ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಮೇರಿ ಮಾಟಿ ಮೇರಾ ದೇಶ್ ಅಭಿಯಾನವು ನಮ್ಮ ದೇಶದ ಹುತಾತ್ಮರ ಬಗ್ಗೆ ಕೇಂದ್ರೀಕೃತವಾಗಿರುವ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗುವುದು.

ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ 'ಮೇರಿ ಮಾಟಿ ಮೇರಾ ದೇಶ್ ಅಭಿಯಾನ'ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ
ಮೇರಿ ಮಾಟಿ ಮೇರಾ ದೇಶ್ ಸುದ್ದಿಗೋಷ್ಠಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 03, 2023 | 6:10 PM

ದೆಹಲಿ ಆಗಸ್ಟ್ 03: ಸ್ವಾತಂತ್ರ್ಯ ದಿನಕ್ಕೆ (Independence Day) ಇನ್ನು ಉಳಿದಿರುವುದು 12 ದಿನಗಳು. 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಜನರ ಭವ್ಯ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಭಾರತ ಸರ್ಕಾರವು ಪ್ರಾರಂಭಿಸಿದ ಅಮೃತ ಮಹೋತ್ಸವದ ಜತೆಗೇ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಮೇರಿ ಮಾಟಿ ಮೇರಾ ದೇಶ್ (Meri Maati Mera Desh) ಎಂಬ ಅಭಿಯಾನವನ್ನು ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಕಾರ, ಅಭಿಯಾನವು ನಮ್ಮ ದೇಶದ ಹುತಾತ್ಮರ ಬಗ್ಗೆ ಕೇಂದ್ರೀಕೃತವಾಗಿರುವ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗುವುದು.

ಇತ್ತೀಚಿನ ಮನ್ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗ ನಡೆಯುತ್ತಿರುವ ಅಮೃತ್ ಮಹೋತ್ಸವದ ಆಚರಣೆಗಳೊಂದಿಗೆ ಹುತಾತ್ಮರಾದ ವೀರ ಪುರುಷ ಮತ್ತು ಮಹಿಳೆಯರನ್ನು ಗೌರವಿಸುವ ದ ‘ಮೇರಿ ಮಾಟಿ ಮೇರಾ ದೇಶ್’ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಈ ಅಭಿಯಾನದ ಭಾಗವಾಗಿ, ನಮ್ಮ ಅಮರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅವರ ಸ್ಮರಣೆಯನ್ನು ಅಜರಾಮರಗೊಳಿಸಲು, ದೇಶದಾದ್ಯಂತ ಲಕ್ಷಾಂತರ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಸ್ಥಾಪಿಸಲಾಗುವುದು.

ಈ ಅಭಿಯಾನವು ದೇಶಾದ್ಯಂತ ‘ಅಮೃತ ಕಲಶ ಯಾತ್ರೆ’ಗೆ ಸಾಕ್ಷಿಯಾಗಲಿದೆ, ಇದು ಭಾರತದ ಮೂಲೆ ಮೂಲೆಯಿಂದ ದೆಹಲಿಗೆ 7500 ಕಲಶಗಳಲ್ಲಿ ಮಣ್ಣನ್ನು ಸಾಗಿಸುತ್ತದೆ. ಈ ಪ್ರಯಾಣದಲ್ಲಿ ಮಣ್ಣಿನ ಜೊತೆಗೆ ದೇಶದ ವಿವಿಧ ಪ್ರದೇಶಗಳ ಸಸಿಗಳನ್ನೂ ಒಯ್ಯಲಾಗುವುದು. ಈ ಎರಡೂ ಅಂಶಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ‘ಅಮೃತ ವಾಟಿಕಾ’ ರಚಿಸಲು ಬಳಸಲಾಗುತ್ತದೆ, ಇದು ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭವ್ಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ.

ಮೇರಿ ಮಾಟಿ ಮೇರಾ ದೇಶ್ ಮತ್ತು ಹರ್ ಘರ್ ತಿರಂಗ ಅಭಿಯಾನದ ಕುರಿತು ನಡೆಯುವ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಅಪೂರ್ವ ಚಂದ್ರ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಗೋವಿಂದ್ ಮೋಹನ್, ಯುವ ವ್ಯವಹಾರ ಮತ್ತು ಕ್ರೀಡೆ ಕಾರ್ಯದರ್ಶಿ, ಶ್ರೀಮತಿ ಮೀತಾ ರಾಜೀವ್ ಲೋಚನ್, ಪ್ರಸಾರ ಭಾರತಿ ಸಿಇಒ ಗೌರವ್ ದ್ವಿವೇದಿ ಕೂಡ ಉಪಸ್ಥಿತರಿದ್ದರು.

ಸುದ್ದಿಗೋಷ್ಠಿಯ ಮುಖ್ಯಾಂಶಗಳು

ಸುದ್ದಿಗೋಷ್ಠಿಯಲ್ಲ್ ಮಾತನಾಡಿದ ಗೋವಿಂದ್ ಮೋಹನ್, 75ನೇ ಸ್ವಾತಂತ್ರ್ಯೋತ್ಸವದ ಅದ್ಭುತ ಕಾರ್ಯಕ್ರಮವಾಗಿತ್ತು ಆಜಾದಿ ಕಾ ಅಮೃತ್ ಮಹೋತ್ಸವ್. ಭಾರತದಾದ್ಯಂತ ಅಷ್ಟೇ ಅಲ್ಲ ವಿಶ್ವದಾದ್ಯಂತ ಇದನ್ನು ಆಚರಿಸಲಾಗಿತ್ತು.  ಇದರ ಸಮಾರೋಪ ಕಾರ್ಯಕ್ರಮವಾಗಿ ಮೇರಿ ಮಾಟಿ ಮೇರಾ ದೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಭಾರತದ ಜನರು ದೇಶದ ಮಣ್ಣಿನ ಜತೆ ಗಾಢ ಸಂಬಂಧವನ್ನು ಹೊಂದಿದ್ದಾರೆ.ಈ ಕಾರ್ಯಕ್ರಮದ ಟ್ಯಾಗ್​​ಲೈನ್  ‘ಹೇ ಮಿಟ್ಟಿ ಕಾ ನಮನ್, ವೀರೋಂಕೋ ವಂದನ್’.  ದೇಶದ ಮಣ್ಣು ವೀರರ ಭೂಮಿ. ಇದು ನಮ್ಮನ್ನು ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ನಮ್ಮ ದೇಶಕ್ಕಾಗಿ ಪ್ರಾಣ ತೆತ್ತ ವೀರರಿಗೆ ನಮನ ಮಾಡುವ ಕಾರ್ಯಕ್ರಮವಾಗಿದೆ ಇದು. ಇದು ಎರಡು ಹಂತದಲ್ಲಿ ನಡೆಯುತ್ತದೆ. ಇದು ಗ್ರಾಮ ಮತ್ತು ನಗರದಲ್ಲಿ ನಡೆಯಲಿದ್ದು, ಅಮೃತ್ ಕಲಶ್ ಯಾತ್ರ ಮೂಲಕ ದೇಶದ ಮೂಲೆ ಮೂಲೆಯಿಂದ ಮಣ್ಣುಗಳನ್ನು ದೆಹಲಿಗೆ ತರಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 3 August 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್