Presidential Poll 2022: ಮೊದಲ ದಿನ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, 1 ತಿರಸ್ಕೃತ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ(Presidential Poll)ಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬರು ತಿರಸ್ಕೃತಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Presidential Poll 2022: ಮೊದಲ ದಿನ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, 1 ತಿರಸ್ಕೃತ
Rashtrapati Bhavan
TV9kannada Web Team

| Edited By: Nayana Rajeev

Jun 16, 2022 | 1:13 PM

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ(Presidential Poll)ಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬರು ತಿರಸ್ಕೃತಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸರಿಯಾದ ದಾಖಲೆಗಳನ್ನು ಪ್ರಸ್ತುತಪಡಿಸದ ಕಾರಣ ಒಬ್ಬರ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗಿದೆ. ರಾಷ್ಟ್ರಪತಿ ಚುನಾವಣೆಯು ಜುಲೈ 18 ರಂದು ನಡೆಯಲಿದ್ದು, ನಾಮಪತ್ರ(Nomination) ಸಲ್ಲಿಸಲು ಜೂನ್ 29ರವರೆಗೆ ಸಮಯಾವಕಾಶ ನೀಡಲಾಗಿದೆ.

ಬಿಹಾರದ ಸಾರನ್​ನಿಂದ ಲಾಲೂಪ್ರಸಾದ್ ಯಾದವ್ ನಾಮಪತ್ರ ಸಲ್ಲಿಸಿದ್ದಾರೆ. ದೆಹಲಿ, ಮಹಾರಾಷ್ಟ್ರ, ಬಿಹಾರ, ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ.ಅಭ್ಯರ್ಥಿಗಳು 15,000 ರೂ.ಗಳನ್ನು ಠೇವಣಿಯನ್ನಾಗಿ ಇರಿಸಿದ್ದಾರೆ. ಚುನಾವಣೆಗೆ ಅಭ್ಯರ್ಥಿಯ ನಾಮನಿರ್ದೇಶನ ಪತ್ರವನ್ನು ನಿಗದಿತ ನಮೂನೆಯಲ್ಲಿ ಮಾಡಬೇಕು ಮತ್ತು ಕನಿಷ್ಠ 50 ಮತದಾರರು ಪ್ರತಿಪಾದಕರಾಗಿ ಮತ್ತು ಕನಿಷ್ಠ 50 ಮತದಾರರು ದ್ವಿತೀಯಕರಾಗಿ ಚಂದಾದಾರರಾಗಿರಬೇಕು.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಜೂನ್ 15 ರಂದು ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆಗಾಗಿ ವಿರೋಧಪಕ್ಷಗಳ ಸಭೆ ಕರೆದಿದ್ದರು.

ಸಭೆಯಲ್ಲಿ ಹಲವು ಪಕ್ಷಗಳ ಮನವಿಯನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಿರಸ್ಕರಿಸಿದ್ದಾರೆ. ಮಮತಾ ಬ್ಯಾನರ್ಜಿಯವರು ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದರೂ ಪವಾರ್ ನಿರಾಕರಿಸಿದರು.

ಜೂನ್ 21 ರಂದು ಮತ್ತೆ ತಾತ್ಕಾಲಿಕ ಸಭೆ ನಡೆಯಲಿದ್ದು, ಮಮತಾ ಬ್ಯಾನರ್ಜಿ, ಶರದ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಒಮ್ಮತಕ್ಕೆ ಬರಲು ಇತರ ಪಕ್ಷಗಳೊಂದಿಗೆ ಸಮಾಲೋಚಿಸಲು ನೇತೃತ್ವವಹಿಸಲಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada