AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ; ಪ್ರಶ್ನೆ ಪತ್ರಿಕೆ ಸೋರಿಕೆ, ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪ

ಸದನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಂಬರುವ ಬಜೆಟ್‌ನಲ್ಲಿ ಸರ್ಕಾರ ಹಲವಾರು ದೊಡ್ಡ ಘೋಷಣೆಗಳನ್ನು ಮಾಡಲಿದೆ. ಬಜೆಟ್ ಪ್ರಮುಖ ಆರ್ಥಿಕ ಮತ್ತು ಸಾಮಾಜಿಕ ನಿರ್ಧಾರಗಳನ್ನು ಹೊಂದಿರುತ್ತದೆ. ಇದಕ್ಕಾಗಿ ಅನೇಕ ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜನರ ಆಕಾಂಕ್ಷೆಗಳನ್ನು ಪೂರೈಸಲು ಸುಧಾರಣೆಗಳ ವೇಗವನ್ನು ಹೆಚ್ಚಿಸಲಾಗುವುದು ಎಂದಿದ್ದಾರೆ.

ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ; ಪ್ರಶ್ನೆ ಪತ್ರಿಕೆ ಸೋರಿಕೆ, ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪ
ದ್ರೌಪದಿ ಮುರ್ಮು
ರಶ್ಮಿ ಕಲ್ಲಕಟ್ಟ
|

Updated on:Jun 27, 2024 | 1:58 PM

Share

ದೆಹಲಿ ಜೂನ್ 27: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET UG-2024) ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ್ದು ತಮ್ಮ ಸರ್ಕಾರವು ಈ ಆರೋಪಗಳ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸುತ್ತದೆ ಎಂದು ಭರವಸೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುರ್ಮ ಹೇಳಿದ್ದಾರೆ.

ನ್ಯಾಯಯುತ ತನಿಖೆ ನಡೆಸಲು ಮತ್ತು ಇತ್ತೀಚೆಗೆ ನಡೆದ ಕೆಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ನನ್ನ ಸರ್ಕಾರ ಬದ್ಧವಾಗಿದೆ. ಈ ಹಿಂದೆ ವಿವಿಧ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳನ್ನು ನಾವು ನೋಡಿದ್ದೇವೆ, ಪಕ್ಷ ರಾಜಕೀಯ ಬದಿಗಿಟ್ಟು ದೇಶಾದ್ಯಂತ ಬಲವಾದ ಹೆಜ್ಜೆಗಳನ್ನು ಇಡುವ ಅಗತ್ಯವಿದೆ. ಸಂಸತ್ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಬಲವಾದ ಕಾನೂನನ್ನು ಮಾಡಿದೆ ಎಂದು ಹೇಳಿದ್ದಾರೆ.

ದೇಶದ ಯುವಕರು ದೊಡ್ಡ ಕನಸುಗಳನ್ನು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಯಾವುದೇ ಕಾರಣದಿಂದ ಪರೀಕ್ಷೆಗಳಲ್ಲಿ ಅಡಚಣೆ ಉಂಟಾದರೆ ಅದು ಸೂಕ್ತವಲ್ಲ, ಸರಕಾರಿ ನೇಮಕಾತಿ ಮತ್ತು ಪರೀಕ್ಷೆಗಳಲ್ಲಿ ಸ್ಪಷ್ಟತೆ ಮತ್ತು ಪಾರದರ್ಶಕತೆ ಅತ್ಯಗತ್ಯ ಎಂದಿದ್ದಾರೆ ಮುರ್ಮು.

ಸರ್ಕಾರದ ನೀತಿಗಳನ್ನು ವಿರೋಧಿಸುವಾಗ ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸದಂತೆ ರಾಷ್ಟ್ರಪತಿ ಮುರ್ಮು ಸಂಸತ್ತಿನ ಎಲ್ಲಾ ಸದಸ್ಯರಿಗೆ ಸಲಹೆ ನೀಡಿದರು.

ನೀತಿಗಳನ್ನು ವಿರೋಧಿಸುವುದು ಸಂಸತ್ತಿನ ಕಲಾಪಗಳನ್ನು ಅಡ್ಡಿಪಡಿಸುವುದಕ್ಕಿಂತ ಭಿನ್ನವಾಗಿದೆ. ಎಲ್ಲಾ ಸದಸ್ಯರಿಗೆ ಜನರ ಹಿತಾಸಕ್ತಿಯು ಮುಖ್ಯ ವಿಷಯವಾಗಿರಬೇಕು  ಎಂದು ಅವರು ಹೇಳಿದರು.

ಮುಂಬರುವ ಬಜೆಟ್‌ನಲ್ಲಿ ಸರ್ಕಾರ ಹಲವಾರು ದೊಡ್ಡ ಘೋಷಣೆಗಳನ್ನು ಮಾಡಲಿದೆ ಎಂದು ಹೇಳಿದ ಮುರ್ಮು, ಬಜೆಟ್ ಪ್ರಮುಖ ಆರ್ಥಿಕ ಮತ್ತು ಸಾಮಾಜಿಕ ನಿರ್ಧಾರಗಳನ್ನು ಹೊಂದಿರುತ್ತದೆ. ಇದಕ್ಕಾಗಿ ಅನೇಕ ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜನರ ಆಕಾಂಕ್ಷೆಗಳನ್ನು ಪೂರೈಸಲು ಸುಧಾರಣೆಗಳ ವೇಗವನ್ನು ಹೆಚ್ಚಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Parliament Session: ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ಹೂಡಿಕೆಗಾಗಿ ರಾಜ್ಯಗಳ ನಡುವೆ ಆರೋಗ್ಯಕರ ಸ್ಪರ್ಧೆ ಇರಬೇಕು ಎಂದು ತಮ್ಮ ಸರ್ಕಾರ ನಂಬುತ್ತದೆ. ಇದು ಸ್ಪರ್ಧಾತ್ಮಕ-ಸಹಕಾರಿ ಫೆಡರಲಿಸಂನ ಮನೋಭಾವ ಎಂದು ಹೇಳಿದ್ದಾರೆ. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕಳೆದ 10 ವರ್ಷಗಳಲ್ಲಿ ಇದು ಸಾಮಾನ್ಯ ಸಮಯವಲ್ಲದಿದ್ದರೂ ಸಹ ಸರಾಸರಿ 8 ಶೇಕಡಾ ಬೆಳವಣಿಗೆಯಾಗಿದೆ.

ವಿಶ್ವದ ವಿವಿಧ ಭಾಗಗಳಲ್ಲಿ ಜಾಗತಿಕ ಸಾಂಕ್ರಾಮಿಕ ಮತ್ತು ಸಂಘರ್ಷಗಳ ನಡುವೆಯೂ ಈ ಬೆಳವಣಿಗೆ ದರವನ್ನು ಸಾಧಿಸಲಾಗಿದೆ. ಇದು ಕಳೆದ 10 ವರ್ಷಗಳ ಸುಧಾರಣೆಗಳ ಫಲಿತಾಂಶವಾಗಿದೆ. ಭಾರತ ಮಾತ್ರ ಜಾಗತಿಕ ಬೆಳವಣಿಗೆಗೆ 15 ಪ್ರತಿಶತದಷ್ಟು ಕೊಡುಗೆ ನೀಡುತ್ತಿದೆ. ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ನನ್ನ ಸರ್ಕಾರ ಕೆಲಸ ಮಾಡುತ್ತಿದೆ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆಯೂ ಪ್ರಸ್ತಾಪಿಸಿದ ಮುರ್ಮು, 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯು ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ. ಸಂವಿಧಾನವು ಕಳೆದ ದಶಕಗಳಲ್ಲಿ ಪ್ರತಿ ಸವಾಲು ಮತ್ತು ಪ್ರತಿ ಪರೀಕ್ಷೆಯನ್ನು ಎದುರಿಸಿದೆ. “ಇಂದು ಜೂನ್ 27. 1975 ರ ಜೂನ್ 25 ರಂದು ತುರ್ತು ಪರಿಸ್ಥಿತಿ ಹೇರುವುದು ಸಂವಿಧಾನದ ಮೇಲಿನ ನೇರ ದಾಳಿಯ ಅತಿದೊಡ್ಡ ಮತ್ತು ಕರಾಳ ಅಧ್ಯಾಯವಾಗಿದೆ. ಇಡೀ ದೇಶವು ಆಕ್ರೋಶಗೊಂಡಿತು. ಆದರೆ ಗಣರಾಜ್ಯದ ಸಂಪ್ರದಾಯಗಳು ಭಾರತದಲ್ಲಿರುವ ಅಸಂವಿಧಾನಿಕ ಶಕ್ತಿಗಳ ಮೇಲೆ ದೇಶವು ವಿಜಯಶಾಲಿಯಾಗಿದೆ ಎಂದು ಮುರ್ಮು ಹೇಳಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ತುರ್ತು ಪರಿಸ್ಥಿತಿಯ ಬಗ್ಗೆ ರಾಷ್ಟ್ರಪತಿ ಹೇಳಿಕೆಯನ್ನು ಪುನರುಚ್ಚರಿಸಿದ್ದು ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ದಾಳಿ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Thu, 27 June 24