Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Apr 26, 2023 | 12:24 PM

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. ಪ್ರಧಾನಿ ಮೋದಿಯವರು 3 ಅಕ್ಟೋಬರ್ 2014 ರಂದು ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಸಾರ್ವಜನಿಕರೊಂದಿಗೆ ಪ್ರಧಾನಿಯವರ ನೇರ ಸಂವಾದದ ಈ ವಿಶೇಷ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಪ್ರಸಾರ ಭಾರತಿ ಇಂದು ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿರ್ದಿಷ್ಟವಾಗಿ ಚರ್ಚಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಈ ವಿಶೇಷ ಸಂದರ್ಭದಲ್ಲಿ 100 ರೂ. ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವೂ ಕೂಡ ಇದೆ.

ಸಮಾವೇಶದಲ್ಲಿ ಜಗದೀಪ್ ಧನ್​ಕರ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ. ಈ ಸೆಲೆಬ್ರಿಟಿಗಳಲ್ಲಿ ಆಮೀರ್ ಖಾನ್, ನಟಿ ರವೀನಾ ಟಂಡನ್, ಕ್ರೀಡಾಪಟು ನಿಖತ್ ಜರೀನ್ ಮತ್ತು ದೀಪಾ ಮಲಿಕ್ ಕೂಡ ಇರಲಿದ್ದಾರೆ.

ಮತ್ತಷ್ಟು ಓದಿ: PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್ ಕಾರ್ಯಕ್ರಮವನ್ನು ಅಕ್ಟೋಬರ್ 3 2014ರಂದು ವಿಜಯದಶಮಿಯ ಸಂದರ್ಭದಲ್ಲಿ ಪ್ರಾರಂಭಿಸಿದರು.

ಈ ಕಾರ್ಯಕ್ರಮವು ಅಪಾರ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಇದುವರೆಗೆ 99 ಸಂಚಿಕೆಗಳನ್ನು ಪೂರೈಸಿದೆ, ಇದರ 100ನೇ ಸಂಚಿಕೆಯು ಏಪ್ರಿಲ್ 30ರ ಭಾನುವಾರದಂದು ಪ್ರಸಾರವಾಗಲಿದೆ, ಈ ನಿಟ್ಟಿನಲ್ಲಿ ಇಂದು ಪ್ರಸಾರ ಭಾರತಿಯು ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 26 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್