ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರು ಶವವಾಗಿ ಪತ್ತೆಯಾಗಿದ್ದಾರೆ. ರಾಮ ಜನ್ಮಭೂಮಿ ಆವರಣದ ಹೈ ಸೆಕ್ಯುರಿಟಿ ವಲಯದ ಕೊಠಡಿಯೊಂದರಲ್ಲಿ ಗುರುವಾರ ಕತ್ತು ಸೀಳಿದ ಸ್ಥಿತಿಯಲ್ಲಿ ಅರ್ಚಕರ ಶವ ಪತ್ತೆಯಾಗಿದೆ. ಯಾರೋ ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ರಾಮ್ ಸಹ್ರೇ ಅವರ ಕೋಣೆಗೆ ಯಾರೋ ಹೊರಗಿನವರು ಪ್ರವೇಶ ಮಾಡಲು ಸಾಧ್ಯವಿಲ್ಲ.

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ
ಹನುಮಾನ್ ಮಂದಿರ
Follow us
ನಯನಾ ರಾಜೀವ್
|

Updated on: Oct 19, 2023 | 1:00 PM

ಅಯೋಧ್ಯೆಯ ಹನುಮಾನ್​ಗರ್ಹಿ ದೇವಸ್ಥಾನದ ಅರ್ಚಕರು ಶವವಾಗಿ ಪತ್ತೆಯಾಗಿದ್ದಾರೆ. ರಾಮ ಜನ್ಮಭೂಮಿ ಆವರಣದ ಹೈ ಸೆಕ್ಯುರಿಟಿ ವಲಯದ ಕೊಠಡಿಯೊಂದರಲ್ಲಿ ಗುರುವಾರ ಕತ್ತು ಸೀಳಿದ ಸ್ಥಿತಿಯಲ್ಲಿ ಅರ್ಚಕರ ಶವ ಪತ್ತೆಯಾಗಿದೆ. ಯಾರೋ ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ರಾಮ್ ಸಹ್ರೇ ಅವರ ಕೋಣೆಗೆ ಯಾರೋ ಹೊರಗಿನವರು ಪ್ರವೇಶ ಮಾಡಲು ಸಾಧ್ಯವಿಲ್ಲ.

ದಾಸ್ ಹನುಮಾನ್ ಗರ್ಹಿ ದೇವಸ್ಥಾನದ ಪಕ್ಕದ ಕೋಣೆಯಲ್ಲಿ ಇಬ್ಬರು ಶಿಷ್ಯರೊಂದಿಗೆ ತಂಗಿದ್ದರು. ಶಂಕಿತರಲ್ಲಿ ಒಬ್ಬನನ್ನು ಪ್ರಶ್ನಿಸಲಾಗುತ್ತಿದ್ದು, ಎರಡನೆಯವನು ಕಾಣೆಯಾಗಿದ್ದಾನೆ ಎನ್ನಲಾಗಿದೆ. ಎರಡನೇ ಶಂಕಿತನ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ರಾಜ್ ಕರಣ್ ನಯ್ಯರ್ ಹೇಳಿದ್ದಾರೆ.

ಘಟನೆ ಬಗ್ಗೆ ಬೆಳಗ್ಗೆ 7 ಗಂಟೆಗೆ ಮಾಹಿತಿ ಲಭ್ಯವಾಗಿತ್ತು, ಬೆಳಗಿನ ಪ್ರಾರ್ಥನೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಕರೆಯಲು ಹೋದಾಗ ಅವರ ದೇಹವು ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ದಾಸ್ ಹನುಮಾನ್ ಗರ್ಹಿ ದೇವಸ್ಥಾನದ ಅರ್ಚಕರಲ್ಲಿ ಒಬ್ಬರಾಗಿದ್ದರು.

ಮತ್ತಷ್ಟು ಓದಿ: ಬೆಂಗಳೂರು: ಆರ್ಡರ್ ಕೊಟ್ಟ ಕೇಕ್​ನಲ್ಲಿ ಸ್ಪೆಲಿಂಗ್ ಮಿಸ್ಟೇಕ್: ಸಿಬ್ಬಂದಿಗೆ ಚಾಕು ಇರಿದು ವ್ಯಕ್ತಿ ಪರಾರಿ

ಅವರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ. ಹತ್ಯೆಯ ಹಿಂದಿನ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಶಿಷ್ಯರ ಜತೆ ಘರ್ಷಣೆಯಾಗಿತ್ತು ಎಂದು ಅಲ್ಲಿದ್ದವರು ಯಾರೋ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ