Padma Awards: ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್; ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ
Padma Awards List ಪ್ರಶಸ್ತಿಗಳನ್ನು ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ) ಹೀಗೆ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.
ದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವರ್ಷ 119 ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರದಾನ ಮಾಡಲಿದ್ದಾರೆ. ಇದರಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳು ಇವೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಮತ್ತು ಒಬ್ಬರು ಟ್ರಾನ್ಸ್ ಜೆಂಡರ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
?LIVE Now#PresidentKovind presents #PadmaAwards at @rashtrapatibhvn https://t.co/7nXZFfx8fu#PeoplesPadma
— PIB India (@PIB_India) November 8, 2021
119 Padma Awards to be presented by President Ram Nath Kovind this year, the ceremony for which will begin shortly.
The list comprises 7 Padma Vibhushan, 10 Padma Bhushan and 102 Padma Shri Awards. 29 of the awardees are women, 16 Posthumous awardees and 1 transgender awardee. pic.twitter.com/OlyRT9q4Zz
— ANI (@ANI) November 8, 2021
#PadmaAwards2020 | This year the President has approved conferment of 119 Padma Awards including 1 duo case (in a duo case, the Award is counted as one). pic.twitter.com/PmAWX8ocnL
— ANI (@ANI) November 8, 2021
ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ) ಹೀಗೆ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಒಲಿಂಪಿಯನ್ ಪಿವಿ ಸಿಂಧು, ನಟಿ ಕಂಗನಾ ರಣಾವತ್ ಸೇರಿದಂತೆ ಪ್ರಮುಖರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪುತ್ರಿ ಬಾನ್ಸುರಿ ಸ್ವರಾಜ್ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳನ್ನು ಪಡೆದ ಇತರ ಪ್ರಮುಖ ಹೆಸರುಗಳಲ್ಲಿ ಗಾಯಕರಾದ ಸುರೇಶ್ ವಾಡ್ಕರ್ ಮತ್ತು ಅದ್ನಾನ್ ಸಾಮಿ, ಹಿಂದೂಸ್ತಾನಿ ಶಾಸ್ತ್ರೀಯ ಪ್ರತಿಪಾದಕ ಪಂಡಿತ್ ಚನ್ನುಲಾಲ್ ಮಿಶ್ರಾ, ಕೊವಿಡ್-19 ವಿರುದ್ಧ ಭಾರತದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಐಸಿಎಂಆರ್‌ನ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್ ಸೇರಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನಟಿ ಕಂಗನಾ ರಣಾವತ್, ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರಿಗೆ ರಾಷ್ಟ್ರಪತಿ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ: LK Advani Birthday ಎಲ್ ಕೆ ಅಡ್ವಾಣಿ ಅವರಿಗೆ 94ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ, ಬಿಜೆಪಿ ನಾಯಕರಿಂದ ಶುಭ ಹಾರೈಕೆ
Published On - 12:26 pm, Mon, 8 November 21