ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

|

Updated on: Dec 25, 2023 | 11:39 AM

ಕ್ರಿಸ್ಮಸ್ ಹಬ್ಬಕ್ಕೆ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಎಕ್ಸ್​​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ದೇಶದಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಹೆಚ್ಚಾಗಿದ್ದು, ನೆನ್ನೆ ರಾತ್ರಿಯಿಂದ ಆಚರಣೆಯು ಶುರುವಾಗಿದೆ. ಇನ್ನು ಕ್ರಿಸ್ಮಸ್ ಹಬ್ಬಕ್ಕೆ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಯಾರಲ್ಲ ಶುಭಾಶಯಗಳನ್ನು ತಿಳಿಸಿದ್ದಾರೆ. ಇಲ್ಲಿದೆ ನೋಡಿ.

ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು
Follow us on

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, (Narendra Modi) ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ, ಅನೇಕ ಗಣ್ಯರು ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ್ದಾರೆ ಪ್ರಧಾನಿ ಮೋದಿ ಅವರು ದೇಶದಲ್ಲಿರುವ ಎಲ್ಲ ಕ್ರೈಸ್ತ ಸಮುದಾಯದ ಜನರಿಗೆ ಎಕ್ಸ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿ ನೀಡಲಿ. ಯೇಸುಕ್ರಿಸ್ತನ ಸಂದೇಶವನ್ನು ಕೂಡ ಪ್ರಧಾನಿ ಉಲ್ಲೇಖಿಸಿದ್ದಾರೆ. ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಹಬ್ಬವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ಮೋಡಿ ಎಕ್ಸ್​​​ನಲ್ಲಿ ಟ್ವೀಟ್​​​ ಮಾಡಿದ್ದಾರೆ.

ದೇಶದ ಎಲ್ಲ ರಾಜ್ಯಗಳಲ್ಲೂ, ಸಂಭ್ರಮದಿಂದ ಹಬ್ಬವನ್ನು ಆಚರಣೆ ಮಾಡುಕೊಳ್ಳುತ್ತಿದ್ದಾರೆ. ಕ್ರೈಸ್ತ ಸಮುದಾಯದ ಜನ ಚರ್ಚ್​​​​​ಗೆ ತೆರಲಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನು ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೆಡ್ರಲ್‌ನಲ್ಲಿಯೂ ಪ್ರಾರ್ಥನೆಗಳು ನಡೆಯುತ್ತಿದೆ.

ಡಿಸೆಂಬರ್ 25 ರಂದು ಕ್ರಿಸ್‌ಮಸ್​​ನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವಾಗಿ ಆಚರಿಸುತ್ತಾರೆ. ಕ್ರಿಸ್‌ಮಸ್ ಅನೇಕ ರಾಜಕಾರಣಿಗಳು ಹಾಗೂ ನಟ-ನಟಿಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಈ ಸಂತೋಷದ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹರಡುತ್ತದೆ. ನಾವು ಯೇಸುಕ್ರಿಸ್ತನ ಬೋಧನೆಗಳನ್ನು ನೆನಪಿಸಿಕೊಳ್ಳೋಣ ಮತ್ತು ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಸಂಕಲ್ಪ ಮಾಡೋಣ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೂಡ ಕ್ರಿಸ್‌ಮಸ್​​ ಶುಭಾಶಯ ತಿಳಿಸಿದ್ದಾರೆ. ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ನಾಡನ್ನು ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ ಎಂದು ಎಕ್ಸ್​​​​ ಶುಭಾಶಯಗಳನ್ನು ತಿಳಿಸಿದ್ದಾರೆ.

ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ ಬಿವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ್ದಾರೆ. “ಮಾನವ ಜಗತ್ತಿಗೆ ಅಹಿಂಸೆಯ ಮಹತ್ವ ತಿಳಿಸಿ ಶಾಂತಿ ಸಂದೇಶದ ಸಾರ ತಿಳಿಸಿದ ಯೇಸು ಕ್ರಿಸ್ತರನ್ನು ಈ ಪವಿತ್ರ ದಿನದಂದು ಸ್ಮರಿಸೋಣ. ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮೆಲ್ಲರ ಬಾಳಿನಲ್ಲಿ ಸಂತೋಷ, ಉತ್ತಮ ಆರೋಗ್ಯ ನೆಮ್ಮದಿಯನ್ನು ಹೊತ್ತುತರಲೆಂದು ಶುಭ ಹಾರೈಸುತ್ತೇನೆ ಎಂದು ಎಕ್ಸ್​​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಸರಳ ಸಲಹೆಗಳು!

ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ ಮಾಜಿ ಮುಖ್ಯಮಂತ್ರಿ ಹೆಚ್​​​​.ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಕ್ರಿಸ್​​​ಮಸ್​​​ ಹಬ್ಬ ಎಕ್ಸ್​​​ ಮೂಲಕ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಪವಿತ್ರ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಭಕ್ತಿ, ಸೌಹಾರ್ದತೆಯ ಸಂಗಮವಾಗಿದ್ದು, ಯೇಸು ಕ್ರಿಸ್ತರ ಜನ್ಮದಿನವಾದ ಈ ದಿನ ಪ್ರತಿಯೊಬ್ಬರಿಗೂ ಶಾಂತಿ, ಸಹಬಾಳ್ವೆ ಹಾಗೂ ಸಹಿಷ್ಣುತೆಯಿಂದ ಜೀವಿಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.