AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu Srimandir Visit: ಇಂದಿನಿಂದ 2 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಒಡಿಶಾ ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪುರಿಯ ಶ್ರೀ ಜಗನ್ನಾಥ ದೇವಾಲಯದಲ್ಲಿ ಭಗವಾನ್ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ, ಅವರು ಭುವನೇಶ್ವರಕ್ಕೆ ತೆರಳುತ್ತಾರೆ.

Droupadi Murmu Srimandir Visit: ಇಂದಿನಿಂದ 2 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಒಡಿಶಾ ಭೇಟಿ
ದ್ರೌಪದಿ ಮುರ್ಮು
TV9 Web
| Updated By: ಸುಷ್ಮಾ ಚಕ್ರೆ|

Updated on: Nov 10, 2022 | 8:13 AM

Share

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದಿನಿಂದ (ನವೆಂಬರ್ 10) ನವೆಂಬರ್ 11ರವರೆಗೆ ಒಡಿಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತದ ರಾಷ್ಟ್ರಪತಿಯಾಗಿ (President of India) ಪ್ರಮಾಣ ವಚನ ಸ್ವೀಕರಿಸಿದ ನಂತರ ಒಡಿಶಾ (Odisha) ರಾಜ್ಯಕ್ಕೆ ಇದು ಅವರ ಮೊದಲ ಭೇಟಿಯಾಗಿದೆ.

ರಾಷ್ಟ್ರಪತಿ ಭವನದ ಪ್ರಕಾರ, ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪುರಿಯ ಶ್ರೀ ಜಗನ್ನಾಥ ದೇವಾಲಯದಲ್ಲಿ ಭಗವಾನ್ ಜಗನ್ನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ, ಅವರು ಭುವನೇಶ್ವರಕ್ಕೆ ತೆರಳುತ್ತಾರೆ. ಅಲ್ಲಿ ಅವರು ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಾಯಕರ ಪ್ರತಿಮೆಗಳ ಮುಂದೆ ಗೌರವ ಸಲ್ಲಿಸುತ್ತಾರೆ.

ಇಂದು ಸಂಜೆ ಭುವನೇಶ್ವರದ ರಾಜಭವನದಲ್ಲಿ ಅವರ ಗೌರವಾರ್ಥವಾಗಿ ಆಯೋಜಿಸಲಾಗುವ ನಾಗರಿಕ ಸ್ವಾಗತ ಸಮಾರಂಭದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Droupadi Murmu: ಸಿಕ್ಕಿಂನಲ್ಲಿ ಕಲಾವಿದರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವೆಂಬರ್ 11ರಂದು ರಾಷ್ಟ್ರಪತಿಗಳು ಭುವನೇಶ್ವರದಲ್ಲಿರುವ ತಪೋಬನ್ ಹೈಸ್ಕೂಲ್, ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಘಟಕ-II ಮತ್ತು ಕುಂತಲ ಕುಮಾರಿ ಸಬತ್ ಆದಿವಾಸಿ ಬಾಲಕಿಯರ ಹಾಸ್ಟೆಲ್ ಘಟಕ-IIಗೆ ಭೇಟಿ ನೀಡುತ್ತಾರೆ. ಅಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ, ನಾಳೆ ಭುವನೇಶ್ವರದ ಜಯದೇವ್ ಭವನದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್