AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದರ್ಶನ

Draupadi Murmu Interview: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ತಮ್ಮ ಪ್ರಯಾಣವನ್ನು ಹಂಚಿಕೊಂಡಿದ್ದಾರೆ. ಮಂಗಳವಾರ ಪ್ರಸಾರವಾಗಲಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸಂದರ್ಶಿಸಿದ್ದಾರೆ. ಸಂದರ್ಶನದಲ್ಲಿ, ಮುರ್ಮು ಅವರು ತಮ್ಮ ಬಾಲ್ಯದ ನೆನಪುಗಳು ಮತ್ತು ಸಾರ್ವಜನಿಕ ಜೀವನದ ಕಥೆಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದರ್ಶನ
ನಯನಾ ರಾಜೀವ್
|

Updated on:Feb 14, 2024 | 11:29 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರ ಸಂದರ್ಶನ ಮಾಡಿದ್ದಾರೆ. ರಾಷ್ಟ್ರಪತಿಯನ್ನು ಕೇಂದ್ರ ಸಚಿವೆಯೊಬ್ಬರು ಸಂದರ್ಶನ ಮಾಡಿದ್ದು ಇದೇ ಮೊದಲು. ರಾಷ್ಟ್ರಪತಿ ಮುರ್ಮು ಅವರು ಒಡಿಶಾದ ರಾಯ್​ರಂಗಪುರದಿಂದ ರಾಷ್ಟ್ರಪತಿ ಭವನಕ್ಕೆ ಬರುವಾಗಿನ ಅವರ ಹಾದಿ ಹೇಗಿತ್ತು, ಎಷ್ಟು ಕಷ್ಟಗಳು, ಸವಾಲುಗಳನ್ನು ಎದುರಿಸಿದ್ದಾರೆ ಎಂಬುದನ್ನು ಸ್ಮೃತಿ ಇರಾನಿಯವರ ಬಳಿ ಹಂಚಿಕೊಂಡಿದ್ದಾರೆ.

ಇದು ಇಂದು ಬೆಳಗ್ಗೆ 8 ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಯಿತು ಡಿಡಿ-1ರಲ್ಲಿ ಸಂಜೆ 4 ಗಂಟೆಗೆ ಪ್ರಸಾರವಾಗುತ್ತದೆ. ಪ್ರಪ್ರಥಮ ಬಾರಿಗೆ ನೀವು ರಾಷ್ಟ್ರಪತಿಯ ಜೀವನ ಪಯಣದ ಅಸಾಧಾರಣ ಮಜಲುಗಳ ಬಗ್ಗೆ ತಿಳಿದುಕೊಳ್ಳಬಹುದು ಎಂದು ಸ್ಮೃತಿ ಇರಾನಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದ್ರೌಪದಿ ಮುರ್ಮು ಅವರ ಜೀವನ ಮಹಿಳಾ ಶಕ್ತಿಯ ಪ್ರತೀಕ, ಸಣ್ಣ ಹಳ್ಳಿಯಿಂದ ಬಂದು ದೇಶದ ಅತ್ಯುನ್ನತ ಸ್ಥಾನಕ್ಕೆ ಏರಿದ ಅವರ ಅಸಾಧಾರಣ ಕಥೆ ಅನೇಕರಿಗೆ ಸ್ಫೂರ್ತಿ ನೀಡುತ್ತದೆ. ಸ್ಮೃತಿ ಇರಾನಿ ಯೂಟ್ಯೂಬ್ ಲಿಂಕ್​ನ್ನು ಕೂಡ ನೀಡಿದ್ದಾರೆ. ನೀವು ಅಲ್ಲಿ ಸಂದರ್ಶನ ವೀಕ್ಷಿಸಬಹುದು.

ಯೂಟ್ಯೂಬ್ ಲಿಂಕ್ ಇಲ್ಲಿದೆ

‘ನಯೀ ಸೋಚ್, ನಯೀ ಕಹಾನಿ ಎ ರೇಡಿಯೋ ಜರ್ನಿ ವಿತ್ ಸ್ಮೃತಿ ಇರಾನಿ’ ಎಂಬ ಶೀರ್ಷಿಕೆಯಲ್ಲಿ ಪ್ರಸಾರಗೊಂಡಿದೆ. ಸಂದರ್ಶನದಲ್ಲಿ ಮುರ್ಮು ಅವರು ತಮ್ಮ ಶೈಕ್ಷಣಿಕ, ವೃತ್ತಿಪರ ಮತ್ತು ರಾಜಕೀಯ ಪ್ರಯಾಣದ ಬಗ್ಗೆ ಬೆಳಕು ಚೆಲ್ಲಿದರು ಮತ್ತು ರಾಷ್ಟ್ರಪತಿಯಾಗಿ ಸಾರ್ವಜನಿಕರೊಂದಿಗೆ ಸಂವಾದದ ಅನುಭವಗಳನ್ನು ಹಂಚಿಕೊಂಡರು. ಅವರು ದೆಹಲಿ ಮೆಟ್ರೋದಲ್ಲಿ ತಮ್ಮ ಇತ್ತೀಚಿನ ಪ್ರಯಾಣದ ಬಗ್ಗೆ ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 14 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ