AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರನ್ನಾದರೂ ಅಪರಾಧಿ ಎಂದು ಘೋಷಿಸಲು ಯೋಗಿ ಮುಖ್ಯ ನ್ಯಾಯಾಧೀಶರೇನು?: ಓವೈಸಿ ಕಿಡಿ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದು, ಯೋಗಿ ಅಲಹಾಬಾದ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಯಾರನ್ನಾದರೂ ಅಪರಾಧಿ ಎಂದು ಘೋಷಿಸಲು ಯೋಗಿ ಮುಖ್ಯ ನ್ಯಾಯಾಧೀಶರೇನು?: ಓವೈಸಿ ಕಿಡಿ
Asaduddin Owaisi
TV9 Web
| Edited By: |

Updated on:Jun 13, 2022 | 11:28 AM

Share

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದು, ಯೋಗಿ ಅಲಹಾಬಾದ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ. ಗುಜರಾತ್‍ನ ಕಚ್‍ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗಿ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ. ಅವರ ಮನೆಗಳನ್ನು ಕೆಡವುತ್ತಾರೆ ಎಂದು ಆರೋಪಿಸಿದರು.

ಪ್ರಯಾಗ್‍ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ವಿರುದ್ಧ ಓವೈಸಿ ವಾಗ್ದಾಳಿ ನಡೆಸಿದ್ದು, ಪ್ರಯಾಗ್‍ ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ನ ಮನೆಯನ್ನು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ನೆಲಸಮಗೊಳಿಸಿದೆ.

ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ವಂಸಕ್ಕೂ ಮೊದಲು ಅವರ ಮನೆಯಲ್ಲಿ ಶೋಧ ನಡೆಸಲಾಗಿತ್ತು.

ಆರೋಪಿ ಜಾವೇದ್ ಮೊಹಮ್ಮದ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡರಾಗಿದ್ದು, ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆ. ಫಾತಿಮಾ ಕಳೆದ ವರ್ಷ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು. ಪ್ರಯಾಗ್ ರಾಜ್ ಹಿಂಸಾಚಾರದಲ್ಲಿ ಆಕೆಯ ಪಾತ್ರವೂ ಇರಬಹುದೇ ಎಂಬ ಅನುಮಾನದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರವಾದಿ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಉತ್ತರ ಪ್ರದೇಶದ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಯೋಗಿ ಆದಿತ್ಯಾನಾಥ್ ಸರ್ಕಾರ ತನ್ನ ಬುಲ್ಡೋಜರ್ ಕ್ರಮ ನಡೆಸಿತ್ತು.

ಪ್ರಯಾಗ್ರಾಜ್ ಹಿಂಸಾಚಾರದ ಮಾಸ್ಟರ್ ಮೈಂಡ್ ಮತ್ತು ವೆಲ್ಫೇರ್ ಪಾರ್ಟಿ ನಾಯಕ ಜಾವೇದ್ ಅಹ್ಮದ್ ಮನೆ ಧ್ವಂಸ ಕಾರ್ಯಾಚರಣೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ಪೊಲೀಸರನ್ನು ನಿಯೋಜಿಸಲಾಗಿತ್ತು.

ಪ್ರಯಾಗ್ ರಾಜ್ ಪ್ರಾಧಿಕಾರವು ಅಹ್ಮದ್‌ ಅವರ ಮನೆ ಕೆಡವುವುದಕ್ಕೆ ಸಂಬಂಧಿಸಿದ ನೋಟಿಸ್‌ ಅಂಟಿಸಿತ್ತು. ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಭಾನುವಾರದೊಳಗೆ ಮನೆ ಖಾಲಿ ಮಾಡಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Mon, 13 June 22

Follow Us
TV9 Web
TV9 Web

TV9 Kannada

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ