ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮರುನಾಮಕರಣಕ್ಕೆ ರಾಷ್ಟ್ರಪತಿ ಮುರ್ಮು ಒಪ್ಪಿಗೆ
Prime Minister’s Museum: ನೆಹರು ಸ್ಮಾರಕ ವಸ್ತುಸಂಗ್ರಹಾಲಯವನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ. ಜೂನ್ ಮಧ್ಯಭಾಗದಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಈ ವಸ್ತುಸಂಗ್ರಹಾಲಯದ ಹೆಸರು ಬದಲಾವಣೆ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಆಗಸ್ಟ್ 15 ಅಂದರೆ ಸ್ವಾತಂತ್ರ್ಯ ದಿನದಂದು ಜಾರಿಗೆ ತರಲಾಯಿತು.
ನೆಹರು ಸ್ಮಾರಕ ವಸ್ತುಸಂಗ್ರಹಾಲಯವನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ. ಜೂನ್ ಮಧ್ಯಭಾಗದಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಈ ವಸ್ತುಸಂಗ್ರಹಾಲಯದ ಹೆಸರು ಬದಲಾವಣೆ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಆಗಸ್ಟ್ 15 ಅಂದರೆ ಸ್ವಾತಂತ್ರ್ಯ ದಿನದಂದು ಜಾರಿಗೆ ತರಲಾಯಿತು. ಸೊಸೈಟಿಯ ಮತ್ತೊಬ್ಬ ಉಪಾಧ್ಯಕ್ಷರಾಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.
ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಕಳೆದ ವರ್ಷ ಏಪ್ರಿಲ್ 21 ರಂದು ಸಾರ್ವಜನಿಕರಿಗೆ ತೆರೆಯಲಾಗಿತ್ತು. ಉದ್ಘಾಟನೆ ಸಂದರ್ಭದಲ್ಲಿ ಸರ್ಕಾರದಿಂದ ಆಹ್ವಾನ ಬಂದಿದ್ದರೂ ನೆಹರು-ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸಮಾರಂಭಕ್ಕೆ ಬಂಧಿರಲಿಲ್ಲ, ಪಂಡಿತ್ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ದೇಶದ ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ನೆಹರು ಸ್ಮಾರಕ ಹೆಸರು ಬಂದಿದ್ದು ಹೇಗೆ?
ಇದು ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಕಮಾಂಡರ್ ಇನ್ ಚೀಫ್ ಅವರ ಅಧಿಕೃತ ನಿವಾಸವಾಗಿತ್ತು. 1948ರಲ್ಲಿ ಬ್ರಿಟಿಷ್ ಇಂಡಿಯಾದ ಕೊನೆಯ ಕಮಾಂಡರ್ ಇನ್ ಚೀಫ್ ಅವರ ನಿರ್ಗಮನದ ನಂತರ ತೀನ್ ಮೂರ್ತಿ ಕಟ್ಟಡವು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ ಅಧಿಕೃತ ನಿವಾಸವಾಯಿತು.
ಮತ್ತಷ್ಟು ಓದಿ: ನೆಹರು ಮಾಡಿದ ಕೆಲಸಗಳಿಂದಲೇ ಅವರು ಖ್ಯಾತರಾಗಿದ್ದಾರೆ: ಮ್ಯೂಸಿಯಂ ಮರುನಾಮಕರಣ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ಸುಮಾರು 16 ವರ್ಷಗಳ ಕಾಲ ಇಲ್ಲಿಯೇ ವಾಸವಾಗಿದ್ದ ಅವರು ಕೊನೆಯುಸಿರೆಳೆದಿದ್ದರು, ನಂತರ ಈ ಕಟ್ಟಡವನ್ನು ಪಂಡಿತ್ ಜವಾಹರ್ಲಾಲ್ ನೆಹರು ನೆನಪಿಗಾಗಿ ಅದನ್ನು ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಎಂದು ಕರೆಯಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ