ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದು, ಯೋಗಿ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ. ಗುಜರಾತ್‍ನ ಕಚ್‍ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗಿ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ. ಅವರ ಮನೆಗಳನ್ನು ಕೆಡವುತ್ತಾರೆ ಎಂದು ಆರೋಪಿಸಿದರು.
ಪ್ರಯಾಗ್‍ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ವಿರುದ್ಧ ಓವೈಸಿ ವಾಗ್ದಾಳಿ ನಡೆಸಿದ್ದು, ಪ್ರಯಾಗ್ ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ನ ಮನೆಯನ್ನು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ನೆಲಸಮಗೊಳಿಸಿದೆ.
ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ವಂಸಕ್ಕೂ ಮೊದಲು ಅವರ ಮನೆಯಲ್ಲಿ ಶೋಧ ನಡೆಸಲಾಗಿತ್ತು.
ಆರೋಪಿ ಜಾವೇದ್ ಮೊಹಮ್ಮದ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡರಾಗಿದ್ದು, ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆ. ಫಾತಿಮಾ ಕಳೆದ ವರ್ಷ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು. ಪ್ರಯಾಗ್ ರಾಜ್ ಹಿಂಸಾಚಾರದಲ್ಲಿ ಆಕೆಯ ಪಾತ್ರವೂ ಇರಬಹುದೇ ಎಂಬ ಅನುಮಾನದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರವಾದಿ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಉತ್ತರ ಪ್ರದೇಶದ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಯೋಗಿ ಆದಿತ್ಯಾನಾಥ್ ಸರ್ಕಾರ ತನ್ನ ಬುಲ್ಡೋಜರ್ ಕ್ರಮ ನಡೆಸಿತ್ತು.
ಪ್ರಯಾಗ್ರಾಜ್ ಹಿಂಸಾಚಾರದ ಮಾಸ್ಟರ್ ಮೈಂಡ್ ಮತ್ತು ವೆಲ್ಫೇರ್ ಪಾರ್ಟಿ ನಾಯಕ ಜಾವೇದ್ ಅಹ್ಮದ್ ಮನೆ ಧ್ವಂಸ ಕಾರ್ಯಾಚರಣೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ಪೊಲೀಸರನ್ನು ನಿಯೋಜಿಸಲಾಗಿತ್ತು.
ಪ್ರಯಾಗ್ ರಾಜ್ ಪ್ರಾಧಿಕಾರವು ಅಹ್ಮದ್ ಅವರ ಮನೆ ಕೆಡವುವುದಕ್ಕೆ ಸಂಬಂಧಿಸಿದ ನೋಟಿಸ್ ಅಂಟಿಸಿತ್ತು. ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಭಾನುವಾರದೊಳಗೆ ಮನೆ ಖಾಲಿ ಮಾಡಬೇಕು ಎಂದು ನೋಟಿಸ್ನಲ್ಲಿ ತಿಳಿಸಲಾಗಿತ್ತು.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:24 am, Mon, 13 June 22