Bhartruhari Mahtab: ಲೋಕಸಭೆ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಭರ್ತೃಹರಿ ಮಹತಾಬ್ ನೇಮಕ
3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೇನು ಮುಂಗಾರು ಅಧಿವೇಶನವೂ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಗುರುವಾರ) ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.
ನವದೆಹಲಿ: ಒಡಿಶಾದ ಬಿಜೆಪಿಯ (BJP) ಪ್ರಮುಖ ನಾಯಕ ಭರ್ತೃಹರಿ ಮಹತಾಬ್ (Bhartruhari Mahtab) ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ನೇಮಕ ಮಾಡಿದ್ದಾರೆ. ಹಂಗಾಮಿ ಸ್ಪೀಕರ್ ಹುದ್ದೆ ತಾತ್ಕಾಲಿಕವಾದದ್ದು. ಸಾಂಪ್ರದಾಯಿಕವಾಗಿ ಸಂಸತ್ತಿನ ಹಿರಿಯ ಸದಸ್ಯರಿಗೆ ಈ ಸ್ಥಾನವನ್ನು ನೀಡಲಾಗುತ್ತದೆ. ಅವರು ಸ್ಪೀಕರ್ ಆಯ್ಕೆಯಾಗುವವರೆಗೆ ಪ್ರಧಾನ ಮಂತ್ರಿ ಮಂಡಳಿಯ ಸಚಿವರು ಮತ್ತು ಇತರ ಸಂಸದರಿಗೆ ಪ್ರಮಾಣ ವಚನ ಬೋಧಿಸುತ್ತಾರೆ.
“ಸಂವಿಧಾನದ ಪರಿಚ್ಛೇದ 95 (1)ರ ಅಡಿಯಲ್ಲಿ ಸ್ಪೀಕರ್ ಹುದ್ದೆಗೆ ಲೋಕಸಭೆಯ ಸಂಸದರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ನೂತನ ಸ್ಪೀಕರ್ ಆಯ್ಕೆಯ ಚುನಾವಣೆಯವರೆಗೆ ಹಂಗಾಮಿ ಸ್ಪೀಕರ್ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Parliament Monsoon Session 2024: ಜುಲೈ 22 ರಿಂದ ಆಗಸ್ಟ್ 9ರವರೆಗೆ ಸಂಸತ್ ಮುಂಗಾರು ಅಧಿವೇಶನ
ಹಂಗಾಮಿ ಸ್ಪೀಕರ್ ಆಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾರಂಭಿಸುವ ಮೊದಲು ಮಹತಾಬ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಪ್ರಮಾಣವಚನ ಸ್ವೀಕರಿಸುತ್ತಾರೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರದ ಮೇಲುಸ್ತುವಾರಿ ಅವರದಾಗಿರುತ್ತದೆ.
On BJP MP Bhartruhari Mahtab appointed pro-tem Speaker of 18th Lok Sabha, Congress leader Jairam Ramesh tweets, “By convention, the MP who has served the maximum terms is appointed Speaker Protem for the first two days when oath is administered to all newly elected MPs. The… pic.twitter.com/CiNkkQStGa
— ANI (@ANI) June 20, 2024
7 ಬಾರಿ ಸಂಸದರಾಗಿದ್ದ ಮಹತಾಬ್, ಲೋಕಸಭೆ ಚುನಾವಣೆಗೂ ಮುನ್ನ ಬಿಜು ಜನತಾ ದಳ (ಬಿಜೆಡಿ) ತೊರೆದು ಬಿಜೆಪಿ ಸೇರಿದ್ದರು. ಅವರು ಕಟಕ್‌ನಿಂದ ಲೋಕಸಭೆ ಚುನಾವಣೆಯಲ್ಲಿ 57,000ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಒಡಿಶಾ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಒಟ್ಟು 21 ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆದ್ದುಕೊಂಡಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ 12 ಸ್ಥಾನಗಳನ್ನು ಗೆದ್ದಿತ್ತು, ಬಿಜೆಪಿ 8 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 1 ಸ್ಥಾನವನ್ನು ಗೆದ್ದಿತ್ತು.
ಇದನ್ನೂ ಓದಿ: Parliament Session: ಜೂನ್ 27ರಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಂದು ಪ್ರಾರಂಭವಾಗುತ್ತದೆ. ಹೊಸದಾಗಿ ಆಯ್ಕೆಯಾದ ಸದಸ್ಯರು ಜೂನ್ 24-25ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಜೂನ್ 26ರಂದು ಸ್ಪೀಕರ್ ಚುನಾವಣೆ ನಡೆಯಲಿದೆ.
President is pleased to appoint Shri Bhartruhari Mahtab, Member, Lok Sabha as Speaker Protem under Article 95(1) of the Constitution to perform the duties of Speaker till election of the Speaker. President is also pleased to appoint Shri Suresh Kodikunnil, Shri Thalikkottai…
— Kiren Rijiju (@KirenRijiju) June 20, 2024
ಸೋಮವಾರ 18ನೇ ಸಂಸತ್ತಿನ ಸಭೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಅವರ ನೇಮಕವು ಸ್ಪೀಕರ್ ಹುದ್ದೆಯ ನಿಗೂಢತೆಯನ್ನು ಇನ್ನಷ್ಟು ಹೆಚ್ಚಿಸಿದೆ. ಮಿತ್ರಪಕ್ಷಗಳಾದ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರು ಕಣ್ಣಿಟ್ಟಿರುವ ಸ್ಪೀಕರ್ ಹುದ್ದೆಗೆ ಮಹತಾಬ್ ಮತ್ತು ಆಂಧ್ರಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥೆ ಡಿ. ಪುರಂದೇಶ್ವರಿ ಹೆಸರು ಕೇಳಿಬರುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ