ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಕರ್ನಾಟಕ ಮೂಲದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027ರಲ್ಲಿ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾಗುವ ಸಾಧ್ಯತೆ ಇದೆ. ಹಾಗಾದಲ್ಲಿ ಅವರು ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?
ನ್ಯಾಯಮೂರ್ತಿ ಬಿ.ವಿ.ನಾಗರತ್ನ
Follow us
TV9 Web
| Updated By: ಡಾ. ಭಾಸ್ಕರ ಹೆಗಡೆ

Updated on:Aug 26, 2021 | 2:31 PM

ನವದೆಹಲಿ: ಮೂವರು ಮಹಿಳೆಯರನ್ನು ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನು ಗುರುವಾರ ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕಾತಿ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಮೂಲಕ 2027ರಲ್ಲಿ ಕರ್ನಾಟಕ ಮೂಲಕ ನ್ಯಾ.ಬಿ.ವಿ.ನಾಗರತ್ನ ಅವರು 2027ರಲ್ಲಿ ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ.

ನ್ಯಾ.ಬಿ.ವಿ ನಾಗರತ್ನ ಸೇರಿದಂತೆ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹೇಮಾ ಕೊಹ್ಲಿ, ನ್ಯಾಯಮೂರ್ತಿ ಸಿ ಟಿ ರವಿಕುಮಾರ್, ನ್ಯಾಯಮೂರ್ತಿ ಎಂ ಎಂ ಸುಂದ್ರೇಶ್ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿರ್ ಜನರಲ್ ಪಿವಿ ನರಸಿಂಹ ಅವರನ್ನು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್, ಜಿತೇಂದ್ರ ಕುಮಾರ್ ಮಹೇಶ್ವರು ಅವರೂ ಕೂಡಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಿಸಲಾಗಿದ್ದ ಎಲ್ಲಾ ಒಂಬತ್ತು ಜನರನ್ನು ಸರ್ಕಾರ ಆಯ್ಕೆ ಮಾಡಿದೆ. ಆಯ್ಕೆಯಾಗಿರುವ ನ್ಯಾಯಮೂರ್ತಿಗಳು ಆಗಸ್ಟ್ 31ರಂದು ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್​ನಲ್ಲಿ ಒಟ್ಟು 34 ನ್ಯಾಯಮೂರ್ತಿಯ ಸ್ಥಾನವಿದ್ದು, ಒಂಬತ್ತು ಜನ ಹೊಸ ನ್ಯಾಯಮೂರ್ತಿಗಳನ್ನು ನಿರ್ದೇಶಿಸಿರುವುದರಿಂದ ಕೇವಲ ಒಂದು ಸ್ಥಾನ ಖಾಲಿ ಉಳಿದಿದೆ. ಈ ಬಾರಿ ಆಯ್ಕೆ ಮಾಡಿರುವ ಒಂಬತ್ತು ಜನ ನ್ಯಾಯಮೂರ್ತಿಗಳಲ್ಲಿ ಮೂವರು ಮಹಿಳಾ ನ್ಯಾಯಮೂರ್ತಿಗಳಿರುವುದು ವಿಶೇಷ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ

(President Gives nod to appointment of justice BV Nagarathna)

Published On - 12:37 pm, Thu, 26 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ