ರಾಷ್ಟ್ರಪತಿ ಭವನದಲ್ಲಿ ಇಂದು ನೂತನ ಸಚಿವ ಸಂಪುಟಕ್ಕೆ ಭೋಜನ ಏರ್ಪಡಿಸಿರುವ ದ್ರೌಪದಿ ಮುರ್ಮು

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ಹಲವು ಪ್ರಮುಖ ರಾಜಕೀಯ ವ್ಯಕ್ತಿಗಳು ಸಂಸತ್ತಿನ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಸೇರಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಇಂದು ನೂತನ ಸಚಿವ ಸಂಪುಟಕ್ಕೆ ಭೋಜನ ಏರ್ಪಡಿಸಿರುವ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು
Follow us
|

Updated on: Jun 24, 2024 | 6:22 PM

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಸೋಮವಾರ) ನೂತನ ಸಚಿವ ಸಂಪುಟಕ್ಕೆ ಔತಣಕೂಟ ಏರ್ಪಡಿಸಲಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೂತನ ಸಚಿವ ಸಂಪುಟದ ಔತಣಕೂಟ ನಡೆಯಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಪ್ರಾರಂಭವಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಅವರ ಮಂತ್ರಿ ಮಂಡಳಿಯ ಸದಸ್ಯರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. “ಜೈ ಶ್ರೀ ರಾಮ್” ಘೋಷಣೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ:

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ, ಚಿರಾಗ್ ಪಾಸ್ವಾನ್, ಕಿರಣ್ ರಿಜಿಜು, ನಿತಿನ್ ಗಡ್ಕರಿ ಮತ್ತು ಮನ್ಸುಖ್ ಮಾಂಡವಿಯಾ ಅವರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ಗಿರಿರಾಜ್ ಸಿಂಗ್, ಗಜೇಂದ್ರ ಸಿಂಗ್ ಶೇಖಾವತ್, ಜೆಡಿಯು ಸಂಸದ ರಾಜೀವ್ ರಂಜನ್ (ಲಾಲನ್) ಸಿಂಗ್, ಬಿಜೆಪಿ ಸಂಸದ ಪಿಯೂಷ್ ಗೋಯಲ್ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕೂಡ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: Parliament Session: ಜೂನ್ 27ರಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಹೊಸ ಸಂಸತ್ ಭವನದ ಹೊರಗೆ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರನ್ನು ಅಭಿನಂದಿಸಿದರು. ಹೊಸ ಸರ್ಕಾರವು ಎಲ್ಲರನ್ನು ಸೇರಿಸಿಕೊಂಡು ಹೋಗಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಒಮ್ಮತವನ್ನು ನಿರ್ಮಿಸಲು ಯಾವಾಗಲೂ ಶ್ರಮಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇಂದು ಹೆಮ್ಮೆಯ ದಿನ. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ನಮ್ಮ ನೂತನ ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು, ಇಲ್ಲಿಯವರೆಗೆ ಹಳೆಯ ಸದನದಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು. ಈ ಮಹತ್ವದ ದಿನ ನಾನು ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ, ಅವರೆಲ್ಲರನ್ನು ಅಭಿನಂದಿಸುತ್ತೇನೆ ಮತ್ತು ಅವರಿಗೆ ಶುಭ ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Robert Vadra: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಸವಾಲು ಹಾಕುತ್ತಾರೆ; ರಾಬರ್ಟ್ ವಾದ್ರಾ

ನಿರ್ಗಮಿತ ಸಚಿವ ಸಂಪುಟಕ್ಕೆ ಔತಣಕೂಟ:

ಈ ತಿಂಗಳ ಆರಂಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಗಮಿಸುವ ಮಂತ್ರಿ ಮಂಡಲಕ್ಕೆ ಔತಣಕೂಟವನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು 17ನೇ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೂಡ ಉಪಸ್ಥಿತರಿದ್ದರು. 17ನೇ ಲೋಕಸಭೆಯ ಅವಧಿ ಜೂನ್ 16ರಂದು ಕೊನೆಗೊಂಡಿತು. ನಂತರ ಹೊಸ ಸರ್ಕಾರ ರಚನೆಯಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ