ಕಾಂಗ್ರೆಸ್ ಪಕ್ಷದ ಟಾಸ್ಕ್​ಫೋರ್ಸ್ ರಚಿಸಿದ ಸೋನಿಯಾ ಗಾಂಧಿ;​ ಪ್ರಶಾಂತ್ ಕಿಶೋರ್​ ಮಾಜಿ ಸಹವರ್ತಿಗೂ ಸ್ಥಾನ

ಪ್ರಶಾಂತ್ ಕಿಶೋರ್ ಅವರ ಮಾಜಿ ಸಹವರ್ತಿ ಸುನೀಲ್‌ ಕಣುಗೋಲು ಅವರನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ನಿರ್ವಹಣೆಗೆ ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಟಾಸ್ಕ್​ಫೋರ್ಸ್ ರಚಿಸಿದ ಸೋನಿಯಾ ಗಾಂಧಿ;​  ಪ್ರಶಾಂತ್ ಕಿಶೋರ್​ ಮಾಜಿ ಸಹವರ್ತಿಗೂ ಸ್ಥಾನ
ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 24, 2022 | 2:05 PM

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಇನ್ನೇನು ಕಾಂಗ್ರೆಸ್ ಸೇರಿಯೇ ಬಿಡುತ್ತಾರೆ ಎನ್ನಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಜೊತೆ ಹಲವು ಸುತ್ತಿನ ಮಾತುಕತೆಗಳೂ ನಡೆದಿದ್ದವು. ಆದರೆ, ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರಲ್ಲೇ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಪ್ರಶಾಂತ್ ಕಿಶೋರ್ ಅವರೇ ತಾವು ಕಾಂಗ್ರೆಸ್​ಗೆ ಸೇರ್ಪಡೆಯಾಗುವುದಿಲ್ಲ ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ ಪ್ರಶಾಂತ್ ಕಿಶೋರ್ ಅವರ ಮಾಜಿ ಸಹವರ್ತಿ ಸುನೀಲ್‌ ಕಣುಗೋಲು ಅವರನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ನಿರ್ವಹಣೆಗೆ ಆಯ್ಕೆ ಮಾಡಲಾಗಿದೆ.

ಇಂದು 2024ರ ಚುನಾವಣೆಗೆ ಕಾಂಗ್ರೆಸ್ ಪ್ಯಾನೆಲ್​ಗೆ ಪ್ರಶಾಂತ್ ಕಿಶೋರ್ ಅವರ ಮಾಜಿ ಸಹವರ್ತಿ ಸುನೀಲ್, ಇಬ್ಬರು ಕಾಂಗ್ರೆಸ್ ರೆಬೆಲ್ ನಾಯಕರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಇಂದು ತನ್ನ ರಾಜಕೀಯ ವ್ಯವಹಾರಗಳ ಪ್ಯಾನೆಲ್ ಅನ್ನು ಘೋಷಿಸಿತು. ಇದರಲ್ಲಿ ರಾಹುಲ್ ಗಾಂಧಿ ಮತ್ತು ಇಬ್ಬರು ಕಾಂಗ್ರೆಸ್​ನ ಪ್ರಮುಖ ಭಿನ್ನಮತೀಯರು, ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಇದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್​ನ ಚಿಂತನಾ ಶಿಬಿರದಲ್ಲಿ ಟಾಸ್ಕ್​ಫೋರ್ಸ್​ ಸಮಿತಿ ಮತ್ತು ಎಲೆಕ್ಷನ್ ಪ್ಯಾನೆಲ್​ ಸಿದ್ಧಪಡಿಸಲು ನಿರ್ಧರಿಸಲಾಗಿತ್ತು. ಮುಂದಿನ ರಾಷ್ಟ್ರೀಯ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರವನ್ನು ನಿರ್ವಹಿಸುವ ಟಾಸ್ಕ್ ಫೋರ್ಸ್ – 2024ರಲ್ಲಿ “G-23” ಎಂದೇ ಕರೆಯಲ್ಪಡುವ ಭಿನ್ನಮತೀಯರ ಗುಂಪಿನಿಂದ ಕೂಡ ಕೆಲವರನ್ನು ಸೇರಿಸಿಕೊಳ್ಳಲಾಗಿದೆ. ಈ 23 ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದ್ದರು. ಇದು ಕಾಂಗ್ರೆಸ್​ಗೆ ತೀವ್ರ ಮುಜುಗರ ಉಂಟುಮಾಡಿತ್ತು.

ಇದನ್ನೂ ಓದಿ: ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​ ಫೈನಲ್; ನಾಗರಾಜ್ ಯಾದವ್, ಅಬ್ದುಲ್​​ ಜಬ್ಬಾರ್​ಗೆ ‘ಕೈ’ ಟಿಕೆಟ್​

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ರಾಜಕೀಯ ವ್ಯವಹಾರಗಳ ಗುಂಪಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ದಿಗ್ವಿಜಯ ಸಿಂಗ್, ಕೆ.ಸಿ ವೇಣುಗೋಪಾಲ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಕೆಲವು ನಾಯಕರು ಕೂಡ ಇದ್ದಾರೆ. ಟಾಸ್ಕ್ ಫೋರ್ಸ್‌ನಲ್ಲಿ ಪಿ. ಚಿದಂಬರಂ, ಪ್ರಿಯಾಂಕಾ ಗಾಂಧಿ ವಾದ್ರಾ, ಮುಕುಲ್ ವಾಸ್ನಿಕ್, ಜೈರಾಮ್ ರಮೇಶ್, ಕೆ.ಸಿ ವೇಣುಗೋಪಾಲ್, ಅಜಯ್ ಮಾಕನ್ ಮತ್ತು ರಣದೀಪ್ ಸುರ್ಜೆವಾಲಾ ಇದ್ದಾರೆ.

ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರಿಗೆ ಸಂಘಟನೆ, ಸಂವಹನ ಮತ್ತು ಮಾಧ್ಯಮ, ಪ್ರಭಾವ, ಹಣಕಾಸು ಮತ್ತು ಚುನಾವಣಾ ನಿರ್ವಹಣೆಗೆ ಸಂಬಂಧಿಸಿದ ನಿರ್ದಿಷ್ಟ ಕಾರ್ಯಗಳನ್ನು ನಿಯೋಜಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಪ್ರತಿಯೊಂದೂ ಮೀಸಲಾದ ತಂಡಗಳನ್ನು ಹೊಂದಿರುತ್ತದೆ. ಸಂಸದೀಯ ಮಂಡಳಿಯ ಬದಲಿಗೆ ಪ್ರತಿ ರಾಜ್ಯ ಮತ್ತು ಕೇಂದ್ರದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿಯನ್ನು ಹೊಂದಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ. ಇದು ಕಾಂಗ್ರೆಸ್‌ನ ಬಂಡಾಯ ಗುಂಪಿನ ಪ್ರಮುಖ ಬೇಡಿಕೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್