ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ.

ಮುಜಾಫರ್ಪುರ, ಜುಲೈ 02: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ಆಕೆ ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು, ಆಕೆಯ ಕುಟುಂಬದವರು ಮೂಢನಂಬಿಕೆಯಿಂದ ಮಾಂತ್ರಿಕನ ಬಳಿ ಕರೆದುಕೊಂಡು ಬಂದಿದ್ದರು. ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ. ಆದರೆ ಮತ್ತೊಮ್ಮೆ ಕೂಡ ಹೀಗೆ ಮಾಡಿದ್ದ,ಮೂರನೇ ಬಾರಿಗೆ ಕರೆದೊಯ್ದಾಗ ಆರೋಪಿ ಇದೇ ಕೆಲಸವನ್ನು ಮತ್ತೆ ಮಾಡಿದಾಗ ಆಕೆ ಸುಮ್ಮನಿರಲಾರದೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ.
ಮಹಿಳೆ ಸ್ಥಿತಿ ತೀರಾ ಹದಗೆಟ್ಟಿತ್ತು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಕೂಡಲೇ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಶಿವಾಯಿಪಟ್ಟಿ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಗಿದೆ, ಪ್ರಕರಣದಲ್ಲಿ ತನಿಖೆ ಮತ್ತು ಕ್ರಮ ಮುಂದುವರೆದಿದೆ.
ಮತ್ತಷ್ಟು ಓದಿ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಕೆಲವುತಿಂಗಳುಗಳ ಹಿಂದೆ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿಯೂ ಕೂಡ ಭೂತ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಭೂತ ಬಿಡಿಸುವ ನೆಪದಲ್ಲಿ ಮಾಂತ್ರಿಕ ಹಾಗೂ ಆತನ ಸಹಚರರು ತನ್ನನ್ನು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಮುಜಾಫರ್‌ಪುರದಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಮೇ 26 ರಂದು ಅಪ್ರಾಪ್ತಳ ಮೇಲೆ ಅತ್ಯಾಚಾರ ನಡೆಸಿ, ನಂತರ ಹಲ್ಲೆ ನಡೆಸಲಾಯಿತು. ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಯ ಬಳಿ ಚಾಕೊಲೇಟ್‌ನಿಂದ ಆಮಿಷವೊಡ್ಡಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು.ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಹಾಸಿಗೆ ಸಿಗದೆ ಕಾಯುವಂತಾಗಿತ್ತು. ಬಾಲಕಿ ಪ್ರಾಣ ಬಿಟ್ಟಿದ್ದಳು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




