Narendra Modi: ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಈ ಸಮ್ಮೇಳನ ಎರಡು ದಿನಗಳ ಕಾಲ ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿದೆ. ಇನ್ನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯಾಗಿ 75 ವರ್ಷಗಳ ಸ್ಮರಣಾರ್ಥವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು.

Narendra Modi: ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ
ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ ( ಫೋಟೋ ಪಿಟಿಐ)
Follow us
|

Updated on:Aug 31, 2024 | 11:48 AM

ದೆಹಲಿ, ಆ.31: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆ.31) ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಜಿಲ್ಲಾ ನ್ಯಾಯಾಂಗದ 2 ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಸಿಜೆಐ (chief justice of india) ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಕಪಿಲ್ ಸಿಬಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್‌ನ 75 ವರ್ಷಗಳ ಇತಿಹಾಸವು ಕೇವಲ ಒಂದು ಸಂಸ್ಥೆಯ ಪ್ರಯಾಣಕ್ಕಿಂತ ಹೆಚ್ಚು. ಇದು ಭಾರತೀಯ ಸಂವಿಧಾನದ ಪ್ರಯಾಣ ಮತ್ತು ಅದರ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಪ್ರಜಾಪ್ರಭುತ್ವವಾಗಿ ಭಾರತದ ಬೆಳವಣಿಗೆ ಹಾಗೂ ಪಕ್ವತೆಯನ್ನು ಪ್ರತಿಬಿಂಬಿಸುತ್ತದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯಾಗಿ 75 ವರ್ಷಗಳ ಸ್ಮರಣಾರ್ಥವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಸುಪ್ರೀಂ ಕೋರ್ಟ್ ಆಯೋಜಿಸಿರುವ ಎರಡು ದಿನಗಳ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಿಲ್ಲಾ ನ್ಯಾಯಾಂಗದಿಂದ 800 ಕ್ಕೂ ಹೆಚ್ಚು ನ್ಯಾಯಧೀಶರು ಭಾಗವಹಿಸಲಿದ್ದಾರೆ.

ಒಟ್ಟು 5 ಕಾರ್ಯಗಾರಗಳು ನಡೆಯಲಿದೆ. ಇದರಲ್ಲಿ ಮೂಲಭೂತ ಸೌಕರ್ಯ, ಮಾನವ ಸಂಪನ್ಮೂಲ, ಎಲ್ಲರಿಗೂ ಒಳಗೊಳ್ಳುವ ನ್ಯಾಯಾಲಯ ಕೊಠಡಿಗಳು, ನ್ಯಾಯಾಂಗ ಭದ್ರತೆ ಮತ್ತು ನ್ಯಾಯಾಂಗ ಸ್ವಾಸ್ಥ್ಯ, ಜಾತಿ ನಿರ್ವಹಣೆ ಮತ್ತು ನ್ಯಾಯಾಂಗ ತರಬೇತಿಯಂತಹ ಸಮಸ್ಯೆಗಳನ್ನು ಚರ್ಚಿಸಲಾಗುತ್ತದೆ.

ಇದನ್ನೂ ಓದಿ: ಕೇದಾರನಾಥದಲ್ಲಿ MI-17 ಹೆಲಿಕಾಪ್ಟರ್ ಪತನ

ಇನ್ನು ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಕುರಿತ ಅಧಿವೇಶನದಲ್ಲಿ ಜಿಲ್ಲಾ ನ್ಯಾಯಾಂಗಕ್ಕೆ ಬೇಕಾದ ಮೂಲಸೌಕರ್ಯ ಮತ್ತು ಮಾನವ ಬಂಡವಾಳವನ್ನು ಹೆಚ್ಚಿಸುವ ಮಾರ್ಗ ಬಗ್ಗೆ ಚಿಂತನೆ ನಡೆಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sat, 31 August 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!