Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಈ ಮಸೂದೆ ಉಭಯ ಸದನದಲ್ಲಿ ಅಂಗೀಕರವಾಗಿದ್ದು, ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮ ಅಂಕಿತವಾಗಿ ಕಾನೂನಾಗಿ ಜಾರಿಗೆ ಬಂದಿದೆ.
ದೆಹಲಿ, ಸೆ.29: ಕೇಂದ್ರದ ಮಹತ್ವದ ಮಸೂದೆ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಈ ಮಸೂದೆ ಉಭಯ ಸದನದಲ್ಲಿ ಅಂಗೀಕರವಾಗಿದ್ದು, ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತವಾಗಿ ಕಾನೂನಾಗಿ ಜಾರಿಗೆ ಬಂದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲಿದ್ದಾರೆ. ಆದರೆ ಇದು ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ.
ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಸೂದೆಯನ್ನು ಅಂಗೀರಿಸಿತ್ತು. ಎಲ್ಲರೂ ಪಕ್ಷ ಭೇದವಿಲ್ಲ ಈ ಮಸೂದೆಗೆ ಸಮ್ಮತಿ ಸೂಚಿಸಿದರು. ಇದನ್ನು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಸಮಾನವಾಗಿ ಸ್ವೀಕರಿಸಿತ್ತು. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಮಂಡನೆ ಮಾಡಿ, ಯಶಸ್ವಿಯಾಗಿ ಅಂಗೀಕರಿಸಿ, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಮಸೂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಆಗಿದ್ದು, ಇದೀಗ ಈ ಮಸೂದೆ ಕಾನೂನಾಗಿ ಜಾರಿಗೆ ಬರಲಿದೆ.
ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ ಅರ್ಜುನ್ ರಾಮ್
ಸಂಸತ್ ವಿಶೇಷ ಅಧಿವೇಶನವನ್ನು ಹೊಸ ಸಂಸತ್ ಕಟ್ಟಡದಲ್ಲಿ ನಡೆಸಲಾಗಿತ್ತು. ಇಲ್ಲಿ ಈ ಮಸೂದೆ ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ಇನ್ನು ಈ ಮಸೂದೆಯನ್ನು ಎಐಎಂಐಎಂ ಮಾತ್ರ ವಿರೋಧಿಸಿದೆ. ಏಕೆಂದರೆ ಇದರಿಂದ ಮುಸ್ಲಿಂ ಮಹಿಳೆಯರಿಗೆ ಯಾವುದೇ ಲಾಭವಿಲ್ಲ. ಇದು ಹಿಂದೂ ಮಹಿಳೆಯರಿಗೆ ಮಾತ್ರ ಎಂದು ಹೇಳಿದೆ. ಈ ಮಸೂದೆ ಕಾನೂನಾಗಿ ರೂಪುಗೊಂಡರು, ಅನುಷ್ಠಾನಕ್ಕೆ ಬರಲು ತುಂಬಾ ಸಮಯಬೇಕು ಎಂದು ಕಾಂಗ್ರೆಸ್ ಹೇಳಿತ್ತು. ಒಟ್ಟಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ರಾಷ್ಟ್ರಪತಿಗಳು ಸಹಿಯಾಗಿ ಕಾನೂನಾಗಿ ಜಾರಿಯಾಗಿದೆ.
ಲೋಕಸಭೆಯಲ್ಲಿ ಅಂಗೀಕಾರ ಪಡೆದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಸೆ.21ರಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ಬಲವಾದ ಬೆಂಬಲವನ್ನು ಕೂಡ ಪಡೆಯಿತು. 60 ಸದಸ್ಯರನ್ನು ಒಳಗೊಂಡ ಎಂಟು ಗಂಟೆಗಳ ಚರ್ಚೆಯ ನಂತರ, ಮಸೂದೆಯನ್ನು ಅಂಗೀಕರಿಸಿತು, 454 ಸದಸ್ಯರು ಪರವಾಗಿ ಮತ ಚಲಾಯಿಸಿದರು, ಕೇವಲ ಇಬ್ಬರು ಅದರ ವಿರುದ್ಧವಾಗಿ ಮತ ಚಲಾಯಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:29 pm, Fri, 29 September 23