Prashant Kishor ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಆದಾಗ್ಯೂ, ಕೆಲವೇ ದಿನಗಳ ಹಿಂದೆ ಚುನಾವಣಾ ತಂತ್ರಜ್ಞರು ಆಡಳಿತಾರೂಢ ಟಿಆರ್ ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ.

Prashant Kishor ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 26, 2022 | 4:37 PM

ಕಾಂಗ್ರೆಸ್‌ನ (Congress) ಸರಣಿ ಸಭೆಗಳ ನಂತರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಪಕ್ಷಕ್ಕೆ ಸೇರಲು ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರ ಪ್ರಸ್ತುತಿ ಮತ್ತು ಚರ್ಚೆಯ ನಂತರ, ಕಾಂಗ್ರೆಸ್ ಅಧ್ಯಕ್ಷರು ಸಶಕ್ತ ಕ್ರಿಯಾ ಗುಂಪು 2024 ಅನ್ನು ರಚಿಸಿದ್ದಾರೆ ಮತ್ತು ನಿರ್ದಿಷ್ಟ ಜವಾಬ್ದಾರಿ ಹೊಂದಿರುವ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರಲು ಅವರನ್ನು ಆಹ್ವಾನಿಸಿದ್ದಾರೆ.ಆದರೆ ಅವರು ನಿರಾಕರಿಸಿದರು. ಅವರ ಪ್ರಯತ್ನಗಳು ಮತ್ತು ಪಕ್ಷಕ್ಕೆ ನೀಡಿದ ಸಲಹೆಯನ್ನು ನಾವು ಶ್ಲಾಘಿಸುತ್ತೇವೆ ಎಂದು ರಣದೀಪ್ ಸುರ್ಜೆವಾಲಾ (Randeep Surjewala) ಹೇಳಿದ್ದಾರೆ. 2024 ರ ಚುನಾವಣೆಗೆ ಪಕ್ಷದ ಯೋಜನೆ ಕುರಿತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಪ್ರಸ್ತುತಿ ಕುರಿತು ಚರ್ಚಿಸಿದ ದಿನಗಳ ನಂತರ ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸಲು ಅಧಿಕಾರಯುತ ಗುಂಪನ್ನು ರಚಿಸಲಾಗುವುದು ಎಂದು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಕಿಶೋರ್ ಅವರು ಮಂಡಿಸಿದ ಯೋಜನೆ ಸೇರಿದಂತೆ ಮುಂದಿನ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರವನ್ನು ರೂಪಿಸಲು ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.  ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಉತ್ಸುಕರಾಗಿದ್ದರು ಮತ್ತು ಯಾವುದೇ ನಿರೀಕ್ಷೆಗಳಿಲ್ಲದೆ ಹಾಗೆ ಮಾಡಲು ಬಯಸಿದ್ದರು. ಕಳೆದ ವಾರದಲ್ಲಿ ಪಕ್ಷದ ಉನ್ನತ ನಾಯಕರ ಚರ್ಚೆಯಂತೆ ಪಕ್ಷಕ್ಕೆ ಬೇಕಾದ ಪ್ರಸ್ತುತಿಯನ್ನು ಸಹ ಮಾಡಿದ್ದರು. ಸತತ ಸೋಲಿನ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಆದಾಗ್ಯೂ, ಕೆಲವೇ ದಿನಗಳ ಹಿಂದೆ ಚುನಾವಣಾ ತಂತ್ರಜ್ಞರು ಆಡಳಿತಾರೂಢ ಟಿಆರ್ ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ.

ಕಿಶೋರ್ ಮತ್ತು ಕಾಂಗ್ರೆಸ್ ನಡುವಿನ ಮಾತುಕತೆಗಳ ನಡುವೆ ಐ-ಪಿಎಸಿಯೊಂದಿಗೆ ಕೆಲಸ ಮಾಡುವ ಸಭೆ ಮತ್ತು ಟಿಆರ್‌ಎಸ್ ನಿರ್ಧಾರವು ಅಚ್ಚರಿಯನ್ನುಂಟು ಮಾಡಿತ್ತು.

ತೆಲಂಗಾಣ ವಿಧಾನಸಭಾ ಚುನಾವಣೆಗಾಗಿ ಟಿಆರ್‌ಎಸ್‌ನೊಂದಿಗೆ ಅವರ ಕಂಪನಿ ಐ-ಪಿಎಸಿ ಸಹಿ ಹಾಕಿದ್ದ ಒಪ್ಪಂದವೇ ಅವರು ಕಾಂಗ್ರೆಸ್‌ಗೆ ಸೇರದಿರಲು ಕಾರಣ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇತ್ತ ಕಾಂಗ್ರೆಸ್ ನಾಯಕತ್ವವು ಇದನ್ನು ಹಿತಾಸಕ್ತಿ ಸಂಘರ್ಷ ಎಂದು ಪರಿಗಣಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಹಾಗೂ ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಚುನಾವಣಾ ನಿರ್ವಹಣೆಗಾಗಿ ಕಿಶೋರ್ ಅವರನ್ನು ತೊಡಗಿಸಿಕೊಂಡಿದೆ.

ಇದನ್ನೂ ಓದಿ: ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆಯೇನು?

Published On - 4:02 pm, Tue, 26 April 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್