AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ ಹಳೆಯ ಮತದಾರರೂ ಫಾರ್ಮ್-6 ಸಲ್ಲಿಸಬಹುದು; ಚುನಾವಣಾ ಆಯೋಗ ಸ್ಪಷ್ಟನೆ

ಎಸ್​ಐಆರ್​ ಪ್ರಕ್ರಿಯೆಯ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಹಳೆಯ ಮತದಾರರು ಕೂಡ ತಮ್ಮ ಹೆಸರನ್ನು ಅಂತಿಮ ಪಟ್ಟಿಗೆ ಮರುಸೇರ್ಪಡೆಗೊಳಿಸಲು ಯಾವುದೇ ಆತಂಕವಿಲ್ಲದೇ 'ಫಾರ್ಮ್-6' ಸಲ್ಲಿಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಮಹತ್ವದ ಸ್ಪಷ್ಟನೆ ನೀಡಿದೆ. ಈ ಹಿಂದೆ ಮತದಾರರಾಗಿದ್ದವರು ಮತ್ತೆ ಫಾರ್ಮ್-6 ಸಲ್ಲಿಸುವುದನ್ನು 'ಸುಳ್ಳು ಮಾಹಿತಿ ಅಥವಾ ಪ್ರಮಾಣಪತ್ರ ನೀಡಿಕೆ' ಎಂದು ಪರಿಗಣಿಸಲಾಗುವುದಿಲ್ಲ ಹಾಗೂ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗುವುದಿಲ್ಲ ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ.

ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ ಹಳೆಯ ಮತದಾರರೂ ಫಾರ್ಮ್-6 ಸಲ್ಲಿಸಬಹುದು; ಚುನಾವಣಾ ಆಯೋಗ ಸ್ಪಷ್ಟನೆ
ಚುನಾವಣಾ ಆಯೋಗImage Credit source: PTI
ಸುಷ್ಮಾ ಚಕ್ರೆ
|

Updated on: Nov 03, 2026 | 10:58 PM

Share

ನವದೆಹಲಿ, ನವೆಂಬರ್ 3: ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ಹೊಂದಿರುವ ಹಾಲಿ ಮತದಾರರು ತಮ್ಮ ವಿವರಗಳ ತಿದ್ದುಪಡಿ ಅಥವಾ ಮತಕ್ಷೇತ್ರ ಬದಲಾವಣೆಗಾಗಿ ‘ಫಾರ್ಮ್-6’ ಬಳಸಬಹುದು ಎಂದು ಭಾರತೀಯ ಚುನಾವಣಾ ಆಯೋಗ ಪ್ರಮುಖ ಸ್ಪಷ್ಟನೆಯೊಂದನ್ನು ನೀಡಿದೆ. ಎಸ್​ಐಆರ್​ ಪ್ರಕ್ರಿಯೆಗಳ ವೇಳೆ ಸಾರ್ವಜನಿಕರಲ್ಲಿ ಉಂಟಾಗುತ್ತಿದ್ದ ಗೊಂದಲಗಳನ್ನು ನಿವಾರಿಸಲು ಚುನಾವಣಾ ಆಯೋಗವು ಈ ಮಹತ್ವದ ಮಾರ್ಗದರ್ಶನ ಬಿಡುಗಡೆ ಮಾಡಿದೆ.

ಫಾರ್ಮ್-6ರಲ್ಲಿ “ಮೊದಲ ಬಾರಿಗೆ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುತ್ತಿದ್ದೇನೆ” ಎಂಬ ಸ್ವಯಂ ದೃಢೀಕರಣ ಇರುತ್ತದೆ. ಹೀಗಾಗಿ, ಕರಡು ಪಟ್ಟಿಯಿಂದ ಹೆಸರು ಕಳೆದುಕೊಂಡ ಹಳೆಯ ಮತದಾರರು ಈ ನಮೂನೆಯನ್ನು ಭರ್ತಿ ಮಾಡಿದರೆ ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 31ರ ಅಡಿಯಲ್ಲಿ ಸುಳ್ಳು ಪ್ರಮಾಣಪತ್ರ ನೀಡಿದ ಆರೋಪಕ್ಕೆ ಒಳಗಾಗಬಹುದು ಎಂಬ ಭಯದಿಂದ ಅರ್ಜಿ ಸಲ್ಲಿಸಲು ಹಿಂಜರಿಯುತ್ತಿದ್ದರು. ಆದರೆ, ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ವಿಪಕ್ಷದ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ; ಎಸ್‌ಐಆರ್ ಪರ ಸುಪ್ರೀಂ ಕೋರ್ಟ್​ನಲ್ಲಿ ಸರ್ವಾನುಮತದ ಸಮರ್ಥನೆ

ಚುನಾವಣಾ ಆಯೋಗ ನೀಡಿರುವ ಸ್ಪಷ್ಟನೆಯ ಪ್ರಮುಖ ಅಂಶಗಳು:

ಸುಳ್ಳು ಪ್ರಮಾಣಪತ್ರವೆಂದು ಪರಿಗಣಿಸಲಾಗುವುದಿಲ್ಲ: ಕರಡು ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟ ಮತದಾರರು ಅಂತಿಮ ಪಟ್ಟಿಯಲ್ಲಿ ಮರುಸೇರ್ಪಡೆಯಾಗಲು ಫಾರ್ಮ್-6 ಸಲ್ಲಿಸುವುದನ್ನು ಸ್ವತಃ ‘ಸುಳ್ಳು ಪ್ರಮಾಣಪತ್ರ’ ಎಂದು ಪರಿಗಣಿಸುವುದಿಲ್ಲ.

ಕಾನೂನು ಕ್ರಮದಿಂದ ವಿನಾಯಿತಿ: ಕೇವಲ ಹಳೆಯ ಮತದಾರರಾಗಿದ್ದು ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿ ಫಾರ್ಮ್-6 ಸಲ್ಲಿಸಿದ್ದಾರೆ ಎಂಬ ಒಂದೇ ಕಾರಣಕ್ಕೆ, ಮತದಾರರ ನೋಂದಣಿ ಅಧಿಕಾರಿಗಳು (ERO) ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 31ರ ಅಡಿಯಲ್ಲಿ ಅವರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಅಥವಾ ಅಭಿಯೋಜನೆ ಕೈಗೊಳ್ಳುವಂತಿಲ್ಲ.

ದೆಹಲಿ ಹೈಕೋರ್ಟ್ ತೀರ್ಪು ಉಲ್ಲೇಖ: ಅಕ್ಟೋಬರ್ 14ರಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ಆಯೋಗ, “ಶಿಕ್ಷೆಯಾಗಬಹುದು ಎಂಬ ಆತಂಕ ತಪ್ಪು ತಿಳುವಳಿಕೆಯಿಂದ ಕೂಡಿದ್ದಾಗಿದೆ” ಎಂದು ಸ್ಪಷ್ಟಪಡಿಸಿದೆ. ಮತದಾರರು ಬೇರೆ ಎಲ್ಲಾದರೂ ಹೆಸರು ನೋಂದಾಯಿಸಿಕೊಂಡು ಅಕ್ರಮ ಎಸಗಿದ್ದರೆ ಮಾತ್ರ ಅವರ ವಿರುದ್ಧ ಕ್ರಮ ಜರುಗಲಿದೆ.

ಇದನ್ನೂ ಓದಿ: ಚುನಾವಣಾ ಆಯೋಗದ ಅಧಿಕಾರಿಯ ವಿರುದ್ಧ ಆಯುಕ್ತರ ದೂರು: ಕ್ರಮ ಕೈಗೊಳ್ಳಲು ಸಂಪುಟ ಸಚಿವಾಲಯ ನಕಾರ, ಆರ್‌ಟಿಐ ಮೂಲಕ ಬಯಲಾಯ್ತು ಮಾಹಿತಿ

ಚುನಾವಣಾ ಆಯೋಗದ ಈ ಹೊಸ ಸ್ಪಷ್ಟನೆಯಿಂದಾಗಿ, ಪರಿಷ್ಕರಣೆಯ ವೇಳೆ ಹೆಸರು ಕಳೆದುಕೊಂಡ ಲಕ್ಷಾಂತರ ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಮರಳಿ ಸೇರಿಸಲು ಅನುಕೂಲವಾಗಲಿದೆ.

ಹಾಗೇ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು, “ಸುಪ್ರೀಂ ಕೋರ್ಟ್‌ನಿಂದ ಅನುಮೋದನೆ ಪಡೆಯದ ಯಾವುದೇ ಫಾರ್ಮ್-6 ತಿದ್ದುಪಡಿಗಳು ಮಾನ್ಯವಾಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ