Video: ರೈಲಿನಿಂದ ಬೆಡ್​ಶೀಟ್​ಗಳ ಕದ್ದು ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದ ಯುವತಿ

ಪ್ರಯಾಣಿಕರೊಬ್ಬರು ರೈಲ್ವೆಯ ಬೆಡ್​ಶೀಟ್​ಗಳನ್ನು ಕದ್ದು ಸಿಕ್ಕಿಬಿದ್ದಿರುವ ಘಟನೆ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ರೈಲಿನಿಂದ ಬೆಡ್​ಶೀಟ್​ಗಳನ್ನು ಕದ್ದು ಯುವತಿಯೊಬ್ಬಳು ರೈಲ್ವೆ ಸಿಬ್ಬಂದಿ ಬಳಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ಪರಿಶೀಲಿಸುತ್ತಿದ್ದರು. ರೈಲ್ವೆ ಬೋಗಿಗಳಲ್ಲಿರಿಸಿದ್ದ ಟವೆಲ್​ಗಳು ಹಾಗೂ ಬೆಡ್​ಶೀಟ್​ಗಳನ್ನು ಕದ್ದಿರುವುದು ದೃಢಪಟ್ಟಿದೆ.

Video: ರೈಲಿನಿಂದ ಬೆಡ್​ಶೀಟ್​ಗಳ ಕದ್ದು ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದ ಯುವತಿ
ಯುವತಿ
Follow us
ನಯನಾ ರಾಜೀವ್
|

Updated on: Jan 19, 2025 | 9:22 AM

ರೈಲಿನಿಂದ ಬೆಡ್​ಶೀಟ್​ಗಳನ್ನು ಕದ್ದು ಯುವತಿಯೊಬ್ಬಳು ರೈಲ್ವೆ ಸಿಬ್ಬಂದಿ ಬಳಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ಪರಿಶೀಲಿಸುತ್ತಿದ್ದರು. ರೈಲ್ವೆ ಬೋಗಿಗಳಲ್ಲಿರಿಸಿದ್ದ ಟವೆಲ್​ಗಳು ಹಾಗೂ ಬೆಡ್​ಶೀಟ್​ಗಳನ್ನು ಕದ್ದಿರುವುದು ದೃಢಪಟ್ಟಿದೆ.

ತನ್ನದಷ್ಟೇ ಅಲ್ಲ ಬೋಗಿಗಳಿಂದ ಹಲವು ಬೆಡ್​ಶೀಟ್​ಗಳನ್ನು ಆಕೆ ಕದ್ದಿದ್ದಳು. whoismayankk ಎಂಬ ಹೆಸರಿನ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಪ್ರಯಾಣಿಕರು ಕಂಬಳಿಗಳು ಮತ್ತು ದಿಂಬುಗಳಂತಹ ರೈಲ್ವೆ ಆಸ್ತಿಯನ್ನು ಕದಿಯುವ ಪ್ರಕರಣಗಳು ದಿನದಿಂದ ಹೆಚ್ಚುತ್ತಿವೆ. 4,600 ಕ್ಕೂ ಹೆಚ್ಚು ಮಂದಿ ಈ ವಿಡಿಯೋ ವೀಕ್ಷಣೆ ಮಾಡಿದ್ದು, ಆನ್‌ಲೈನ್‌ನಲ್ಲಿ ವ್ಯಾಪಕ ಟೀಕೆಗಳನ್ನು ಹುಟ್ಟುಹಾಕಿತು.

ಆಕೆಗೆ ಕಠಿಣ ದಂಡ ವಿಧಿಸಬೇಕು ಎಂದು ಒತ್ತಾಯಿಸಿದರು. ಒಬ್ಬ ಬಳಕೆದಾರರು ಮಾತನಾಡಿ ನಾನು ಒಮ್ಮೆ ದೆಹಲಿಯಲ್ಲಿ ಪಿಜಿಯಲ್ಲಿದ್ದೆ ಆಗ ಅಲ್ಲಿನ ಮಾಲೀಕರು ಕಪಾಟಿನಲ್ಲಿ ರೈಲ್ವೆಯ ಬೆಡ್​ಶೀಟ್​ಗಳನ್ನು ಇರಿಸಿದ್ದರು. ಅದು ಹೇಗೆ ಇಂಥಾ ಕೆಲಸ ಮಾಡಲು ಮನಸ್ಸು ಬರುತ್ತದೆ ಎಂದು ಇನ್ನೊಬ್ಬ ಬಳಕೆದಾರರು ಕೇಳಿದ್ದಾರೆ.

ನಿದ್ದೆ ಮಾಡುತ್ತಿರುವಂತೆ ನಟಿಸಿ, ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನ ನಿದ್ದೆ ಮಾಡುತ್ತಿರುವಂತೆ ನಟಿಸಿ, ಪಕ್ಕದಲ್ಲೇ ಮಲಗಿದ್ದ ವ್ಯಕ್ತಿಯ ಪ್ಯಾಂಟ್​​​ ಜೇಬಿನಿಂದ ಫೋನ್​​ ಎಗರಿಸಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಕಳ್ಳ ಫೋನ್​​​ ಎಗರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಫೋನ್​​ ಕಳೆದುಕೊಂಡ ವ್ಯಕ್ತಿಯ ದೂರಿನ ಆಧಾರದ ಮೇಲೆ ರೈಲ್ವೆ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದು,ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ರೈಲ್ವೆ ಪೊಲೀಸರು ಕೊನೆಗೆ ಕಳ್ಳನನ್ನು ಗುರುತಿಸಿದ್ದಾರೆ. ನಿದ್ದೆಯ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ 21 ವರ್ಷದ ಅವಿನೀಶ್ ಸಿಂಗ್ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ತನಿಖೆಯ ವೇಳೆ ಐದು ಮೊಬೈಲ್ ಗಳನ್ನು ಕಳವು ಮಾಡಿರುವುದು ತಿಳಿದು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ