AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬುಡಕಟ್ಟು ಜನರನ್ನು ನಕ್ಸಲ್ ಹಿಂಸಾಚಾರಕ್ಕೆ ಬಲಿಕೊಡಲಾಗಿತ್ತು’; ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

‘ಜನಜಾತೀಯ ಗೌರವ ದಿವಸ’ದ ಅಂಗವಾಗಿ ಬುಡಕಟ್ಟು ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿಂದಿನ ಸರ್ಕಾರಗಳ ಆಡಳಿತ ವೈಖರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದಿನ ಸರ್ಕಾರಗಳು ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿ ಮಾಡಿ, ಅವರನ್ನು ನಕ್ಸಲ್ ಹಿಂಸಾಚಾರಕ್ಕೆ ಬಲಿಯಾಗುವಂತೆ ಅನಾಥರನ್ನಾಗಿ ಬಿಟ್ಟಿದ್ದವು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜನ್ಮದಿನದ ಪ್ರಯುಕ್ತ ಮಹಾರಾಷ್ಟ್ರದ ಗಢಚಿರೋಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡು ಪ್ರಧಾನಿ ಮೋದಿ ಮಾತನಾಡಿದ್ದಾರೆ.

‘ಬುಡಕಟ್ಟು ಜನರನ್ನು ನಕ್ಸಲ್ ಹಿಂಸಾಚಾರಕ್ಕೆ ಬಲಿಕೊಡಲಾಗಿತ್ತು’; ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
Pm Modi On Janjatiya Gaurav Diwas
ಸುಷ್ಮಾ ಚಕ್ರೆ
|

Updated on: Nov 15, 2026 | 3:15 PM

Share

ಗಢಚಿರೋಲಿ, ನವೆಂಬರ್ 15: ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜನ್ಮದಿನ ಹಾಗೂ ‘ಜನಜಾತೀಯ ಗೌರವ ದಿವಸ್’ ಸಂದರ್ಭದಲ್ಲಿ ದೇಶದ ಬುಡಕಟ್ಟು ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದಿನ ಸರ್ಕಾರಗಳು ಬುಡಕಟ್ಟು ಜನರ ಕಷ್ಟ-ಕಾರ್ಪಣ್ಯಗಳನ್ನು ಅರ್ಥಮಾಡಿಕೊಳ್ಳಲಿಲ್ಲ ಹಾಗೂ ಅವರ ಅಭಿವೃದ್ಧಿಯ ಬಗ್ಗೆ ಎಂದೂ ಕಾಳಜಿ ವಹಿಸಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಗಢಚಿರೋಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ದೇಶಾದ್ಯಂತದ ಬುಡಕಟ್ಟು ಸಮುದಾಯಗಳೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದ ಪ್ರಧಾನಿ ಮೋದಿ, ತಮ್ಮ ಸರ್ಕಾರ ಜಾರಿಗೆ ತಂದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಬುಡಕಟ್ಟು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾತನಾಡಿದರು.

ಗುಜರಾತ್‌ನ ಭರೂಚ್ ಜಿಲ್ಲೆಯ ವಜೀರ್ ಎಂಬುವವರೊಂದಿಗೆ ಸಂವಾದ ನಡೆಸುವ ವೇಳೆ ಬಿದಿರು ಕೃಷಿ ಹಾಗೂ ‘ಪಿಎಂ-ಜನ್‌ಮನ್’ ಯೋಜನೆಯ ಲಾಭಗಳ ಕುರಿತು ಪ್ರಧಾನಿ ಮೋದಿ ಚರ್ಚಿಸಿದರು. ಬ್ರಿಟಿಷರ ಕಾಲದಲ್ಲಿ ಬಿದಿರನ್ನು ‘ಮರ’ ಎಂದು ವರ್ಗೀಕರಿಸಿ, ಅದನ್ನು ಕಡಿಯುವವರಿಗೆ ಜೈಲು ಶಿಕ್ಷೆ ವಿಧಿಸುವ ಕರಾಳ ಕಾನೂನು ಜಾರಿಗೊಳಿಸಲಾಗಿತ್ತು ಎಂಬುದನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.

ಹಿಂದಿನ ಸರ್ಕಾರದ ವಿರುದ್ಧ ಟೀಕೆ:

“ಬ್ರಿಟಿಷರು ರೂಪಿಸಿದ್ದ ಈ ಕಾನೂನನ್ನು ಸ್ವಾತಂತ್ರ್ಯದ ನಂತರವೇ ರದ್ದುಪಡಿಸಬೇಕಿತ್ತು. ಆದರೆ ದುರಾದೃಷ್ಟವಶಾತ್, ಹಿಂದಿನ ಸರ್ಕಾರಗಳಿಗೆ ಬುಡಕಟ್ಟು ಸಮುದಾಯಗಳ ಬಗ್ಗೆ ಅರಿವೂ ಇರಲಿಲ್ಲ, ಅವರ ಬಗ್ಗೆ ಕಾಳಜಿಯೂ ಇರಲಿಲ್ಲ” ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈ ಹಳೇ ಕಾನೂನನ್ನು ರದ್ದುಗೊಳಿಸಿ, ಬುಡಕಟ್ಟು ಜನರಿಗೆ ಬಿದಿರಿನ ಮೇಲೆ ಸಂಪೂರ್ಣ ಹಕ್ಕು ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಜನಜಾತೀಯ ಗೌರವ ದಿವಸದ ಪ್ರಯುಕ್ತ ಸಂಸತ್ ಆವರಣದಲ್ಲಿರುವ ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಕೃಷ್ಣಾ ನಾಗರಾವ್ ಟೇಕಾ ಎಂಬ ಫಲಾನುಭವಿ, ಮಳೆಗಾಲದಲ್ಲಿ ತಮಗೆ ಎದುರಾಗುತ್ತಿದ್ದ ತೊಂದರೆಗಳು ಮತ್ತು ‘ಪಿಎಂ-ಜನ್‌ಮನ್’ ಯೋಜನೆಯಡಿ ಸಿಕ್ಕ ಶಾಶ್ವತ ಮನೆ, ಶೌಚಾಲಯ ಹಾಗೂ ಇತರೆ ಸೌಲಭ್ಯಗಳ ಕುರಿತು ಪ್ರಧಾನಿಯವರೊಂದಿಗೆ ಹಂಚಿಕೊಂಡರು.

ಫಲಾನುಭವಿಯ ಅನುಭವ ಆಲಿಸಿದ ಪ್ರಧಾನಿ ಮೋದಿ, ಬುಡಕಟ್ಟು ಸಮುದಾಯಗಳು ತಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರುವಂತೆಯೇ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ‘ಪಿಎಂ ಶ್ರೀ’ ಶಾಲೆಗಳ ಉಪಕ್ರಮದಿಂದ ಉನ್ನತ ಶಿಕ್ಷಣಕ್ಕೆ ಸಿಗುತ್ತಿರುವ ನೆರವಿನ ಕುರಿತು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರವು ನಕ್ಸಲ್ ಪೀಡಿತ ಮತ್ತು ಹಿಂದುಳಿದ ಬುಡಕಟ್ಟು ಜಿಲ್ಲೆಗಳಲ್ಲಿ ಶಾಂತಿ ಸ್ಥಾಪನೆಗೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ರಸ್ತೆ, ಶಿಕ್ಷಣ, ಆರೋಗ್ಯ ಮತ್ತು ವಸತಿ ಯೋಜನೆಗಳನ್ನು ನೇರವಾಗಿ ಬುಡಕಟ್ಟು ಜನರ ಮನೆಬಾಗಿಲಿಗೆ ತಲುಪಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಫೋನ್ ಟ್ಯಾಪಿಂಗ್ ಆರೋಪ: ಪ್ರಧಾನಿ ಮೋದಿ ಹಾಗೆ ಮಾಡುವುದಿಲ್ಲ ಎಂದ ಸ್ಯಾಮ್ ಪಿತ್ರೋಡಾ

3,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ:

ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬುಡಕಟ್ಟು ಸಮುದಾಯಗಳ ಶಿಕ್ಷಣ, ಆರೋಗ್ಯ, ಜೀವನೋಪಯೋಗಿ ಸೌಲಭ್ಯಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಟ್ಟು 3,000 ಕೋಟಿ ರೂ. ಮೌಲ್ಯದ 246 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಬುಡಕಟ್ಟು ವಿದ್ಯಾರ್ಥಿಗಳಿಗಾಗಿ 38 ಏಕಲವ್ಯ ಮಾದರಿ ವಸತಿ ಶಾಲೆಗಳು (EMRS) ಹಾಗೂ 100 ಬಹುಪಯೋಗಿ ಕೇಂದ್ರಗಳ ಲೋಕಾರ್ಪಣೆ ಮಾಡಲಾಯಿತು.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆ (TRI) ಹಾಗೂ ಮಿಜೋರಾಂನ ಐಜ್ವಾಲ್‌ನಲ್ಲಿ ರೋಪುಲಿಯಾನಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಸಂಗ್ರಹಾಲಯವನ್ನು ಉದ್ಘಾಟನೆ ಮಾಡಲಾಯಿತು. ಬುಡಕಟ್ಟು ಯುವಕರಿಗೆ ಗುಣಮಟ್ಟದ ಶಿಕ್ಷಣ ನೀಡಲು 19 ಹೊಸ ಏಕಲವ್ಯ ಶಾಲೆಗಳು ಹಾಗೂ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು 12 ಬುಡಕಟ್ಟು ಬಹುಪಯೋಗಿ ಮಾರುಕಟ್ಟೆ ಕೇಂದ್ರಗಳಿಗೆ (TMMCs) ಶಂಕುಸ್ಥಾಪನೆ ನೆರವೇರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ