Droupadi Murmu: ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

Parliament Session 2024: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಭಾಷಣ ಮಾಡಿದ ನಂತರ ಎನ್​ಡಿಎ ಸಂಸತ್ತಿನ ಉಭಯ ಸದನಗಳಲ್ಲಿ ನಿರ್ಣಯವನ್ನು ಮಂಡಿಸುವ ನಿರೀಕ್ಷೆಯಿದೆ. ಈ ಪ್ರಸ್ತಾವನೆಯನ್ನು ಸಂಸದರು ಚರ್ಚಿಸಿ, ರಾಷ್ಟ್ರಪತಿಗಳ ಭಾಷಣ ಮತ್ತು ಅದರಲ್ಲಿ ವಿವರಿಸಿರುವ ಸರ್ಕಾರದ ನೀತಿಗಳ ಕುರಿತು ಚರ್ಚಿಸಲು ಮತ್ತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಮಾಡಿಕೊಡುತ್ತಾರೆ.

Droupadi Murmu: ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿ ದ್ರೌಪದಿ ಮುರ್ಮು
Follow us
ಸುಷ್ಮಾ ಚಕ್ರೆ
|

Updated on: Jun 26, 2024 | 8:45 PM

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ನಾಳೆ (ಗುರುವಾರ) 18ನೇ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಸಮಯದಲ್ಲಿ, ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಹೊಸದಾಗಿ ಚುನಾಯಿತ ಸರ್ಕಾರದ ಆದ್ಯತೆಗಳನ್ನು ವಿವರಿಸುವ ನಿರೀಕ್ಷೆಯಿದೆ. 18ನೇ ಲೋಕಸಭೆಯ ಸಂವಿಧಾನದ ನಂತರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣವು ಅವರ ಮೊದಲನೆಯದಾಗಿದೆ.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ (ಜೂನ್ 24) ಆರಂಭಗೊಂಡಿದ್ದು, ರಾಜ್ಯಸಭೆಯ 264ನೇ ಅಧಿವೇಶನ ಜೂನ್ 27ರಂದು ಆರಂಭವಾಗಲಿದೆ. ಭಾಷಣ ಮಾಡುವ ದಿನವಾದ ನಾಳೆ ರಾಷ್ಟ್ರಪತಿಗಳು ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ಸಂಸತ್ ಭವನದ ಗಜ ದ್ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರು ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲಿದ್ದು, ಅಲ್ಲಿಂದ ಅವರನ್ನು ಸಾಂಪ್ರದಾಯಿಕ ರಾಜದಂಡ ‘ಸೆಂಗೊಲ್’ನೊಂದಿಗೆ ಕೆಳಮನೆಯ ಕೋಣೆಗೆ ಕರೆದೊಯ್ಯಲಾಗುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೂಲಕ ಸರ್ಕಾರವು ತನ್ನ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸುತ್ತದೆ. ಇದು ಹಿಂದಿನ ವರ್ಷ ಸರ್ಕಾರ ಕೈಗೊಂಡ ಕ್ರಮಗಳನ್ನು ಎತ್ತಿ ತೋರಿಸುತ್ತದೆ ಮತ್ತು ಮುಂಬರುವ ವರ್ಷಕ್ಕೆ ಆದ್ಯತೆಗಳನ್ನು ವಿವರಿಸುತ್ತದೆ.

ಇದನ್ನೂ ಓದಿ: Parliament Session: ಜೂನ್ 27ರಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ಇಂದು ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಪೀಕರ್ ಕುರ್ಚಿಯೇರಿದ ಓಂ ಬಿರ್ಲಾ ತುರ್ತು ಪರಿಸ್ಥಿತಿ ಭಾರತದ ಅತ್ಯಂತ ಕರಾಳ ಅಧ್ಯಾಯ ಎಂದು ಹೇಳಿದರು. ಇದರಿಂದ ಕೋಪಗೊಂಡ ವಿರೋಧ ಪಕ್ಷಗಳು ಘೋಷಣೆಗಳನ್ನು ಕೂಗಿ, ಸಂಸತ್​ನ ಹೊರಗೆ ಪ್ರತಿಭಟನೆ ನಡೆಸಿದರು. ಸದನದಲ್ಲಿ ಗಲಾಟೆ ಎದ್ದಿದ್ದರಿಂದ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್