ಅಯೋಧ್ಯೆ, ನವೆಂಬರ್ 30: ಸಮಾಜವಾದಿ ಪಕ್ಷ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ಚುನಾವಣೆ ಸೋತಿದ್ದರಿಂದ ಕೋಮುವಾದಿ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದರು. ಅಯೋಧ್ಯೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಾರ್ಟಿ ಚುನಾವಣೆ ಸೋತ ಹತಾಶೆಯಲ್ಲಿ ಹೀಗೆ ಕೋಮುವಾದಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.
ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಾರ್ಟಿ ಸಮಾಜದ ಶಾಂತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಇರುವ ಶಾಂತಿ ಕದಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಸೋತ ಮಾತ್ರಕ್ಕೆ ಹೀಗೆ ಕೋಮುವಾದಿ ರಾಜಕಾರಣಕ್ಕೆ ಇಳಿಯುವುದು ಆ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಜೋಶಿ ಹೇಳಿದರು.
ಸಮಾಜವಾದಿ ಪಕ್ಷ ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದೆ. ಸಮಾಜವಾದಿ ನೆಪದಲ್ಲಿ ಸಮಾಜದ ಶಾಂತಿಗೆ ಭಂಗ ತರುವಂತಹ ವರ್ತನೆ ತೋರುವುದು ಸರಿಯಲ್ಲ. ಈ ಎರಡೂ ರಾಜ್ಯಗಳಲ್ಲಿ ಸಮಾಜದಲ್ಲಿ ಶಾಂತಿ ನೆಲೆಸಿದೆ. ಆದರೆ, ಸಮಾಜವಾದಿ ಪಕ್ಷ ಶಾಂತಿ ಕೆಡಿಸುತ್ತಿದೆ ಎಂದು ಸಚಿವ ಜೋಶಿ ಆರೋಪಿಸಿದರು.
ಪ್ರಲ್ಹಾದ್ ಜೋಶಿ ಅವರು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಬಳಿಕ ಇದೇ ಮೊದಲ ಬಾರಿ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ
ಇಂದು ಕಾರ್ಯಕ್ರಮವೊಂದರ ನಿಮಿತ್ತ ಅಯೋಧ್ಯೆಗೆ ತೆರಳಿದ ಸಚಿವರು, ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ