಂದು ಕಾಂಗ್ರೆಸ್ ಮತ್ತು ಅಶೋಕ್ ಗೆಹ್ಲೋಟ್ ಅವರನ್ನು ಜೋಶಿ ಪ್ರಶ್ನಿಸಿದ್ದಾರೆ.
#WATCH | Dudu, Rajasthan: Union Minister Pralhad Joshi says, “…The son of Congress president Mallikarjun Kharge, Priyank Kharge said that Sanatan Dharna is like a disease…I want to ask Congress and Ashok Gehlot, what do you have to say on this?…” pic.twitter.com/G54zrbVLrA
— ANI (@ANI) September 15, 2023
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸನಾತನ ಧರ್ಮ ಸೊಳ್ಳೆ, ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಅವರು ಹೇಳಿದ್ದರು. ಇದನ್ನು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವವರಿಗೆ ಸೂಕ್ತ ತಿರುಗೇಟು ನೀಡಬೇಕು ಎಂದು ಪ್ರಧಾನಿ ಮೋದಿ ಕೂಡ ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳಿಗೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರತಿಪಕ್ಷಗಳ ಮಹಾಮೈತ್ರಿಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದ್ದಾರೆ.
ಇದನ್ನೂ ಓದಿ: ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ
ಉದಯ್ ನಿಧಿ ಸ್ಟಾಲಿನ್ ಹೇಳಿಕೆಯನ್ನು ಕಾಂಗ್ರೆಸ್ ಇನ್ನೂ ಖಂಡಿಸಿಲ್ಲ. ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬುದು ನಿಮಗೆ ತಿಳಿದಿರಲಿ ಎಂದು ಜೋಶಿ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:46 pm, Fri, 15 September 23