ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್

ಪ್ರತಿಯೊಬ್ಬ ವ್ಯಕ್ತಿಗೂ ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ.ನಮಗೆ ಪತ್ರಿಕಾ ಸ್ವಾತಂತ್ರ್ಯವಿದೆ. ಅದು ಭವಿಷ್ಯದಲ್ಲಿಯೂ ಹಾಗೆಯೇ ಉಳಿಯುತ್ತದೆ ಎಂದು ಪತ್ರಕರ್ತರ ರಕ್ಷಣೆಗಾಗಿ ನೀತಿ ಚೌಕಟ್ಟುಗಳ ಬಗ್ಗೆ ಪ್ರಶ್ನೆಯನ್ನು ಎತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೋಲಾ ಸೇನ್‌ಗೆ ಪ್ರತಿಕ್ರಿಯೆಯಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್  ಠಾಕೂರ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on:Dec 21, 2023 | 9:05 PM

ದೆಹಲಿ ಡಿಸೆಂಬರ್  21: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರಕ್ಕೆ ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಆದ್ಯತೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್  ಠಾಕೂರ್ (Anurag Thakur) ಗುರುವಾರ ಹೇಳಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ.ನಮಗೆ ಪತ್ರಿಕಾ ಸ್ವಾತಂತ್ರ್ಯವಿದೆ. ಅದು ಭವಿಷ್ಯದಲ್ಲಿಯೂ ಹಾಗೆಯೇ ಉಳಿಯುತ್ತದೆ ಎಂದು ಪತ್ರಕರ್ತರ ರಕ್ಷಣೆಗಾಗಿ ನೀತಿ ಚೌಕಟ್ಟುಗಳ ಬಗ್ಗೆ ಪ್ರಶ್ನೆಯನ್ನು ಎತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೋಲಾ ಸೇನ್‌ಗೆ ಪ್ರತಿಕ್ರಿಯೆಯಾಗಿ ಠಾಕೂರ್ ಹೇಳಿದರು.

ಪತ್ರಕರ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಪೂರಕ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಠಾಕೂರ್, ಸದನದಲ್ಲಿ ಇಲ್ಲದ ಪಶ್ಚಿಮ ಬಂಗಾಳದ ಸಂಸದರೊಬ್ಬರು ಮುಖ್ಯ ಪ್ರಶ್ನೆಯನ್ನು ಕೇಳಿದ್ದಾರೆ ಎಂದು ಹೇಳಿದರು.

ಪತ್ರಕರ್ತರ ಮೇಲಿನ ಹಿಂಸಾಚಾರದ ಹಲವಾರು ಉದಾಹರಣೆಗಳಿಗೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

“ಸರ್, ಪಶ್ಚಿಮ ಬಂಗಾಳದ ಗೌರವಾನ್ವಿತ ಸಂಸದರಿಂದ ಮೂಲ ಪ್ರಶ್ನೆಯನ್ನು ಎತ್ತಲಾಗಿದೆ .ನಾನು ಇದನ್ನು ಹೇಳಲು ಸ್ವಲ್ಪ ಹಿಂಜರಿಯುತ್ತಿದ್ದೆ, ಏಕೆಂದರೆ ನಾನು ಯಾವುದೇ ರಾಜ್ಯಗಳನ್ನು ಉಲ್ಲೇಖಿಸಲು ಬಯಸುವುದಿಲ್ಲ, ಆದರೆ ಪಶ್ಚಿಮ ಬಂಗಾಳದಲ್ಲಿ ಒಂದರ ನಂತರ ಒಂದರಂತೆ ಘಟನೆಗಳು ಕಂಡುಬಂದವು ಎಂದು ಠಾಕೂರ್ ಹೇಳಿದರು.

“ಪತ್ರಕರ್ತರು ಅಲ್ಲಿ ಸುರಕ್ಷಿತವಾಗಿರುವುದಿಲ್ಲ. ಇದು ರಾಜ್ಯದ ವಿಷಯವಾಗಿರುವುದರಿಂದ ಇದು ತುಂಬಾ ಚಿಂತಾಜನಕವಾಗಿದೆ. ಅವರಿಗೆ ಭದ್ರತೆಯನ್ನು ಒದಗಿಸಬೇಕು ಮತ್ತು ಅವರು ಸ್ವತಂತ್ರವಾಗಿ ತಮ್ಮ ಕೆಲಸವನ್ನು ಮಾಡುವ ವಾತಾವರಣವನ್ನು ನಿರ್ಮಿಸಬೇಕು,” ಎಂದು ಠಾಕೂರ್ ಹೇಳಿದರು.

ಅಕ್ಟೋಬರ್ 2015 ರಲ್ಲಿ ನಾಗರಿಕ ಚುನಾವಣೆಯ ದಿನದಂದು 20 ಪತ್ರಕರ್ತರನ್ನು ಥಳಿಸಲಾಯಿತು. ಅವರ ಮೈಕ್ ಮತ್ತು ಕ್ಯಾಮೆರಾಗಳನ್ನು ಒಡೆಯಲಾಯಿತು ಎಂದು ಠಾಕೂರ್ ಹೇಳಿದರು. ಅವರು 2022 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪತ್ರಕರ್ತರ ವಿರುದ್ಧ ನಡೆದ ಹಲವಾರು ಹಿಂಸಾತ್ಮಕ ಘಟನೆಗಳನ್ನು ಪಟ್ಟಿ ಮಾಡಿದರು. ಇದಲ್ಲದೆ, ಈ ವರ್ಷ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಕೋಲ್ಕತ್ತಾ ಮತ್ತು ಇತರ ಜಿಲ್ಲೆಗಳಲ್ಲಿ 10 ಪತ್ರಕರ್ತರನ್ನು ಥಳಿಸಲಾಗಿದೆ ಎಂದು ಠಾಕೂರ್ ಹೇಳಿದರು.

ಪತ್ರಕರ್ತರ ರಕ್ಷಣೆ ರಾಜ್ಯದ ವಿಷಯವಾಗಿದ್ದರೂ, ಗೃಹ ಸಚಿವಾಲಯವು 2017 ರಲ್ಲಿ ಎಲ್ಲಾ ರಾಜ್ಯಗಳಿಗೆ ಅವರ ಸುರಕ್ಷತೆಗಾಗಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಪತ್ರಕರ್ತರಿಗೆ ಸಾಧ್ಯವಿರುವ ಎಲ್ಲ ಭದ್ರತೆಯನ್ನು ಒದಗಿಸುವಂತೆ ಸಲಹೆಯನ್ನು ನೀಡಿದೆ ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕೆ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಗೆ ಲೋಕಸಭೆ ಅಂಗೀಕಾರ

ಪತ್ರಕರ್ತರು ಸೇರಿದಂತೆ ದೇಶದ ಎಲ್ಲಾ ನಾಗರಿಕರ ಸುರಕ್ಷೆಗೆ ಕೇಂದ್ರ ಸರ್ಕಾರವು “ಅತಿ ಹೆಚ್ಚು ಪ್ರಾಮುಖ್ಯತೆಯನ್ನು” ನೀಡುತ್ತದೆ ಎಂದ ಠಾಕೂರ್,  ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಅದೇ ವೇಳೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಲು ಮತ್ತು ದೇಶದಲ್ಲಿ ಪತ್ರಿಕೆಗಳು ಮತ್ತು ಸುದ್ದಿ ಸಂಸ್ಥೆಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಠಾಕೂರ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Thu, 21 December 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ