AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕ ಪರಿಗಣಿಸುವಂತೆ ಲೋಕಸಭೆಗೆ ರಾಷ್ಟ್ರಪತಿ ಮುರ್ಮು ಶಿಫಾರಸು

‘ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕವನ್ನು ಪರಿಗಣಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಲೋಕಸಭೆಗೆ ಶಿಫಾರಸು ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟವು ಕರಡು ವಿಧೇಯಕಕ್ಕೆ ಅನುಮೋದನೆ ನೀಡಿದ ಒಂದು ದಿನದ ನಂತರ ಹಾಗೂ ನವೆಂಬರ್ 30ರಿಂದ ಡಿಸೆಂಬರ್ 3ರವರೆಗೆ ನಡೆಯಲಿರುವ ಲೋಕಸಭೆಯ 4 ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ ಈ ಶಿಫಾರಸು ಬಂದಿದೆ. ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಹಂಚಿಕೆಯಾಗಿರುವ ಲೋಕಸಭಾ ಸ್ಥಾನಗಳನ್ನು ಶೇ. 50ರಷ್ಟು ಹೆಚ್ಚಿಸಲು ಈ ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕ ಪ್ರಸ್ತಾಪಿಸುತ್ತದೆ. ಅಲ್ಲದೆ, ಪ್ರತಿ ರಾಜ್ಯದ ವಿಧಾನಸಭೆಯ ಸ್ಥಾನಗಳಲ್ಲೂ ಶೇ. 50ರಷ್ಟು ಹೆಚ್ಚಳಕ್ಕೆ ಇದು ಪ್ರಸ್ತಾಪಿಸುತ್ತದೆ.

ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕ ಪರಿಗಣಿಸುವಂತೆ ಲೋಕಸಭೆಗೆ ರಾಷ್ಟ್ರಪತಿ ಮುರ್ಮು ಶಿಫಾರಸು
ದ್ರೌಪದಿ ಮುರ್ಮುImage Credit source: PTI
ಸುಷ್ಮಾ ಚಕ್ರೆ
|

Updated on: Nov 28, 2026 | 8:14 PM

Share

ನವದೆಹಲಿ, ನವೆಂಬರ್ 28: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕವನ್ನು ಪರಿಗಣಿಸುವಂತೆ ಲೋಕಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಿಫಾರಸು ಮಾಡಿದ್ದಾರೆ. ನವೆಂಬರ್ 30ರಿಂದ ಡಿಸೆಂಬರ್ 3ರವರೆಗೆ ನಡೆಯಲಿರುವ ಸಂಸತ್ತಿನ 4 ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 117(3)ನೇ ವಿಧಿಯ ಅಡಿಯಲ್ಲಿ ‘ಕ್ಷೇತ್ರ ಪುನರ್​ವಿಂಗಡಣೆ (ಎರಡನೇ) ವಿಧೇಯಕ, 2026’ ಅನ್ನು ಪರಿಗಣಿಸುವಂತೆ ಲೋಕಸಭೆಗೆ ಇಂದು ಅಧಿಕೃತ ಶಿಫಾರಸು ಮಾಡಿದ್ದಾರೆ. ಈ ಮೂಲಕ ಪರಿಷ್ಕೃತ ಕ್ಷೇತ್ರ ಪುನರ್​ವಿಂಗಡಣೆ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲು ಪ್ರಮುಖ ಸಾಂವಿಧಾನಿಕ ಮತ್ತು ಕಾರ್ಯವಿಧಾನದ ಅಗತ್ಯವನ್ನು ಪೂರ್ಣಗೊಳಿಸಿದಂತಾಗಿದೆ.

ಯಾವುದೇ ವಿಧೇಯಕವು ಜಾರಿಗೆ ಬಂದಾಗ ಭಾರತದ ಸಂಚಿತ ನಿಧಿಯಿಂದ ವೆಚ್ಚವನ್ನು ಒಳಗೊಂಡಿದ್ದರೆ, ಸಂಸತ್ತಿನ ಉಭಯ ಸದನಗಳಲ್ಲಿ ಅದನ್ನು ಅಂಗೀಕರಿಸುವ ಮೊದಲು ರಾಷ್ಟ್ರಪತಿಗಳ ಪೂರ್ವ ಶಿಫಾರಸು ಪಡೆಯುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ‘ಮಹಿಳೆಯರ ದಶಕಗಳ ಕಾಯುವಿಕೆ ಅಂತ್ಯಗೊಳ್ಳಲಿದೆ’; ಕ್ಷೇತ್ರ ಮರುವಿಂಗಡನೆ ಬೆಂಬಲಿಸಲು ವಿಪಕ್ಷಗಳಿಗೆ ಅಮಿತ್ ಶಾ ಮನವಿ

ಪ್ರಸ್ತಾವಿತ ಬದಲಾವಣೆಗಳ ಅಡಿಯಲ್ಲಿ, ಲೋಕಸಭೆಯು ಗರಿಷ್ಠ 850 ಸ್ಥಾನಗಳನ್ನು ಹೊಂದಬಹುದು. ಇವುಗಳಲ್ಲಿ ಗರಿಷ್ಠ 815 ಸ್ಥಾನಗಳು ರಾಜ್ಯಗಳನ್ನು ಮತ್ತು 355 ಸ್ಥಾನಗಳು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸಲಿವೆ. ಈ ಸಂವಿಧಾನ ತಿದ್ದುಪಡಿಯು 2051ರವರೆಗೆ ಲೋಕಸಭೆಯಲ್ಲಿ ಪ್ರತಿ ರಾಜ್ಯದ ಪ್ರಸ್ತುತ ಸ್ಥಾನಗಳ ಪಾಲನ್ನು (ಅನುಪಾತವನ್ನು) ಹಾಗೆಯೇ ಉಳಿಸಿಕೊಳ್ಳಲಿದೆ.

ಮಹಿಳಾ ಮೀಸಲಾತಿ ಜಾರಿ:

2029ರ ಲೋಕಸಭಾ ಚುನಾವಣೆಗೂ ಮುನ್ನವೇ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಜಾರಿಗೊಳಿಸಲು ಈ ಕ್ಷೇತ್ರ ಪುನರ್​ವಿಂಗಡಣೆ ಪ್ರಕ್ರಿಯೆಯು ದಾರಿ ಮಾಡಿಕೊಡಲಿದೆ. ಸೋಮವಾರದಿಂದ (ನವೆಂಬರ್ 30) ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ಈ ಎರಡೂ ವಿಧೇಯಕಗಳು ಮಂಡನೆಯಾಗಲಿವೆ. ಸಂವಿಧಾನ ತಿದ್ದುಪಡಿ ವಿಧೇಯಕವಾಗಿರುವುದರಿಂದ, ಇದು ಅಂಗೀಕಾರಗೊಳ್ಳಲು ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ವಿಶೇಷ ಬಹುಮತದ ಜೊತೆಗೆ ದೇಶದ ಕನಿಷ್ಠ ಅರ್ಧದಷ್ಟು ರಾಜ್ಯಗಳ ವಿಧಾನಸಭೆಗಳ ಅನುಮೋದನೆಯೂ ಅಗತ್ಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ
ಸರ್ಕಾರಿ ಔಷಧಿ ಉಗ್ರಾಣದಲ್ಲಿ ಲಕ್ಷಾಂತರ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ