ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಹಿನ್ನೆಲೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ
ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ 4 ದಿನಗಳಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಫೆಬ್ರವರಿ 9ರಂದು ಬಿರೇನ್ ಸಿಂಗ್ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಮಣಿಪುರ: ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ 4 ದಿನಗಳ ನಂತರ ಇಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಈ ವಾರದ ಆರಂಭದಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇಂದಿನಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಹೇರಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರದಲ್ಲಿ 21 ತಿಂಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದಾದ ನಂತರ ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಮುಂದಿನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಬಿಜೆಪಿ ಹೈಕಮಾಂಡ್ ಮಾತುಕತೆ ನಡೆಸುತ್ತಿದೆ. ಆದರೆ ಇನ್ನೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಬಿರೇನ್ ಸಿಂಗ್ ಭಾನುವಾರ (ಫೆಬ್ರವರಿ 9) ರಾಜೀನಾಮೆ ನೀಡಿದರು. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿರೇನ್ ಸಿಂಗ್ ದೆಹಲಿಯಿಂದ ಹಿಂದಿರುಗಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. 21 ತಿಂಗಳ ಹಿಂದೆ ಮೇ 2023ರಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿತ್ತು. ಹಿಂಸಾಚಾರ ಪೀಡಿತ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ಬಿರೇನ್ ಸಿಂಗ್ ಧಿಕ್ಕರಿಸಿದ್ದರು. ಆದರೆ, ಕೊನೆಗೂ ಕಳೆದ ವಾರ ಅವರು ರಾಜೀನಾಮೆ ನೀಡಿದ್ದರು.
President’s Rule imposed in Manipur.
Manipur CM N Biren Singh resigned from his post on 9th February. https://t.co/vGEOV0XIrt pic.twitter.com/S9wymA13ki
— ANI (@ANI) February 13, 2025
ಇಲ್ಲಿಯವರೆಗೆ ಮಣಿಪುರದಲ್ಲಿ ಯಾರೂ ಸರ್ಕಾರ ರಚಿಸಲು ಹಕ್ಕು ಮಂಡಿಸದ ಕಾರಣದಿಂದ ಬಿಜೆಪಿ ಆಡಳಿತದ ಮಣಿಪುರ ಸಾಂವಿಧಾನಿಕ ಬಿಕ್ಕಟ್ಟಿನತ್ತ ಸಾಗಬಹುದು ಎಂದು ತಜ್ಞರು ಎಚ್ಚರಿಸಿದ್ದರು. ಈ ಪರಿಸ್ಥಿತಿ ಹಾಗೆಯೇ ಮುಂದುವರಿದರೆ ಮಣಿಪುರ ರಾಷ್ಟ್ರಪತಿ ಆಳ್ವಿಕೆಗೆ ಒಳಪಡುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದರು. ಅದರಂತೆ ಇಂದು ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:07 pm, Thu, 13 February 25