AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ

ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ
ಶ್ರೀಲಂಕಾ ಅಧ್ಯಕ್ಷ ಗೋಟಬಾಯ ರಾಜಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 14, 2021 | 2:56 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಷ ಶನಿವಾರ ದೂರವಾಣಿ ಮಾತುಕತೆ ಮೂಲಕ ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಎರಡೂ ದೇಶಗಳ ನಡುವಣ ಸಂಬಂಧಗಳಲ್ಲಿ ಈಚೆಗೆ ನಡೆದ ಪ್ರಮುಖ ಬೆಳವಣಿಗೆಳು ಮತ್ತು ಹಾಲಿ ಚಾಲ್ತಿಯಲ್ಲಿರುವ ವಿವಿಧ ಯೋಜನೆಗಳ ಬಗ್ಗೆಯೂ ಎರಡೂ ದೇಶಗಳ ಮುಖ್ಯಸ್ಥರು ಮಾತನಾಡಿದರು ಎಂದು ಹೇಳಿಕೆ ತಿಳಿಸಿದೆ. ‘ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ಅವರೊಂದಿಗೆ ದೂರವಾಣಿ ಸಂಭಾಷಣೆ ಮೂಲಕ ಕೋವಿಡ್-19ರ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರ ಬಗ್ಗೆ ಚರ್ಚಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ನೆರೆಹೊರೆಯವರಿಗೆ ಮೊದಲ ಆದ್ಯತೆ’ ಎಂಬ ಭಾರತದ ನೀತಿಗೆ ಶ್ರೀಲಂಕಾ ಎಷ್ಟು ಮುಖ್ಯ ಎಂಬ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭ ಶ್ರೀಲಂಕಾ ಅಧ್ಯಕ್ಷರಿಗೆ ವಿವರಿಸಿದರು ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

ಚೀನಾ ಮತ್ತು ಭಾರತದ ಸಂಬಂಧಗಳು ಬದಲಾದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದಲ್ಲಿ ಪಾರಮ್ಯ ಉಳಿಸಿಕೊಳ್ಳಲು ಎರಡೂ ದೇಶಗಳು ಶ್ರೀಲಂಕಾವನ್ನು ಓಲೈಸುತ್ತಿವೆ. ಶ್ರೀಲಂಕಾಕ್ಕೆ ಚೀನಾ ದೊಡ್ಡಮೊತ್ತದ ಸಾಲ ನೀಡಿ ಒಂದು ಬಂದರನ್ನು ಗುತ್ತಿಗೆಗೆ ಪಡೆದುಕೊಂಡಿದೆ. ಭಾರತವೂ ಶ್ರೀಲಂಕಾದಲ್ಲಿ ಬಂದರು ಅಭಿವೃದ್ಧಿಪಡಿಸುತ್ತಿದೆ.

ಚೀನಾದ ಪಾರಮ್ಯಕ್ಕೆ ಕಡಿವಾಣ ಹಾಕಲೆಂದು ಭಾರತ, ಜಪಾನ್, ಆಸ್ಟ್ರೇಲಿಯಾ ಹಾಗೂ ಅಮೆರಿಕ ದೇಶಗಳು ಜತೆಗೂಡಿ ರಚಿಸಿಕೊಂಡಿರುವ ಕ್ವಾಡ್​ ಒಕ್ಕೂಟದ ಹಲವು ಚಟುವಟಿಕೆಗಳಿಗೂ ಹಿಂದೂ ಮಹಾಸಾಗರವು ವೇದಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಷ ನಡುವೆ ನಡೆದ ಸಂಭಾಷಣೆ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!

Published On - 2:54 pm, Sun, 14 March 21

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ