ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi), ರಾಷ್ಟ್ರಪತಿ ರಾಮನಾಥ ಕೋವಿಂದ್(President Ram Nath Kovind), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ಗಣ್ಯರು ರಾಜಪಥ(Rajpath)ಕ್ಕೆ ತಲುಪಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಿದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಗಣರಾಜ್ಯೋತ್ಸವ ಪಥ ಸಂಚಲನ (Republic Day Parade) ನಡೆಯಲಿದೆ. ಇನ್ನು ರಾಜಪಥಕ್ಕೆ ಆಗಮಿಸುವುದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ದೇಶಕ್ಕಾಗಿ ಹೋರಾಟ ಮಾಡಿ, ಮಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಯವರಿಗೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದ್ದಾರೆ. ಹಾಗೇ, ಇಲ್ಲಿರುವ ವಿಸಿಟರ್ಸ್ ಪುಸ್ತಕದಲ್ಲಿ ಪ್ರಧಾನಮಂತ್ರಿ ಸಹಿ ಮಾಡಿದ್ದಾರೆ.
#WATCH | Delhi: Prime Minister Narendra Modi lays wreath at the National War Memorial on 73rd #RepublicDay pic.twitter.com/ZhYNBCmozh
— ANI (@ANI) January 26, 2022
ರಾಜಪಥ್ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು. ರಾಮನಾಥ್ ಕೋವಿಂದ್ ಪತ್ನಿ ಸವಿತಾ ಕೋವಿಂದ್ ಕೂಡ ಆಗಮಿಸಿದ್ದಾರೆ. 10.30ಯಿಂದ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿದ್ಯತೆಗಳ ಪ್ರದರ್ಶನ ನಡೆಯಲಿದೆ. ಹಾಗೇ, ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಸೇರಿಸಲಾಗಿದೆ.
ರಾಜಪಥ್ನಲ್ಲಿ ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಮ್ಮು-ಕಾಶ್ಮೀರ ಪೊಲೀಸ್ ಎಎಸ್ಐ ಬಾಬು ರಾಮ್ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಬು ರಾಮ್ ಪರವಾಗಿ ಅವರ ಪತ್ನಿ ರೀನಾ ರಾಣಿ ಮತ್ತು ಪುತ್ರ ಮಣಿಕ್ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಾಬು ರಾಮ್ 2020ರಲ್ಲಿ ಶ್ರೀನಗರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಟದಲ್ಲಿ ಅಸಾಧಾರಣ ಶೌರ್ಯ ತೋರಿಸಿದ್ದರು. ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು.
J&K Police ASI Babu Ram conferred with Ashok Chakra posthumously for “displaying valour & exemplary raw courage” during an anti-terror op in Srinagar in which he killed 3 terrorists in AuG 2020.
His wife Rina Rani & son Manik receive the award from President Kovind#RepublicDay pic.twitter.com/ut2maxKEKM
— ANI (@ANI) January 26, 2022
ಇದನ್ನೂ ಓದಿ: ಹೊಸ 13 ಜಿಲ್ಲೆಗಳ ರಚನೆಗೆ ಆಂಧ್ರಪ್ರದೇಶ ಸಚಿವ ಸಂಪುಟ ಅನುಮತಿ, ಜಿಲ್ಲೆಗಳ ಸಂಖ್ಯೆ 26ಕ್ಕೇರಿಸಿದ ಸರ್ಕಾರ
Published On - 10:35 am, Wed, 26 January 22