ಕೋಮುವಾದಿ ರಾಜಕಾರಣಕ್ಕೆ ಇಳಿದಿದೆ ಸಮಾಜವಾದಿ ಪಾರ್ಟಿ: ಅಯೋಧ್ಯೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಚಿವ ಪ್ರಲ್ಹಾದ್ ಜೋಶಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಿ ರಾಮಲಲ್ಲಾ ದರ್ಶನ ಪಡೆದರು. ರಾಮ ಮಂದಿರ ಉದ್ಘಾಟನೆ ಬಳಿಕ ಜೋಶಿ ಅಲ್ಲಿಗೆ ಭೇಟಿ ನೀಡಿರುವುದು ಇದೇ ಮೊದಲು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಕೋಮುವಾದಿ ರಾಜಕಾರಣಕ್ಕೆ ಇಳಿದಿದೆ ಸಮಾಜವಾದಿ ಪಾರ್ಟಿ: ಅಯೋಧ್ಯೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ
ಪ್ರಲ್ಹಾದ ಜೋಶಿImage Credit source: ANI
Follow us
TV9 Web
| Updated By: Ganapathi Sharma

Updated on: Nov 30, 2024 | 4:32 PM

ಅಯೋಧ್ಯೆ, ನವೆಂಬರ್ 30: ಸಮಾಜವಾದಿ ಪಕ್ಷ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ಚುನಾವಣೆ ಸೋತಿದ್ದರಿಂದ ಕೋಮುವಾದಿ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದರು. ಅಯೋಧ್ಯೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಾರ್ಟಿ ಚುನಾವಣೆ ಸೋತ ಹತಾಶೆಯಲ್ಲಿ ಹೀಗೆ ಕೋಮುವಾದಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಾರ್ಟಿ ಸಮಾಜದ ಶಾಂತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಇರುವ ಶಾಂತಿ ಕದಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸೋತ ಮಾತ್ರಕ್ಕೆ ಹೀಗೆ ಕೋಮುವಾದಿ ರಾಜಕಾರಣಕ್ಕೆ ಇಳಿಯುವುದು ಆ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಜೋಶಿ ಹೇಳಿದರು.

ಸಮಾಜವಾದಿ ಪಕ್ಷ ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದೆ. ಸಮಾಜವಾದಿ ನೆಪದಲ್ಲಿ ಸಮಾಜದ ಶಾಂತಿಗೆ ಭಂಗ ತರುವಂತಹ ವರ್ತನೆ ತೋರುವುದು ಸರಿಯಲ್ಲ. ಈ ಎರಡೂ ರಾಜ್ಯಗಳಲ್ಲಿ ಸಮಾಜದಲ್ಲಿ ಶಾಂತಿ ನೆಲೆಸಿದೆ. ಆದರೆ, ಸಮಾಜವಾದಿ ಪಕ್ಷ ಶಾಂತಿ ಕೆಡಿಸುತ್ತಿದೆ ಎಂದು ಸಚಿವ ಜೋಶಿ ಆರೋಪಿಸಿದರು.

ಶ್ರೀರಾಮನ ದರ್ಶನ ಪಡೆದ ಜೋಶಿ

ಪ್ರಲ್ಹಾದ್ ಜೋಶಿ ಅವರು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಬಳಿಕ ಇದೇ ಮೊದಲ ಬಾರಿ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ

ಇಂದು ಕಾರ್ಯಕ್ರಮವೊಂದರ ನಿಮಿತ್ತ ಅಯೋಧ್ಯೆಗೆ ತೆರಳಿದ ಸಚಿವರು, ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ