ಮಾರ್ಚ್ 28ರಂದು ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.  ಸಾವಂತ್ ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಮಾರ್ಚ್ 28ರಂದು ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ
ಪ್ರಮೋದ್ ಸಾವಂತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 22, 2022 | 1:46 PM

ಪಣಜಿ: ಪ್ರಮೋದ್ ಸಾವಂತ್ (Pramod Sawant) ಅವರು ಮಾರ್ಚ್ 28 ರಂದು ಗೋವಾ (Goa) ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗೋವಾದಲ್ಲಿ ಬಿಜೆಪಿ (BJP) 40 ರಲ್ಲಿ 20 ಸೀಟು ಗೆದ್ದ ಚುನಾವಣಾ ಫಲಿತಾಂಶದ ನಂತರ ಸುಮಾರು 10 ದಿನಗಳ ನಂತರ ಸಾವಂತ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದ ಬಿಜೆಪಿ ಸೋಮವಾರ ಹೇಳಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.  ಸಾವಂತ್ ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಗೋವಾದಲ್ಲಿ ಬಹುಮತ ಸಾಧಿಸಲು ಬಿಜೆಪಿಗೆ 21 ಸ್ಥಾನಗಳ ಅಗತ್ಯವಿದೆ. ಇದೀಗ ಬಿಜೆಪಿ ಎಂಜಿಪಿ ಪಕ್ಷದ ಇಬ್ಬರು ಮತ್ತು ಮೂವರು ಪಕ್ಷೇತರರ ಬೆಂಬಲ ಪಡೆದುಕೊಂಡಿದೆ. ಹೀಗಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ. ಈ ಬಾರಿಯೂ ಬಿಜೆಪಿಗೆ ಗೋವಾ ಮತದಾರರು ಮನ್ನಣೆ ನೀಡುವುದರೊಂದಿಗೆ ಗೋವಾದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಂತೆ ಆಗಿದೆ. ಬಿಜೆಪಿ ನಾಯಕ ಮತ್ತು ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಇದು ಎರಡನೇ ಅವಧಿ. ಈ ಬಾರಿ ಮುಖ್ಯಮಂತ್ರಿ ಹುದ್ದೆ ಪ್ರಮೋದ್ ಅವರೊಂದಿಗೆ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರ ಹೆಸರುಗಳೂ ಕೇಳಿಬಂದಿದ್ದವು.

ಇತ್ತೀಚೆಗೆ ನಡೆದಿದ್ದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 20, ಕಾಂಗ್ರೆಸ್ 11, ಆಮ್ ಆದ್ಮಿ ಪಕ್ಷ 2, ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ (ಎಂಜಿಪಿ) 2, ಪಕ್ಷೇತರರು 3, ಗೋವಾ ಕ್ರಾಂತಿ ಪಕ್ಷ 1 ಮತ್ತು ಗೋವಾ ಫಾರ್ವರ್ಡ್ ಪಕ್ಷ 1 ಸ್ಥಾನ ಪಡೆದಿತ್ತು. ಗೋವಾ ವಿಧಾನಸಭೆಯಲ್ಲಿ ಸರಳ ಬಹುಮತ ಪಡೆಯಲು 21 ಸ್ಥಾನದ ಅಗತ್ಯವಿದೆ.

ಡಾ.ಪ್ರಮೋದ್ ಸಾವಂತ್ ಅವರನ್ನು 25 ಶಾಸಕರು ಬೆಂಬಲಿಸುತ್ತಿರುವುದು ನನಗೆ ತೃಪ್ತಿ ತಂದಿದೆ. ಅದರಂತೆ, ನಾನು ನಿಮ್ಮನ್ನು ಗೋವಾದ ಮುಖ್ಯಮಂತ್ರಿಯಾಗಿ ನೇಮಿಸಲು ಈ ಮೂಲಕ ಆಹ್ವಾನಿಸುತ್ತೇನೆ. ಪ್ರಮಾಣವಚನ ಸ್ವೀಕಾರದ ನಂತರ ನೀವು ಅಧಿಕಾರ ಸ್ವೀಕರಿಸುತ್ತೀರಿ ಎಂದು ರಾಜ್ಯಪಾಲರು ಪತ್ರ ಸ್ವೀಕರಿಸಿದ ನಂತರ ಹೇಳಿದರು.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಸಾವಂತ್, ತಮಗೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಮುಂದಿನ ಐದು ವರ್ಷಗಳಲ್ಲಿ ಸಾಕಷ್ಟು ಮೂಲಸೌಕರ್ಯ ಮತ್ತು ಮಾನವ ಅಭಿವೃದ್ಧಿಯ ರಚನೆಯು ರಾಜ್ಯ ಸರ್ಕಾರದ ಕೇಂದ್ರಬಿಂದುವಾಗಿದೆ ಎಂದು ಹೇಳಿದರು. ಈ ಹಿಂದಿನ ಅವಧಿಯಲ್ಲಿ ಸರ್ಕಾರವು ‘ಸ್ವಯಂಪೂರ್ಣ ಗೋವಾ 1.0’ ಅನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಮತ್ತು ಅದರ ಎರಡನೇ ಆವೃತ್ತಿಯನ್ನು ಇನ್ನಷ್ಟು ಹುರುಪಿನಿಂದ ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಡಿಯಲ್ಲಿ, ರಾಜ್ಯ ಸರ್ಕಾರಿ ಅಧಿಕಾರಿಯನ್ನು ‘ಸ್ವಯಂಪೂರ್ಣ ಮಿತ್ರ’ ಎಂದು ನೇಮಿಸಲಾಗುತ್ತದೆ, ಅವರು ಗೊತ್ತುಪಡಿಸಿದ ಪಂಚಾಯತ್ ಅಥವಾ ಪುರಸಭೆಗೆ ಭೇಟಿ ನೀಡುತ್ತಾರೆ, ಜನರೊಂದಿಗೆ ಸಂವಹನ ನಡೆಸುತ್ತಾರೆ, ಅನೇಕ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುತ್ತಾರೆ ಮತ್ತು ವಿವಿಧ ಕಲ್ಯಾಣ ಯೋಜನೆಗಳ ಪ್ರಯೋಜನಗಳು ಉದ್ದೇಶಿತ ಜನಸಂಖ್ಯೆಯನ್ನು ತಲುಪುವಂತೆ ಖಚಿತಪಡಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಸರ್ಕಾರಕ್ಕೆ ಬೆಂಬಲ ನೀಡಿದ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಸಂಪೂರ್ಣ ಪಾರದರ್ಶಕತೆಯಿಂದ ಕೆಲಸ ಮಾಡುತ್ತೇವೆ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಗೋವಾದಲ್ಲಿ ನಾವೇ ಸರ್ಕಾರ ರಚನೆ ಮಾಡುತ್ತೇವೆ, ರಾಜ್ಯಪಾಲರನ್ನು ಭೇಟಿಯಾಗುತ್ತೇವೆ: ಸಿಎಂ ಪ್ರಮೋದ್ ಸಾವಂತ್​

Published On - 1:23 pm, Tue, 22 March 22

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು