AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಮುಖ ಆಸ್ತಿ; ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶಶಿ ತರೂರ್

ಆಪರೇಷನ್ ಸಿಂಧೂರ್ ಸಮಯದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿಯನ್ನು "ಭಾರತದ ಪ್ರಮುಖ ಆಸ್ತಿ" ಶಶಿ ತರೂರ್ ಬಣ್ಣಿಸಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯದ ಮೇಲೆ ಭಾರತ ನಡೆಸಿದ ದಾಳಿಯ ನಂತರ 5 ರಾಷ್ಟ್ರಗಳ ರಾಜತಾಂತ್ರಿಕ ಸಂಪರ್ಕದ ಭಾಗವಾಗಿದ್ದ ಶಶಿ ತರೂರ್ ಭಯೋತ್ಪಾದನೆ ವಿರುದ್ಧ ಎನ್​ಡಿಎ ಸರ್ಕಾರದ ನಿಲುವನ್ನು ತಿಳಿಸಿದ್ದರು.

ಭಾರತದ ಪ್ರಮುಖ ಆಸ್ತಿ; ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶಶಿ ತರೂರ್
Shashi Tharoor Pm Modi
ಸುಷ್ಮಾ ಚಕ್ರೆ
|

Updated on: Jun 23, 2025 | 4:43 PM

Share

ನವದೆಹಲಿ, ಜೂನ್ 23: ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾರ್ವಜನಿಕವಾಗಿ ಹೊಗಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿ ಸರ್ಕಾರದ ಜಾಗತಿಕ ರಾಜತಾಂತ್ರಿಕ ಕ್ರಮವಾದ ಆಪರೇಷನ್ ಸಿಂಧೂರ್ (Operation Sindoor) ಸಂದರ್ಭದಲ್ಲಿ ಅವರನ್ನು “ಭಾರತದ ಪ್ರಮುಖ ಆಸ್ತಿ” ಎಂದು ಕರೆದಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡ ಕಾರ್ಯಾಚರಣೆಯ ನಂತರ ಭಾರತದ ನಿಲುವನ್ನು ವಿವರಿಸುವ ಗುರಿಯನ್ನು ಹೊಂದಿದ್ದ ಭಾರತದ ಸಂಸದರ ನಿಯೋಗದಲ್ಲಿ ಶಶಿ ತರೂರ್ (Shashi Tharoor) ಕೂಡ ಇದ್ದರು.

ಪ್ರಮುಖ ಇಂಗ್ಲಿಷ್ ಪತ್ರಿಕೆಯಲ್ಲಿ ಪ್ರಕಟವಾದ ಅಂಕಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಮೋದಿಯವರ ಶಕ್ತಿ, ಚೈತನ್ಯ ಮತ್ತು ತೊಡಗಿಸಿಕೊಳ್ಳುವ ಇಚ್ಛೆಯನ್ನು ಶಶಿ ತರೂರ್ ಶ್ಲಾಘಿಸಿದ್ದಾರೆ. ಈ ಗುಣಗಳು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಬಲವಾದ ಪ್ರಯೋಜನವನ್ನು ನೀಡುತ್ತವೆ ಎಂದು ಹೇಳಿದ್ದಾರೆ. “ವಿಶ್ವ ವೇದಿಕೆಯಲ್ಲಿ ಭಾರತದ ಪತಾಕೆ ಹಾರಿಸಲು ಮೋದಿ ಅವರಿಗೆ ಹೆಚ್ಚಿನ ಬೆಂಬಲ ಬೇಕು” ಎಂದು ತರೂರ್ ಬರೆದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಶಶಿ ತರೂರ್

ಇದನ್ನೂ ಓದಿ
Image
ಅಸ್ಸಾಮಿಗಳು ರಾಜ್ಯದ ಹೊರಗೆ ಮೃತಪಟ್ಟರೆ ಶವವನ್ನು ಮನೆಗೆ ತಲುಪಿಸುವ ಯೋಜನೆ
Image
ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ
Image
ಮಗಳು ಬೇರೆ ಜಾತಿಯವನ ಮದುವೆಯಾಗಿದ್ದಕ್ಕೆ ಕುಟುಂಬಕ್ಕೆ ಇದೆಂಥಾ ಶಿಕ್ಷೆ
Image
ಆರ್ಟ್ ಆಫ್ ಲಿವಿಂಗ್ ನೇತೃತ್ವದಲ್ಲಿ 1500ಕ್ಕೂ ಹೆಚ್ಚು ಸ್ಥಳಗಳಲ್ಲಿ ಯೋಗ

ಈ ಹಿಂದೆ ಮೋದಿ ಕಳುಹಿಸಿದ್ದ ಸಂಸದರ ನಿಯೋಗದ ಭಾಗವಾಗಿದ್ದ ಶಶಿ ತರೂರ್ ವಿದೇಶಗಳಲ್ಲಿ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಕ್ಕಾಗಿ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬಳಿಕ ಶಶಿ ತರೂರ್ ಕೂಡ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯಗಳಿರುವುದು ನಿಜ, ಆದರೆ ಅದನ್ನು ಬಹಿರಂಗವಾಗಿ ಚರ್ಚಿಸಲು ಇಷ್ಟವಿಲ್ಲ ಎಂದಿದ್ದರು. ಅದರ ಬೆನ್ನಲ್ಲೇ ಮತ್ತೊಮ್ಮೆ ಅವರು ಮೋದಿಯನ್ನು ಹೊಗಳಿದ್ದಾರೆ.

ಶಶಿ ತರೂರ್ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದೊಳಗಿನಿಂದ ಟೀಕೆಗೆ ಗುರಿಯಾಗಿವೆ. ಅದರಲ್ಲೂ ವಿಶೇಷವಾಗಿ ಅವರು ಹಿಂದಿನ ಯುಪಿಎ ಯುಗದ ಸರ್ಜಿಕಲ್ ಸ್ಟ್ರೈಕ್‌ಗಳೊಂದಿಗೆ ಮೋದಿ ಸರ್ಕಾರದ ರಾಜತಾಂತ್ರಿಕ ನಿರ್ವಹಣೆಯನ್ನು ಹೋಲಿಸಿದ ನಂತರ ಕಾಂಗ್ರೆಸ್​ನಿಂದ ತೀವ್ರ ಟೀಕೆಗೆ ಗುರಿಯಾದರು. ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಅವರು ಕಾಂಗ್ರೆಸ್‌ನ ಸಾಧನೆಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಮತ್ತು ಬಿಜೆಪಿ ಜೊತೆ ತುಂಬಾ ನಿಕಟವಾಗಿ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಶಶಿ ತರೂರ್ ಅವರು ಆ ಟೀಕೆಗಳನ್ನು ತಪ್ಪು ವ್ಯಾಖ್ಯಾನ ಎಂದು ತಳ್ಳಿಹಾಕಿದ್ದರು.

ಇದನ್ನೂ ಓದಿ: ಊಟ ಚೆನ್ನಾಗಿತ್ತು ಅನ್ಸುತ್ತೆ; ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ

ಜೂನ್ 11ರಂದು ಆಪರೇಷನ್ ಸಿಂಧೂರ್ ಸಂಪರ್ಕವನ್ನು ಪೂರ್ಣಗೊಳಿಸಿದ ನಂತರ ಶಶಿ ತರೂರ್ ಪ್ರಧಾನಿ ಮೋದಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಇತರ 7 ಬಹು-ಪಕ್ಷ ನಿಯೋಗಗಳು ಸಹ ಪ್ರಧಾನಿಯೊಂದಿಗೆ ಇದೇ ರೀತಿಯ ಸಭೆಗಳನ್ನು ನಡೆಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ