AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ

ಗರ್ಭಿಣಿ ಪತ್ನಿಗೆ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ.

Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ
ಗರ್ಭಿಣಿ
ನಯನಾ ರಾಜೀವ್
|

Updated on: Apr 08, 2025 | 9:20 AM

Share

ಹೈದರಾಬಾದ್, ಏಪ್ರಿಲ್ 08: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಗರ್ಭಿಣಿ(Pregnant)ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೈದರಾಬಾದ್​ನಲ್ಲಿ ನಡೆದ ಘಟನೆ ಇದಾಗಿದೆ. ಈ ಆಘಾತಕಾರಿ ಘಟನೆ ಏಪ್ರಿಲ್ 1 ರ ರಾತ್ರಿ ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ. ಬಳಿಕ ಸತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದವಳು ಗರ್ಭಿಣಿ!
Image
ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದ ಯುವಕ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
13 ವರ್ಷದ ಕ್ಯಾನ್ಸರ್​ ರೋಗಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ (NIMS) ಗೆ ಸ್ಥಳಾಂತರಿಸಲಾಯಿತು. ತಲೆಗೆ ಗಂಭೀರವಾದ ಗಾಯಗಳಾಗಿದ್ದರಿಂದ ಅವರು ಕೋಮಾಕ್ಕೆ ಜಾರಿದ್ದಾರೆ. ಪೊಲೀಸರ ಪ್ರಕಾರ, ಮೊಹಮ್ಮದ್ ಬಸ್ರತ್ ಅವರು ಅಕ್ಟೋಬರ್ 2024 ರಲ್ಲಿ ಕೋಲ್ಕತ್ತಾದ ಶಬಾನಾ ಪರ್ವೀನ್ ಅವರನ್ನು ಪ್ರೇಮ ವಿವಾಹವಾಗಿದ್ದರು. ಈ ದಂಪತಿಗಳು ಹಫೀಜ್‌ಪೇಟೆಯ ಆದಿತ್ಯನಗರದಲ್ಲಿ ವಾಸಿಸುತ್ತಿದ್ದರು.

ಮತ್ತಷ್ಟು ಓದಿ: ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದ ಹೆಂಡತಿ ಗರ್ಭಿಣಿ; ಶಾಕಿಂಗ್ ವಿಷಯ ಬಯಲು

ಇಂಟೀರಿಯರ್ ಡಿಸೈನರ್ ಆಗಿದ್ದ ಬಸ್ರತ್ ಜೀವನೋಪಾಯಕ್ಕಾಗಿ ವಿಕಾರಾಬಾದ್‌ನಿಂದ ಹೈದರಾಬಾದ್‌ಗೆ ವಲಸೆ ಬಂದು ಆದಿತ್ಯನಗರದಲ್ಲಿ ವಾಸಿಸುತ್ತಿದ್ದರು, ಅಲ್ಲಿ ಅವರು ಶಬಾನಾ ಅವರನ್ನು ಸಂಪರ್ಕಿಸಿದರು. ಮಾರ್ಚ್ 29 ರಂದು ವಾಂತಿ ಸಮಸ್ಯೆಯಿಂದ ಬಳಲುತ್ತಿದ್ದ ಪರ್ವೀನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು. ಅವರ ಸ್ಥಿತಿ ಸುಧಾರಿಸಿದ ನಂತರ, ಏಪ್ರಿಲ್ 1 ರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಆಸ್ಪತ್ರೆಯಿಂದ ಹೊರಬಂದ ನಂತರ, ಅವರು ಯಾವುದೋ ವಿಷಯಕ್ಕೆ ಜಗಳವಾಡಿದರು. ಬಸ್ರತ್ ಶಬಾನಾಳನ್ನು ಒದೆಯುತ್ತಿರುವುದು ಕಂಡುಬಂದಿತು, ಮತ್ತು ಅವಳು ನೆಲಕ್ಕೆ ಕುಸಿದ ನಂತರ, ಪಕ್ಕದಲ್ಲಿದ್ದ ಕಲ್ಲು ಎತ್ತಿಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಗಚಿಬೌಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡರು. ಬಸ್ರತ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ