Presidential Poll: ರಾಷ್ಟ್ರಪತಿ ಚುನಾವಣೆ; ಶಿವಸೇನೆಯಿಂದ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ

ಶಿವಸೇನೆ ಪಕ್ಷದ 22 ಸಂಸದರಲ್ಲಿ 16 ಮಂದಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಒತ್ತಾಯಿಸಿದ್ದರು.

Presidential Poll: ರಾಷ್ಟ್ರಪತಿ ಚುನಾವಣೆ; ಶಿವಸೇನೆಯಿಂದ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ
ಉದ್ಧವ್ ಠಾಕ್ರೆImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 12, 2022 | 4:07 PM

ಮುಂಬೈ: ತನ್ನ ಸಂಸದರ ಬೇಡಿಕೆಗೆ ಮಣಿದಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿದೆ. ಏಕನಾಥ್ ಶಿಂಧೆ ಶಿವಸೇನೆಯಿಂದ ಬೇರ್ಪಟ್ಟು ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದಿದ್ದಾರೆ. ಇದರಿಂದ ಶಿವಸೇನೆಗೆ ಭಾರೀ ಹೊಡೆತ ಬಿದ್ದಿದ್ದು, ಶಿವಸೇನೆ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂಧೆ ಬಣವಾಗಿ ವಿಭಜನೆಯಾಗಿದೆ.

ಬಿಜೆಪಿ ಜೊತೆ ಕೈಜೋಡಿಸಿರುವ ಏಕನಾಥ್ ಶಿಂಧೆ ಬಣದ ವಿರುದ್ಧ ವಾಗ್ದಾಳಿ ನಡೆಸಿದ್ದ ಉದ್ಧವ್ ಠಾಕ್ರೆ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಬಿಜೆಪಿಯೊಂದಿಗೆ ಸಂಬಂಧವನ್ನು ಪುನರಾರಂಭಿಸಲು ಉದ್ಧವ್ ಠಾಕ್ರೆ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗಿನ ಸಂಬಂಧವನ್ನು ಮುರಿಯಬೇಕೆಂದು ಏಕನಾಥ ಶಿಂಧೆ ಅವರ ಬಣ ಒತ್ತಾಯಿಸಿತ್ತು. ಆದರೆ ಉದ್ಧವ್ ಠಾಕ್ರೆ ಅದಕ್ಕೆ ನಿರಾಕರಿಸಿದ್ದರು. ಶಿವಸೇನೆಯ ಬಹುಪಾಲು ಶಾಸಕರು ಏಕನಾಥ್ ಶಿಂಧೆ ಪರವಾಗಿ ನಿಂತು ಬಂಡಾಯವೆದ್ದಿದ್ದರು. ಕೊನೆಗೆ ಅನಿವಾರ್ಯವಾಗಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​

ಇದನ್ನೂ ಓದಿ
Image
ವಿದೇಶ ಪ್ರವಾಸಕ್ಕೆ ತೆರಳಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಜುಲೈ 17ಕ್ಕೆ ವಾಪಸ್
Image
Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ
Image
ರಾಷ್ಟ್ರಪತಿ ಚುನಾವಣೆ ಕುರಿತ ಸಭೆಯಲ್ಲಿ ಶಿವಸೇನಾದ 13 ಸಂಸದರು ಭಾಗಿ; ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ಸಹಮತ

ಶಿವಸೇನೆ ಪಕ್ಷದ 22 ಸಂಸದರಲ್ಲಿ 16 ಮಂದಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಒತ್ತಾಯಿಸಿದ್ದರು. ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯದ ಮಹಿಳೆಯಾಗಿರುವುದರಿಂದ ಅವರಿಗೆ ಮತ ಹಾಕಬೇಕೆಂದು ಒತ್ತಾಯಿಸಿದ್ದರು. ಮಹಾರಾಷ್ಟ್ರದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನರು ಪರಿಶಿಷ್ಟ ಪಂಗಡದವರಿದ್ದಾರೆ. ಅವರು ಚುನಾಯಿತರಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗುತ್ತಾರೆ ಎಂಬ ಕಾರಣಕ್ಕೆ ಒತ್ತಡ ಹೇರಲಾಗಿತ್ತು.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಕುರಿತ ಸಭೆಯಲ್ಲಿ ಶಿವಸೇನಾದ 13 ಸಂಸದರು ಭಾಗಿ; ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ಸಹಮತ

ವಿರೋಧ ಪಕ್ಷಗಳಿಂದ ಮಾಜಿ ಕೇಂದ್ರ ಸಚಿವ, ಟಿಎಂಸಿ ನಾಯಕ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯ ಜಂಟಿ ಅಭ್ಯರ್ಥಿ ಎಂದು ಕಣಕ್ಕಿಳಿಸಲಾಗಿದೆ. ಆದರೂ ಹಲವಾರು ಎನ್‌ಡಿಎಯೇತರ ಪಕ್ಷಗಳು ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದವರು ಎಂಬ ಕಾರಣಕ್ಕೆ ಅವರನ್ನು ಬೆಂಬಲಿಸಲು ನಿರ್ಧರಿಸಿವೆ.

ಜುಲೈ 18ರಂದು ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದೆ.

Published On - 4:05 pm, Tue, 12 July 22