ಇಂದಿನಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್ ಉತ್ತರ ಪ್ರದೇಶ ಪ್ರವಾಸ; ರಾಮ ಮಂದಿರಕ್ಕೆ ಭೇಟಿ ನೀಡಲಿರುವ ಮೊದಲ ರಾಷ್ಟ್ರಪತಿ

ಉತ್ತರಪ್ರದೇಶಕ್ಕೆ ಇಂದಿನಿಂದ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ ಮೊದಲ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅರ್ಚಕರಾಗಿರುವ ಗೋರಖ್​ಪುರ ದೇವಾಲಯಕ್ಕೂ ತೆರಳುವ ನಿರೀಕ್ಷೆ ಇದೆ. ಪ್ರವಾಸದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋವಿಂದ್ ಚಾಲನೆ ನೀಡಲಿದ್ದಾರೆ.

ಇಂದಿನಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್ ಉತ್ತರ ಪ್ರದೇಶ ಪ್ರವಾಸ; ರಾಮ ಮಂದಿರಕ್ಕೆ ಭೇಟಿ ನೀಡಲಿರುವ ಮೊದಲ ರಾಷ್ಟ್ರಪತಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್
Follow us
TV9 Web
| Updated By: shivaprasad.hs

Updated on:Aug 26, 2021 | 10:05 AM

ಇಂದಿನಿಂದ (ಆಗಸ್ಟ್ 26, ಗುರುವಾರ) ಉತ್ತರ ಪ್ರದೇಶಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಯೋಧ್ಯೆಯಲ್ಲಿರುವ ರಾಮ ಲಲ್ಲಾಗೆ ವಂದನೆ ಸಲ್ಲಿಸಲಿರುವ ಮೊದಲ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರಕ್ಕೆ ಕೋವಿಂದ್ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ರಾಷ್ಟ್ರಪತಿಗಳ ಭೇಟಿಯ ಅಧಿಕೃತ ಸೂಚಿ ಇನ್ನಷ್ಟೇ ಬಿಡುಗಡೆಯಾಗಬೇಕಿದ್ದು, ಮೂಲಗಳ ಪ್ರಕಾರ ಅವರು ಘಟಿಕೋತ್ಸವಗಳಲ್ಲಿ ಹಾಗೂ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇಂದು(ಗುರುವಾರ) ರಾಷ್ಟ್ರಪತಿಗಳು ಲಕ್ನೋದ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ ಒಂಬತ್ತನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಾಳೆ (ಆಗಸ್ಟ್ 27) ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಡಾ.ಸಂಪೂರ್ಣಾನಂದ್ ಅವರ ಪ್ರತಿಮೆಯನ್ನು ಕೋವಿಂದ್ ಅನಾವರಣಗೊಳಿಸಲಿದ್ದು, ನಂತರ ಲಕ್ನೋದ ಕ್ಯಾ.ಮನೋಜ್ ಪಾಂಡೆ ಸೈನಿಕ ಶಾಲೆಯ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಹಾಗೆಯೇ, ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ಕಾಲೇಜಿನ(SGPGIMS) 26ನೇ ಘಟಿಕೋತ್ಸವದಲ್ಲಿ ಭಾಗವಹಿಸಿ, ರಾಷ್ಟ್ರಪತಿಗಳು ಪದವಿ ಪ್ರದಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 28ರ ಶನಿವಾರದಂದು ರಾಷ್ಟ್ರಪತಿಗಳು ಆಯುಷ್ ವಿಶ್ವವಿದ್ಯಾನಿಲಯದ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಆಯುಷ್ ವಿಶ್ವವಿದ್ಯಾಲಯವು ಸುಮಾರು 52 ಎಕರೆಯಲ್ಲಿ, ₹ 815 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಇದರ ನಂತರ ಕೋವಿಂದ್ ಗೋರಖ್​ಪುರದಲ್ಲಿರುವ ಮಹಾಯೋಗಿ ಗುರು ಗೋರಖನಾಥ ವಿಶ್ವವಿದ್ಯಾನಿಲಯವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಷ್ಟ್ರಪತಿ ಭೇಟಿಯ ಹಿನ್ನೆಲೆಯಲ್ಲಿ, ಗೋರಖ್​ಪುರಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರಪತಿಗಳು ಯೋಗಿ ಆದಿತ್ಯನಾಥರು ಮುಖ್ಯ ಅರ್ಚಕರಾಗಿ ಕಾರ್ಯ ನಿರ್ವಹಿಸುವ ಗೋರಖ್​​ನಾಥ ದೇವಾಲಯಕ್ಕೆ ಭೇಟಿ ಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಲಕ್ನೋದಿಂದ ರಾಷ್ಟ್ರಪತಿಗಳು ವಿಶೇಷ ರೈಲಿನ ಮುಖಾಂತರ ಅಯೋಧ್ಯೆಗೆ ತೆರಳಲಿದ್ದಾರೆ. ಅಯೋಧ್ಯೆಯಲ್ಲಿ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವಾಲಯದ ಕೆಲವು ಕಾರ್ಯಕ್ರಮಗಳನ್ನು ಉದ್ಘಾಟಿಸಲಿರುವ ರಾಷ್ಟ್ರಪತಿಗಳು, ನಂತರ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ‘ನ್ಯೂಸ್ ಆನ್ ಏರ್’ ತಿಳಿಸಿವೆ.

ಇದನ್ನೂ ಓದಿ:

SBI NFO: 13 ಸಾವಿರ ಕೋಟಿಗೂ ಹೆಚ್ಚು ಮೊತ್ತ ಸಂಗ್ರಹಿಸಿ ಹೊಸ ದಾಖಲೆ ಬರೆದ ಎಸ್​ಬಿಐ ಮ್ಯೂಚುವಲ್ ಫಂಡ್

ತಾಲಿಬಾನ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಿರುತ್ತರರಾದರು ಅಮೆರಿಕ ಅಧ್ಯಕ್ಷ ಜೋ ಬೈಡನ್

(President Ram Nath Kovind will visit to Ram Mandir in his four day UP visit)

Published On - 9:59 am, Thu, 26 August 21

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್