ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ.
ಪಂಜಾಬ್ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣೆ ಖಾತೆಯ ಜವಾಬ್ದಾರಿ ನೀಡಿದ್ದಾರೆ.
Published On - 7:57 am, Fri, 18 September 20