
ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್ಆರ್ ಕಾಂಗ್ರೆಸ್ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು.
ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿತ್ತು.
ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿ ಪಟ್ಟಣದ ಆರ್‌ಟಿಸಿ ಬಸ್ ನಿಲ್ದಾಣ ವೃತ್ತದಿಂದ ಗ್ರಾಮೀಣ ಪೊಲೀಸ್ ಠಾಣೆಯವರೆಗೆ ಸಾರ್ವಜನಿಕರ ಸಮ್ಮುಖದಲ್ಲಿ ಪೊಲೀಸರು ಪ್ರಮುಖ ಆರೋಪಿ ಅಜಯ್ ದೇವನನ್ನು ಮೆರವಣಿಗೆ ಮಾಡಿದರು.
ಅಜಯ್ ದೇವನನ್ನು ಬರಿಗಾಲಿನಲ್ಲಿ ನಡೆಯುವಂತೆ ಮಾಡಲಾಗಿತ್ತು. ಸಂಧ್ಯಾರಾಣಿ ಎಂಬುವವರು ಇಲ್ಲಿ ಹೆಚ್ಚು ಜನ ಸಂದಣಿ ಇದೆ ಸ್ವಲ್ಪ ದೂರದಲ್ಲಿ ಪಟಾಕಿ ಸಿಡಿಸಿ ಎಂದು ಮನವಿ ಮಾಡಿಕೊಂಡಿದ್ದಕ್ಕೆ ಕೋಪಗೊಂಡು ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದ.
ಮತ್ತಷ್ಟು ಓದಿ: 7 ತಿಂಗಳ ಗರ್ಭಿಣಿ ಹತ್ಯೆ ಪ್ರಕರಣ: ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ವೈಎಸ್‌ಆರ್‌ಸಿಪಿ ಕಾರ್ಯಕರ್ತ ಅಂಜಿನಪ್ಪ ಜೊತೆ ಸೇರಿ, ಆಕೆಯ ಕತ್ತು ಹಿಸುಕಿ ಕೊಂದು, ಆಕೆಯ ಗರ್ಭದಲ್ಲಿರುವ ಮಗುವಿಗೆ ಹಾನಿ ಮಾಡುವ ಉದ್ದೇಶದಿಂದ ಹೊಟ್ಟೆಗೆ ಒದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅಜಯ್ ದೇವಾ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಸ್ತುತ ತಲೆಮರೆಸಿಕೊಂಡಿರುವ ಎರಡನೇ ಆರೋಪಿ ಅಂಜಿನಪ್ಪನನ್ನು ಪತ್ತೆಹಚ್ಚಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.ಈ ಹಲ್ಲೆಯನ್ನು ಸ್ಪಷ್ಟ ಕ್ರಿಮಿನಲ್ ಉದ್ದೇಶದಿಂದ ನಡೆಸಲಾಗಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕದಿರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಶಿವ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಚಂದ್ರಬಾಬು ನಾಯ್ಡು ನೇತೃತ್ವದ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿ ಆಂಧ್ರಪ್ರದೇಶ ಮಹಿಳೆಯರಿಗೆ ಅಸುರಕ್ಷಿತವಾಗಿದೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದ ನಂತರ ಈ ಘಟನೆ ನಡೆದಿದೆ. ಸರ್ಕಾರವು ನಾಗರಿಕರನ್ನು ರಕ್ಷಿಸುವ ಬದಲು ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಪೊಲೀಸ್ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ