Baarisu Kannada Dim Dimava: ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿದ ಪ್ರಧಾನಿ ಮೋದಿ

ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘ ಆಯೋಜಿಸಿರುವ ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ "ಬಾರಿಸು ಕನ್ನಡ ಡಿಂಡಿಮವ" ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.

Follow us
ಗಂಗಾಧರ​ ಬ. ಸಾಬೋಜಿ
|

Updated on:Feb 25, 2023 | 7:43 PM

ದೆಹಲಿ: ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘ ಆಯೋಜಿಸಿರುವ ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ “ಬಾರಿಸು ಕನ್ನಡ ಡಿಂಡಿಮವ” (Baarisu Kannada Dim Dimava) ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಬಳಿಕ ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂದು ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು. ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕ ಜನರ ಕೊಡುಗೆ ಸಾಕಷ್ಟಿದೆ. ಹನುಮಂತ ಇಲ್ಲದೇ ರಾಮ ಇಲ್ಲ ರಾಮಾಯಣವೂ ಇಲ್ಲ. ಮಧ್ಯ ಕಾಲದಲ್ಲಿ ವಿದೇಶಿಗರು ಸೋಮನಾಥ ದೇವಸ್ಥಾನ ಮೇಲೆ ದಾಳಿ ಮಾಡಿದರು. ಸ್ವಾತಂತ್ರ್ಯ ಸಿಕ್ಕ ಬಳಿಕವೂ ಕಾಶಿ ವಿವಿಯ ಮೊದಲ ಕನ್ನಡಿಗರು ಏಕ್​ ಭಾರತ್ ಶ್ರೇಷ್ಠ ಭಾರತದ ಮಂತ್ರವನ್ನು ಗೆದ್ದಿದ್ದಾರೆ. ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ನಾವು ಕೇಳಿದೆವು. ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೇ ಇಡೀ ಭಾರತ ಹಾಗೂ ಕರ್ನಾಟಕದ ವಿವರಣೆಯನ್ನು ಒಳಗೊಂಡಿದೆ. ಭಾರತ ಇಂದು ಜಿ-20 ಅಧ್ಯಕ್ಷತೆಯನ್ನು ವಹಿಸುತ್ತಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

ಕರ್ನಾಟಕದ ಅಭಿವೃದ್ಧಿಗೆ ಮೊದಲ ಆದ್ಯತೆ

ಕರ್ನಾಟಕದ ಅಭಿವೃದ್ಧಿ ಆದ್ಯತೆಯಾಗಿದೆ. ಮೊದಲು ಕರ್ನಾಟಕದಲ್ಲಿ ಸರ್ಕಾರ ಮಾಡಿ ಅಲ್ಲಿಂದ ಹಣ ಹೊರಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಇಲ್ಲಿಯ ಜನರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮೂರು ವರ್ಷದ ಅಭಿವೃದ್ಧಿಯಲ್ಲಿ 30 ಸಾವಿರ ಕೋಟಿ ಸರಕಾರ ನೀಡಿದೆ. ಕಾಂಗ್ರೆಸ್ ಹತ್ತು ವರ್ಷದ ಅವಧಿಯಲ್ಲಿ ಹನ್ನೊಂದು ಸಾವಿರ ಕೋಟಿ ನೀಡಿತ್ತು. ಪ್ರತಿ ವರ್ಷ ನಮ್ಮ ಸರ್ಕಾರ ರಸ್ತೆಗೆ ಐದು ಸಾವಿರ ಕೋಟಿ ನೀಡುತ್ತಿದೆ. ಕಾಂಗ್ರೆಸ್ ಐದು ವರ್ಷಕ್ಕೆ ಆರು ಸಾವಿರ ಕೋಟಿ ನೀಡುತ್ತಿತ್ತು ಎಂದರು.

ಇದನ್ನೂ ಓದಿ: ದೆಹಲಿಯಲ್ಲೂ ಕನ್ನಡ ಕಂಪು ನನಗೆ ಕಾಣಿಸುತ್ತಿದೆ, ಈ ನಾಡಲ್ಲಿ ಹುಟ್ಟಿದೇ ಸೌಭಾಗ್ಯ: ಸಿಎಂ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಮೂಲಕ ಮಧ್ಯ ಕರ್ನಾಟಕದ ಅಭಿವೃದ್ಧಿ ಮಾಡುತ್ತಿದೆ. ಇದರಿಂದ ಕರ್ನಾಟಕದ ವಿಕಾಸ ಬದಲಾಗಲಿದೆ. ಮುಂದಿನ 25 ವರ್ಷ ಮಹತ್ವದಾಗಿದೆ. ಮತ್ತಷ್ಟು ಮಹತ್ವದ ಕೆಲಸಗಳನ್ನು ಮಾಡಬಹುದು. ಕಲಿಕೆ ಮತ್ತು ಕಲೆ ಎರಡನ್ನು ಅಭಿವೃದ್ಧಿ ಮಾಡಬೇಕು. ಕನ್ನಡ ಭಾಷೆ ಓದುವವರಿಂದ ರಿಡೀಂಗ್ ಹ್ಯಾಬಿಟ್ ಚೆನ್ನಾಗಿರುತ್ತದೆ. ಈ ಕೌಶಲ್ಯ ಬೇರೆ ಭಾಷೆಗಳಲ್ಲಿ ಇಲ್ಲ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕೆಲವರು ದೇಶ ಒಡೆಯುವ ಕೆಲಸ ಮಾಡುತ್ತಾರೆ

ಕೆಲವರು ದೇಶವನ್ನು ಒಡೆಯುವ ಕೆಲಸ ಮಾಡುತ್ತಾರೆ. ದೇವರ ದಾಸಿಮಯ್ಯ ಸಂತರು ಇಷ್ಟ ಲಿಂಗದ ಮೂಲಕ ದೇಶವನ್ನು ಜೋಡಿಸುತ್ತಾರೆ. ರಾಣಿ ಅಬ್ಬಕ್ಕ, ಓಬವ್ವ, ಸಂಗೊಳ್ಳಿ ರಾಯಣ್ಣನಂತಹ ವೀರ ವಿರೋಧಿಗಳ ಮುಂದೆ ಗೋಡೆಯಂತೆ‌ ನಿಲ್ಲುತ್ತಾರೆ. ಕರ್ನಾಟಕ ಭಾರತವನ್ನು ಪ್ರೇರಿತಗೊಳಿಸಿದೆ. ನ್ಯಾಷನಲ್ ವಾರ್ ಮೆಮೊರಿಯಲ್, ಕರ್ತವ್ಯ ಪಥ್, ಪ್ರಧಾನಮಂತ್ರಿ ಮ್ಯೂಸಿಯಂ ಎಲ್ಲವೂ ನೋಡಿಕೊಂಡು ಹೋಗಬೇಕು. ನೋಡಿದ ಮೇಲೆ ನೀವೂ ಗರ್ವ ಪಡಲಿದ್ದಿರಿ. ಈ ಕೆಲಸ ಮೊದಲೇ ಆಗಬೇಕಿತ್ತು ಎನ್ನಲಿದ್ದೀರಿ.

ಇದನ್ನೂ ಓದಿ: Baarisu Kannada Dim Dimava Live: ಕರ್ನಾಟಕ ಹೊರತು ಪಡಿಸಿ ಭಾರತವನ್ನ ಊಹಿಸಲು ಸಾದ್ಯವಿಲ್ಲ: ಪ್ರಧಾನಿ ಮೋದಿ

ಇನ್ನು ಸಿರಿಧಾನ್ಯದ ಪ್ರಮುಖ ಕೇಂದ್ರ ಕರ್ನಾಟಕ. ರಾಗಿ ಕರ್ನಾಟಕ ಸಂಸ್ಕೃತಿಯ ಭಾಗ. ಬಿಎಸ್‌ವೈ ಕಾಲದಿಂದಲೂ ಸಿರಿಧಾನ್ಯ ಪ್ರಚಾರ ಮಾಡಲು ಆರಂಭಿಸಿತ್ತು. ಈಗ ಇಡಿ ವಿಶ್ವದಲ್ಲಿ ಇದರ ಬೇಡಿಕೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಣ್ಣ ಸಣ್ಣ ರೈತರಿಗೆ ಲಾಭ ಸಿಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:31 pm, Sat, 25 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ