ನವದೆಹಲಿ: ಎದೆನೋವಿನಿಂದ ಆರ್ಮಿ ರಿಸರ್ಚ್ ಆ್ಯಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಈಗ ದೆಹಲಿಯ ಏಮ್ಸ್ (ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ )ಆಸ್ಪತ್ರೆಗೆ ದಾಖಲಾಗಿದೆ. ರಾಮನಾಥ ಕೋವಿಂದ ಅವರಿಗೆ ನಿನ್ನೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆರ್ಮಿ ಆಸ್ಪತ್ರೆಗೆ ಸೇರಿಸಿ, ಅಬ್ಸರ್ವೇಶನ್ನಲ್ಲಿ ಇಡಲಾಗಿತ್ತು.
ರಾಷ್ಟ್ರಪತಿ ಆರೋಗ್ಯದ ಬಗ್ಗೆ ಸೇನಾ ಆಸ್ಪತ್ರೆ ಇಂದು ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆ ಇನ್ನೂ ಕೆಲವು ತಪಾಸಣೆಗಳನ್ನು ಮಾಡಬೇಕಾಗಿರುವುದರಿಂದ ಏಮ್ಸ್ಗೆ ಕಳಿಸಲಾಗಿದೆ ಎಂದು ತಿಳಿಸಿದೆ. ಇನ್ನು ರಾಮನಾಥ ಕೋವಿಂದ್ ಅವರಿಗೆ ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗಳನ್ನೂ ಮಾಡಲಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.
ಎರಡುದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದಲೇ, ರಾಮನಾಥ ಕೋವಿಂದ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಪುತ್ರನೊಂದಿಗೆ ಮಾತನಾಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.
ಇದನ್ನೂ ಓದಿ: World Theatre Day : ದಾರಿ ಬಿಡಿ! ‘ರಂಗರಥ’ ನಿಮ್ಮ ಮಕ್ಕಳಿಗಾಗಿ ಮನೆಗೇ ಬರಲಿದೆ…