75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​

Independence Day: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​
ರಾಷ್ಟ್ರಪತಿ ರಾಮನಾಥ್ ಕೋವಿಂದ್
Follow us
| Edited By: Lakshmi Hegde

Updated on:Aug 14, 2021 | 2:51 PM

75ನೇ ಸ್ವಾತಂತ್ರ್ಯೋತ್ಸವ (Independence Day-2021)ದ ನಿಮಿತ್ತ ಇಂದು ರಾಷ್ಟ್ರಪತಿ (President Of India) ರಾಮನಾಥ ಕೋವಿಂದ್ (Ram Nath Kovind)  ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಭಾಷಣ ಇಂದು ಸಂಜೆ 7ಗಂಟೆಯಿಂದ ದೂರದರ್ಶನ ಹಿಂದಿಯಲ್ಲಿ ಪ್ರಸಾರವಾಗಲಿದೆ. ಭಾಷಣದ ಇಂಗ್ಲಿಷ್ ಆವೃತ್ತಿ ಕೂಡ ಸಿಗಲಿದೆ. ಇನ್ನುಳಿದಂತೆ ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ರಾಷ್ಟ್ರೀಯ ನೆಟ್​ವರ್ಕ್​ಗಳಲ್ಲೂ ಪ್ರಸಾರಗೊಳ್ಳಲಿದೆ. ರಾಷ್ಟ್ರಪತಿಯವರು ಹಿಂದಿಯಲ್ಲೇ ಮಾತನಾಡಲಿದ್ದು, ಅದು ಏಳುಗಂಟೆಯಿಂದ ಪ್ರಸಾರಗೊಳ್ಳಲಿದೆ. ಬಳಿಕ ರಾತ್ರಿ 9.30ರಿಂದ ಎಲ್ಲ ಪ್ರಾದೇಶಿಕ ಚಾನಲ್​ಗಳಲ್ಲಿ, ಆಯಾ ಸ್ಥಳೀಯ ಭಾಷೆಗಳಲ್ಲಿ ಪ್ರಸಾರಗೊಳ್ಳಲಿದೆ.

ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಾಚರಣೆ ಭಾರತಕ್ಕೆ ವಿಶೇಷ. ಕಾರಣ ಇದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75ನೇ ವರ್ಷ). 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ. ಇದು 2023ರ ಸ್ವಾತಂತ್ರ್ಯೋತ್ಸವದವರೆಗೂ ಮುಂದುವರಿಯಲಿದೆ.

ಇನ್ನು ನಾಳೆ ಮುಂಜಾನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡುವರು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಸೇರಿ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಮೇಲ್​ ಬಂದ ಹಿನ್ನೆಲೆಯಲ್ಲಿ ಅಲ್ಲಿ ಕೂಡ ರಕ್ಷಣಾ ಪಡೆಗಳ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ

Published On - 2:51 pm, Sat, 14 August 21

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ